ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಹೊಸ ಹೆಬ್ಬಾಳ ಗ್ರಾಮದಲ್ಲಿ ರೂ 96 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 6 ಕೋಣೆಗಳ ಹಾಗೂ ಶೌಚಾಲಯ ನಿರ್ಮಾಣ, ರೂ 34 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರೌಢಶಾಲೆಗೆ 2 ಕೋಣೆಗಳ ಹಾಗೂ ರೂ 24 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಪ್ರಾಥಮಿಕ ಶಾಲೆಗೆ 2 ಕೋಣೆಗಳ (ಒಟ್ಟು 1.54 ಕೋಟಿ ವೆಚ್ಚ) ನೂತನ ಕಟ್ಟಡಗಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಉದ್ಘಾಟನೆ ಮಾಡಿದರು.
ಇದೆ ಸಂದರ್ಭದಲ್ಲಿ ವಾಲಿಬಾಲ್, ಥ್ರೋ ಬಾಲ್, ಬಾಡ್ಮಿಂಟನ್, ಕ್ರಿಕೆಟ್ ಆಡಲು ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಡಿಕೆ ಇಟ್ಟಿದ್ದು, ಇನ್ನೆರಡು ದಿನಗಳಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ವಿದ್ಯಾರ್ಥಿಗಳಿಗೆ ಸರಿಯಾಗಿ ಮಧ್ಯಾಹ್ನ ಊಟದ ವ್ಯವಸ್ಥೆ ಸರಿಯಾಗಿ ಆಗುತ್ತಿದೆಯಾ? ಪಠ್ಯ ಪುಸ್ತಕ ಸರಬರಾಜು ಆಗಿಲ್ಲ ಅದಕ್ಕೆ ಏನು ಮಾಡುತ್ತಿದ್ದೀರಾ? ಎಂದು ಪರಿಶೀಲಿಸಲಾಯಿತು. ಇದಕ್ಕೆ ಉತ್ತರಿಸಿದ ಶಿಕ್ಷಕರು ಈ ಹಿಂದಿನ ಪಠ್ಯಗಳನ್ನೇ ಕಲಿಸಲಾಗುತ್ತಿದೆ. ಕೆಲವರಿಗೆ ಶೈಕ್ಷಣಿಕ ಚಟುವಟಿಕೆ ಜೊತೆಗೆ ಆಟ ಚಟುವಟಿಕೆಗಳಲ್ಲಿ ತೊಡಗಿಸಲಾಗುತ್ತಿದೆ. ತೊಂಚಿ, ಕಮಕನೂರು, ಸಾವಂತಖೇಡ ಹಾಗೂ ಜೀವನ ಮಾರಡಗಿ ಗ್ರಾಮಗಳಿಂದ ಶಾಲೆಯ ಸಮಯದಲ್ಲಿ ಬಸ್ ಸೌಲಭ್ಯವಿಲ್ಲದ್ದರಿಂದ ಮಕ್ಕಳು ನಡೆದುಕೊಂಡು ಬರುತ್ತಿದ್ದಾರೆ. ಆದಷ್ಟು ಬೇಗ ಬಸ್ ಸೌಲಭ್ಯ ಒದಗಿಸಲಾಗುವುದು. ಈ ಕುರಿತು ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಎಂ.ಡಿ. ಅವರೊಂದಿಗೆ ಮಾತನಾಡಿ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದೆನು.
ಇದನ್ನೂ ಓದ: ಹೊನಗುಂಟಾ ಗ್ರಾಮದಲ್ಲಿ ಜನಮನ ಸೆಳೆದ ಗ್ರಾಮೀಣ ಕ್ರೀಡಾಕೂಟ
ಈ ವೇಳೆ ಶಾಸಕ ಪ್ರಿಯಾಂಕ್ ಖರ್ಗೆ ಶಿಷ್ಠಾಚಾರವನ್ನು ಬದಿಗೊತ್ತಿ ಮಕ್ಕಳೊಂದಿಗೆ ಬೆರೆತು ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರು, ಭೀಮಣ್ಣ ಸಾಲಿ, ಬಸವರಾಜ ಹೇರೂರು, ಶಿವಾನಂದ ಪಾಟೀಲ, ರಮೇಶ ಮರಗೋಳ, ಮಾಪಣ್ಣ ಗಂಜಿಗೇರಿ, ಸುನೀಲ ದೊಡ್ಡಮನಿ, ಮಲ್ಲಪ್ಪ ಹೊಸಮನಿ ಸೇರಿದಂತೆ ಉಪಸ್ಥಿತರಿದ್ದರು.
ಇದನ್ನೂ ಓದಿ:ವೃತಿ ಶಿಕ್ಷಣ ಇಲಾಖೇಯ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿ ಮುಖಾಂತರ ಸಿಎಂಗೆ ಮನವಿ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…