ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್ ಅವರ ಕುರಿತು ಜೆಡಿಎಸ್ ಮುಖಂಡ ಕೃಷ್ಣಾ ರೆಡ್ಡಿ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಇದೊಂದು ದ್ವೇಶದ ರಾಜಕಾರಣ ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ದೇವೇಂದ್ರ ಸಿನ್ನೂರ ಖಂಡಿಸಿದ್ದಾರೆ.
ಇದನ್ನೂ ಓದಿ: ಕಸಾಪದಿಂದ ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆ ಕರಪತ್ರ ವಿತರಣೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕರ ಸೇವಾ ಅಭಿವೃದ್ದಿಯನ್ನು ಸಹಿಸದ ಕೃಷ್ಣಾ ರೆಡ್ಡಿ,ಅಸೆಂಬ್ಲಿ ಚುನಾವಣೆ ಹತ್ತಿರ ಬರುತ್ತಿದ್ದು ತಮ್ಮ ರಾಜಕೀಯ ಅಸ್ಮೀತೆಗಾಗಿ ಶಾಸಕರ ವಿರುದ್ಧ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಜನರು ಇಂತಹ ಸುಳ್ಳು ಆರೋಪಗಳನ್ನು ಯಾವುದೇ ಕಾರಣಕ್ಕೂ ಅಸ್ಪದ ನೀಡುವುದಿಲ್ಲ ,ಶಾಸಕರು ಕೆಕೆಆರ್ ಡಿಬಿ ಇಂದ ಕೈಗೊಂಡಿರುವ ಸಾಕಷ್ಟು ಅಭಿವೃದ್ಧಿ ಕೆಲಸಗಳು ತಲೆ ಎತ್ತಿ ನಿಂತಿವೆ ,ಇದನ್ನು ಸಹಿಸದ ಕೆಲವರು ಅವರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸೀನ್ನೂರ್ ಪ್ರಭಲವಾಗಿ ಖಂಡಿಸಿದ್ದಾರೆ.
ಇದನ್ನೂ ಓದಿ: ವಿಶ್ವವಿದ್ಯಾಲಯದ ಶೇಕಡಾ ೨೫ರಷ್ಟು ಆವರಣ ಹಸಿರುಮಯ: ಡಾ. ಬಿಡವೆ
ಶಾಸಕರ ವಿರುದ್ಧ ಮಾಡಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಮತ್ತು ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಲು ವಿರೋಧಿಗಳಿಗೆ ಯಾವುದೇ ಅಸ್ಪದ ಇಲ್ಲದ ಕಾರಣ ಇಂತಹ ಸುಳ್ಳು ಆರೋಪ ಮಾಡುವ ಮೂಲಕ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಅವರು ಈ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ಸವಿಧಾನದ ರಕ್ಷಣೆ ಸೌಹಾರ್ದ ಸಮಾಜಕ್ಕಾಗಿ ಭೀಮಾ ಅರ್ಮಿ ಪ್ರತಿಭಟನೆ
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…