ಬಿಸಿ ಬಿಸಿ ಸುದ್ದಿ

ಜನಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಕಲಬುರಗಿ: ಪ್ರತಿಯೊಬ್ಬರು ತಮ್ಮ ಮಕ್ಕಳಂತೆ ಗಿಡ-ಮರವೂ ಬೆಳೆಸಿದರೆ ಪರಿಸರ ಸಂರಕ್ಷಣೆಯೊಂದಿಗೆ ಉಸಿರಾಟಕ್ಕೆ ಉತ್ತಮ ಆಮ್ಲಜನಕ ಪಡೆಯಲು ಸಾಧ್ಯ ಎಂದು ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಹೆಚ್‌ಕೆಇ ಸೊಸೈಟಿ ಆಡಳಿತ ಮಂಡಳಿ ಸದಸ್ಯರಾದ ಅರುಣಕುಮಾರ ಎಂ.ವೈ. ಪಾಟೀಲ್ ಹೇಳಿದರು.

ತಾಲೂಕಿನ ಫಿರೋಜಾಬಾದ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜನಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ, ಪರಿಸರ ದಿನಾಚರಣೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಸರ್ಕಾರಿ ಕನ್ನಡ ಪ್ರೌಢಶಾಲೆಗೆ ನಿವೇಶನಕ್ಕೆ ತಾಂತ್ರಿಕ ತೊಂದರೆಗಳು ಎದುರಾಗಿದ್ದು, ಶೀಘ್ರದಲ್ಲಿ ಅದನ್ನು ಬಗೆಹರಿಸಿ, ಪೀಠೋಪಕರಣಗಳು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಹೆಚ್‌ಕೆಸಿಸಿಐ ಗೌರವ ಕಾರ್ಯದರ್ಶಿ ಶರಣು ಪಪ್ಪಾ, ಶರಣಬಸವೇಶ್ವರ ಪದವಿ ಕಾಲೇಜಿನ ಉಪನ್ಯಾಸಕ ನಾನಾಸಾಹೇಬ್ ಹಚ್ಚಡದ ಮಾತನಾಡಿದರು. ಇದೇ ವೇಳೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಟ್ರಸ್ಟ್‌ನಿಂದ ಮೆಡಲ್ ನೀಡಿ ಸತ್ಕರಿಸಲಾಯಿತು.

ವೇದಿಕೆ ಮೇಲೆ ಫರಹತಾಬಾದ್ ಜಿಪಂ ಮಾಜಿ ಸದಸ್ಯ ದಿಲೀಪ ಆರ್. ಪಾಟೀಲ್, ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್, ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ತಿಬ್ಬಶೆಟ್ಟಿ, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಾಜಾ ಪಟೇಲ್, ಯೂಥ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣು ಹಾಗರಗುಂಡಗಿ, ಅರಣ್ಯ ಇಲಾಖೆಯ ಅನ್ಸಾರ್ ಪಟೇಲ್, ಮುಖ್ಯಗುರು ಅಲ್ಲಾವುದ್ದಿನ್ ಮತ್ತಿತರರಿದ್ದರು.

ಟ್ರಸ್ಟ್ ಅಧ್ಯಕ್ಷ ವಿಶ್ವನಾಥ ಹಿರೇಮಠ ಅಧ್ಯಕ್ಷತೆವಹಿಸಿ ಮಾತನಾಡಿದರು. ಟ್ರಸ್ಟ್ ಉಪಾಧ್ಯಕ್ಷ ಯುನೂಸ್ ಪಟೇಲ್ ಸ್ವಾಗತಿಸಿದರು. ಶಶಿಕಲಾ ಕಟ್ಟಿ ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಬಸವಲಿಂಗ ಹಾಲು, ಸಚಿನ್ ಮಾಮನಿ, ನಿವೃತ್ತ ಶಿಕ್ಷಕ ನಾಗಣ್ಣ ಧೂಳಬಾ, ಇಜಾಜ್ ಪಟೇಲ್, ಬಾಬು ಪವಾಡಿ, ಶಶಿಕಾಂತ ಕೊಡಚಿ, ಉಮೇಶ ಮಾಮನಿ, ರೇವಣಸಿದ್ದಪ್ಪ ಶ್ರೀಗಿರಿ, ಮಹಾದೇವಪ್ಪ ಭರ್ಮಾ, ಬಸವರಾಜ್ ಭಜಂತ್ರಿ ಸೇರಿದಂತೆ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago