ಮಹಾನಗರಪಾಲಿಕೆ ಆಯುರನ್ನಾಗಿ ಐಎಎಸ್ ಅಧಿಕಾರಿ ನೇಮಕಕ್ಕೆ ಕನ್ನಡ ಭೂಮಿ ಆಗ್ರಹ

0
19

ಕಲಬುರಗಿ:  ಮಹಾನಗರ ಪಾಲಿಕೆಗೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಕೆಎಎಸ್ ಅಧಿಕಾರಿ ಶಂಕ್ರಣ್ಣ ವಣಿಕ್ಯಾಳ ಅವರನ್ನು ಲಂಚದ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.ಕೂಡಲೇ ಸರಕಾರ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು.ಐಎಎಸ್ ಅಧಿಕಾರಿಯನ್ನು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ನೇಮಕ ಮಾಡಬೇಕು.ಪಾಲಿಕೆಗೆ ಕೆಎಎಸ್ ಅಧಿಕಾರಿ ಆಯುಕ್ತರನ್ನಾಗಿ ನೇಮಕ ಮಾಡಿದ್ದು ನಿಯಮ ಬಾಹಿರವಾಗಿದೆ.ಈ ಹಿಂದೆ ಇದ್ದ ಐಎಎಸ್ ಅಧಿಕಾರಿ ಲೋಕೋಂಡೆ ಅವರನ್ನು ಎಕಾಏಕಿ ಇಲ್ಲಿಂದ ಎತ್ತಂಗಡಿ ಮಾಡಲಾಗಿದೆ.ಇದರ ಹಿಂದೆ ಸ್ಥಳೀಯ ಜನಪ್ರತಿನಿಧಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

Contact Your\'s Advertisement; 9902492681

ರಾಜ್ಯದ ಎಳು ಮಹಾನಗರ ಪಾಲಿಕೆಗಳಲ್ಲಿ ಒಂದಾದ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತ ಕುಂಠಿತಗೊಂಡಿದೆ.ಸ್ಥಳಿಯ ಸಂಸ್ಥೆ ಚುನಾವಣೆ ನಡೆದು ತಿಂಳುಗಳೆ ಕಳೆದರೂ ಮೇಯರ್ ಚುನಾವಣೆ ನಡೆದಿಲ್ಲ.ಮಹಾನಗರ ಅಭಿವೃದ್ದಿ ಕಾರ್ಯಗಳು ಮರಿಚಿಕೆಯಾಗಿವೆ.

ಕಲಬುರಗಿ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ.ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ನಡೆಯುತ್ತಿಲ್ಲ.ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ.ಸರಕಾರ ಕಡಿವಾಣ ಹಾಕುವ ಕೆಲಸ ಮಾಡಬೇಕು.ಐಎಸ್ ಶ್ರೇಣಿಯ ಅಧಿಕಾರಿಯನ್ನು ಆಯುಕ್ತರನ್ನಾಗಿ ನೇಮಿಸಬೇಕು ಎಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here