ಆಳಂದ: ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರವಾಗಿದೆ. ಇದರಿಂದ ದೂರವಾಗಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸ್ಥಳೀಯ ಎನ್‌ಸಿಡಿ ಕೌನ್ಸಲರ್ ಕಲ್ಯಾಣಿ ಅವರು ಹೇಳಿದರು.
ಪಟ್ಟಣದ ಹನುಮಾನ ದೇವಸ್ಥಾನ ಬಡಾವಣೆಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಂಬಾಕು ಆರೋಗ್ಯಕ್ಕೆ ಹಾನಿಕಾರವಾಗಿದ್ದು, ಇದರ ಸೇವನೆಯಿಂದ ಕ್ಯಾನ್ಸರ್‌ಗೆ ಪೂರಕವಾಗಿ ಲನ್ಸ್ ಹಾಳಾಗಿ ದೇಹಬರಡಾಗುತ್ತದೆ. ಮತ್ತು ಬಾಯಿಗೆ ಕ್ಯಾನ್ಸ್‌ರ ಬರುವ ಸಾಧ್ಯತೆ ಇರುತ್ತದೆ. ಒಮ್ಮೆ ಕ್ಯಾನ್ಸರ್‌ನಂತ ಮಾರಕ ರೋಗ ಅಂಟಿದದರೆ ದುಬಾರಿ ವೆಚ್ಚದ ಚಿಕಿತ್ಸೆ ನೀಡಬೇಕಾಗುತ್ತಿದೆ. ಇದರಿಂದ ಮುಂಜಾಗೃತ ಕ್ರಮವಾಗಿ ಮಾದಕ ವಸ್ತುಗಳಿಂದ ದೂರವಾಗಿದ್ದು ಆರೋಗ್ಯವನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ವೇದಿಕೆಯ ಮೇಲೆ ನಗರ ಆರೋಗ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂಗೀತಾ ಪಾಟೀಲ, ಎನ್‌ಸಿಡಿ ಡಾ. ಸೈಯದಾ, ಆರೋಗ್ಯ ಸಿಬ್ಬಂದಿ (ಎಎನ್‌ಎಂ), ಮಂಜುಳಾ, ರೇಣುಕಾ, ಇಂಧೀರಾ, ಸೌಭಾಗ್ಯ, ವಂದನಾ, ಅರ್ಚನಾ ಮತ್ತು ಅಂಗನವಾಡಿ ಕಾರ್ಯಕರ್ತೆ ಸುವರ್ಣ ಕುಂಬಾರ ಮತ್ತಿತರು ಉಪಸ್ಥಿತರಿದ್ದರು. ಇದೇ ವೇಳೆ ಸಾರ್ವಜನಿಕರ ಆರೋಗ್ಯ ತಪಾಸಣೆ ಕೈಗೊಂಡು ಔಷದೋಪಚಾರ ಕೈಗೊಳ್ಳಲಾಯಿತು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…