ಸೇಡಂ: ಆಪತ್ಕಾಲದಲ್ಲಿಯೂ ಸಹ ಸೇವೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಂಬಳ ನೀಡದೇ ರಾಜ್ಯ ಸರಕಾರ ಸತಾಯಿಸುತ್ತಿರುವುದು ಖಂಡನೀಯ ಎಂದು ಜೆಡಿಎಸ್ ಅಭ್ಯರ್ಥಿ ಬಾಲರಾಜ ಗುತ್ತೇದಾರ ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಮಾತನಾಡಿದ ಅವರು, ದಿನನಿತ್ಯ ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ, ಜನರ ಆಶೋತ್ತರಗಳಿಗೆ ಸ್ಪಂಧಿಸುವ ಕೆಲಸ ಅಂಗಮವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮಾಡುತ್ತಾರೆ. ಆದರೆ ಅವರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ದೂರಿದ್ದಾರೆ. ಕೊರೋನಾ ಸಮಯದಲ್ಲಿ ತಮ್ಮ ಜೀವದ ಮೇಲಿನ ಹಂಗು ತೊರೆದು ದುಡಿದ ಕಾರ್ಯಕರ್ತರ ಇಂದಿನ ಪಾಡು ಹೇಳತೀರದಾಗಿದೆ. ಸರಕಾರ ಸಂಬಳ ನೀಡದೇ ಇರುವುದರಿಂದ ಜೀವನ ಸಾಗಿಸುವುದೇ ದುಸ್ತರವಾಗಿದೆ.
ಇದನ್ನೂ ಓದಿ: ಕಾನೂನು ಪಾಲಿಸಿ ಮಾದರಿಯಾಗಲಿ: ಚಂದ್ರಶೇಖರ್
ಕೂಡಲೇ ಈ ಕುರಿತು ಸರಕಾರ ಗಂಭೀರವಾಗಿ ಪರಿಗಣಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಸಮಯಕ್ಕೆ ಸಂಬಳ ಕಲ್ಪಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…