ಕಲಬುರಗಿ: ಅಭಿವೃದ್ಧಿಯ ಆದ್ಯತೆಗಳನ್ನು ಗಮನದಲ್ಲಿಟ್ಟು ಮತಕ್ಷೇತ್ರದ ಎಲ್ಲ ಹಳ್ಳಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಶ್ರಮಿಸುತ್ತಿದ್ದೇನೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.
ಮಂಗಳವಾರ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ೨೦೨೧-೨೨ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ರೂ. ೧೦೦.೦೦ ಲಕ್ಷಗಳ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ನೇರ ಸವಾಲು ಹಾಕಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಈ ಸಂದರ್ಭದಲ್ಲಿ ಜೆಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣಿ, ಮುಖಂಡರಾದ ಶಿವುಪುತ್ರ ಕೊಟ್ಟರಕಿ, ಪಿಂಟು ಕಡಗಂಚಿ, ಸಂಗಯ್ಯ ಸ್ವಾಮಿ, ಸಿದ್ದು ಚಿತಲಿ, ಈರಣ್ಣ ಮೇತ್ರೆ, ವಿಠಲ ಜಮಾದಾರ, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರರಾದ ಅರುಣಕುಮಾರ ಬಿರಾದಾರ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.