ಅತೃಪ್ತ ಶಾಸಕರಿಗೆ ಸ್ಪೀಕರ್ ಬೀಗ್ ಶಾಕ್ ಸ್ಪೀಕರ್ ಸುದ್ದಿಗೋಷ್ಠಿಯ ಮುಖ್ಯಾಂಶಗಳು

0
107

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ನಿರ್ಧಾರವನ್ನು ಪ್ರಕಟಿಸಲು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಇಂದು ಸಂಜೆ ತಮ್ಮ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದರು.

Contact Your\'s Advertisement; 9902492681

ಪತ್ರಿಕಾಗೋಷ್ಠಿಯಲ್ಲಿ ಮೂವರು ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರಾಗಿರುವ ಆರ್. ಶಂಕರ್, ರಮೇಶ್ ಜಾರಕಿಹೊಳಿ ಮತ್ತು ಮಹೆಶ್ ಕುಮಟಳ್ಳಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಈ ಅನರ್ಹತೆ 15ನೇ ವಿಧಾನಸಭೆ ಅಸ್ತಿತ್ವದಲ್ಲಿ ಇರುವವರೆಗೆ ಈ ಅನರ್ಹತೆ ಎಂಬುದನ್ನೂ ಸ್ಪೀಕರ್ ಅವರು ಸ್ಪಷ್ಟಪಡಿಸಿದ್ದಾರೆ.

ಮುಖ್ಯಾಂಶಗಳು:

  • ರಾಜೀನಾಮೆಯನ್ನು ಸಲ್ಲಿಸಿರುವ ಇನ್ನುಳಿದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವನ್ನು ಕೆಲವೇ ದಿನಗಳಲ್ಲಿ ನಿರ್ಧರ
  • ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ ನ ಮೊರೆ ಹೋಗಲು ಸ್ವತಂತ್ರರಿದ್ದಾರೆ.
  • ರಾಜೀನಾಮೆ ನೀಡಿರುವ ಶಾಸಕರು ತಮ್ಮ ರಾಜೀನಾಮೆಯನ್ನು ವಾಪಾಸು ಪಡೆದುಕೊಂಡರೆ, ಈ ಕುರಿತು ಮಾತನಾಡಲು ಒಪ್ಪದ ಸ್ಪೀಕರ್.
  • ಶಾಸಕರೊಬ್ಬರಿಗೆ ತಮ್ಮ ಪಕ್ಷದ ನಿರ್ಧಾರಗಳ ಕುರಿತಾಗಿ ಭಿನ್ನಾಭಿಪ್ರಾಯಗಳಿದ್ದಲ್ಲಿ ಅದನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಬೇಕು.
  • ಅತೃಪ್ತ ಶಾಸಕರು ಕರ್ನಾಟಕ ವಿಧಾನ ಸಭಾ ನಿಯಮಾವಳಿಗೆ ಅನುಗುಣವಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿರಲಿಲ್ಲ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here