ಕಲಬುರಗಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ನೆಪದಲ್ಲಿ ಇತಿಹಾಸ ಪುರುಷರಾದ ಬಸವಣ್ಣ, ಪೆರಿಯಾರ್, ನಾರಾಯಣಗುರು ಮುಂತಾದವರ ಇತಿಹಾಸವನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದ್ದು, ಸರ್ಕಾರದ ಈ ನಡೆಯನ್ನು ವಿರೋಧಿಸಿ ಜೂನ್ 4ರಂದು ಬೆಳಗ್ಗೆ 11 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ ಮತ್ತು ಆರ್.ಜಿ. ಶೆಟಗಾರ ತಿಳಿಸಿದರು.
9ನೇ ತರಗತಿಯ ಸಮಾಜ ವಿಜ್ಞಾನ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಬಸವಣ್ಣನವರು ಉಪನಯನ ಮಾಡಿಕೊಂಡು ಕೂಡಲಸಂಗಮಕ್ಕೆ ತೆರಳಿದರು, ಗುರುಗಳಿಂದ ದೀಕ್ಷೆ ಪಡೆದರು ಮತ್ತು ವೀರಶೈವ ಮತ ಅಭಿವೃದ್ಧಿಪಡಿಸಿದರು ಎಂಬಿತ್ಯಾದಿ ಅಕ್ಷೇಪಾರ್ಹ ಸಂಗತಿಗಳಿದ್ದು, ಕೂಡಲೇ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.
ವೈದಿಕ ಧರ್ಮ ಪುನರ್ ಸ್ಥಾಪಿಸಲು ಹೊರಟಿರುವ ಸರ್ಕಾರ ಬಸವ ವಿರೋಧಿ ಹಾಗೂ ಲಿಂಗಾಯತ ವಿರೋಧಿಯಾಗಿದೆ. ಲಿಂಗಾಯತ ಸ್ವಾಮಿಗಳು ಮತ್ತು ಲಿಂಗಾಯತ ರಾಜಕಾರಣಿಗಳು ಇದನ್ನು ಖಂಡಿಸಬೇಕು. ಆಗಿರುವ ತಪ್ಪು ಹಾಗೂ ಲೋಪ ಸರಿಪಡಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ರವೀಂದ್ರ ಶಾಬಾದಿ ತಿಳಿಸಿದರು.
ಸಂಗಮೇಶ, ಬಸಣ್ಣ ಗುಣಾರಿ, ಶಿವಕುಮಾರ ಬಿದರಿ, ರವಿ ಸಜ್ಜನ್ ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…