ಬೆಂಗಳೂರು: ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜೆಪಿ ನಗರದಲ್ಲಿ ಇಂದು ಮೊಮ್ಮಗನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ಇದನ್ನೂ ಓದಿ: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುತ್ತಿಲ್ಲ ಸಂಬಳ: ಬಾಲರಾಜ ಆಕ್ರೋಶ
ಕಾಂಗ್ರೆಸ್ ನವರು ಹೇಳಿದಕ್ಕೆಲ್ಲಾ ಒಪ್ಪಿಕೊಳ್ಳಬೇಕಾ?. ನಾವು 32 ಮಂದಿ ಶಾಸಕರು ಇದ್ದೇವೆ. ಕಾಂಗ್ರೆಸ್ ನವರು 25 ಶಾಸಕರಿದ್ದಾರೆ. ಯಾರ ಬಳಿ ಹೆಚ್ಚು ಮತಗಳು ಇವೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇವರ ದಬ್ಬಾಳಿಕೆಗೆಲ್ಲಾ ನಾವು ಬಗ್ಗಲು ಆಗುತ್ತಾ? ಎಂದು ನೇರವಾಗಿ ಅವರು ಹೇಳಿದರು.
ನಮ್ಮ ಅಭ್ಯರ್ಥಿ ಚುನಾವಣಾ ಕಣದಿಂದ ಯಾಕೆ ಹಿಂದೆ ಸರಿಯುತ್ತಾರೆ? ಎಂದು ಪ್ರಶ್ನಿಸಿದ ಅವರು, ನಾವೇನು ಸಂಧಾನ ಮಾಡುತ್ತಿಲ್ಲ. ನನ್ನ ಬಳಿ ಯಾರು ಸಂಧಾನಕ್ಕೆ ಬಂದಿದ್ದಾರೆ ಅನ್ನೋದನ್ನು ಅವರು ಹೇಳಲಿ ಎಂದರು.
ಇದನ್ನೂ ಓದಿ: ಉಪ ಪೊಲೀಸ್ ಆಯುಕ್ತರಿಂದ ವಿಶ್ವ ಪರಿಸರ ದಿನಾಚರಣೆ
ನಾವು ಮೊದಲು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ. ಇವರು ನಮ್ಮ ಜೊತೆ ಸಮಾಲೋಚನೆ ಮಾಡಿ ಅಭ್ಯರ್ಥಿ ಹಾಕಿದ್ದಾರಾ? ಬೆಂಬಲ ಕೊಡಿ ಅಂತಾ ನಮ್ಮ ಪಕ್ಷದ ಅಧ್ಯಕ್ಷರನ್ನು ಕೇಳಬಹುದಾಗಿತ್ತಲ್ಲವೇ? ಅವರು ಸಿ.ಎಂ.ಇಬ್ರಾಹಿಂ ಅವರಿಗೆ ಹಳೆಯ ಸ್ನೇಹಿತರು ಅಲ್ಲವೇ? ಒಂದು ಮಾತು ಅವರನ್ನು ಕೇಳಬಹುದಿತ್ತು ಎಂದು ಕುಮಾರಸ್ವಾಮಿ ಅವರು ಹೇಳಿದರು.
ಅಂತ ಯಾವ ಪ್ರಯತ್ನವನ್ನು ಮಾಡದೇ ಈಗ ಅಭ್ಯರ್ಥಿಯನ್ನು ವಾಪಸ್ ತೆಗೆದುಕೊಳ್ಳಲಿ ಅಂತಾ ಹೇಳುವುದು ಭಂಡತನ. ನಾವೇನು ಇವರ ಗುಲಾಮರಾ? ಎಂದು ಕಿಡಿಕಿದಿಯಾದ ಅವರು, ಕಾಂಗ್ರೆಸ್ ಗೆ ಹೋದ ಬಳಿಕ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲು ಎಷ್ಟು ಬಾರಿ ಬೆಂಬಲ ಕೊಟ್ಟಿದ್ದಾರೆ ಎಂದು ಕೇಳಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ತೀವ್ರ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಕಾನೂನು ಪಾಲಿಸಿ ಮಾದರಿಯಾಗಲಿ: ಚಂದ್ರಶೇಖರ್
ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ಸಿದ್ದರಾಮಯ್ಯ ಅವರು ಕೇವಲವಾಗಿ ಮಾತನಾಡಿದ್ದಾರೆ. ಕಾಟಾಚಾರದ ಅಧ್ಯಕ್ಷರನ್ನು ಮಾಡಿದ್ದಾರೆಂದು ಕುಹಕವಾಡಿದ್ದಾರೆ. ಇದು ಅವರ ಸಣ್ಣತನ. ನಮ್ಮ ಅಧ್ಯಕ್ಷರ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಕುಮಾರಸ್ವಾಮಿ ನೇರ ಮಾತುಗಳಲ್ಲಿ ತಾಕೀತು ಮಾಡಿದರು.
ನಾವು ಇಬ್ರಾಹಿಂ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದೇವೆ. ಅವರ ಹಿರಿತನ, ಅನುಭವದ ಬಗ್ಗೆ ನಮಗೆ ಅರಿವಿದೆ. ಇವರು (ಸಿದ್ದರಾಮಯ್ಯ) ಎಷ್ಟು ಜನ ಅಲ್ಪಸಂಖ್ಯಾತರ ಕುತ್ತಿಗೆ ಕೊಯ್ದಿಲ್ಲ ಹೇಳಿ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ: ಕಲಬುರಗಿ: ಪೊಲೀಸರಿಂದ ನೊಂದವರ (Victim) ದಿನ ಆಚರಣೆ
ಧಾರವಾಡದಲ್ಲಿ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ಮತ್ತೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತರನ್ನು ನಿಲ್ಲಿಸಿದ್ದೇವೆ, ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಹೇಳಿದ್ದಾರೆ. ಆದರೆ, ನಾವು ಅಲ್ಪಸಂಖ್ಯಾತರನ್ನು ನಿಲ್ಲಿಸಿದಾಗ ಅವರು ತಮ್ಮ ಪಕ್ಷದ ಮತಗಳನ್ನು ನೀಡಲಿಲ್ಲ. ಅವರು ಯಾವಾಗ ಮತ ನೀಡಿದ್ದಾರೆ ನಮಗೆ? ಹಿಂದೆ ಇಕ್ಬಾಲ್ ಅನ್ಸಾರಿ ಅವರನ್ನು ಮಂತ್ರಿ ಮಾಡಬೇಕೆಂದು ಹೊರಟಾಗ, ಯಾವುದೇ ಕಾರಣಕ್ಕೂ ಅವರನ್ನು ಮಂತ್ರಿ ಮಾಡಬಾರದು ಎಂದು ಹಠ ಹಿಡಿದು ಟವಲ್ ಕೊಡವಿಕೊಂಡು ಹೋದರು ಸಿದ್ದರಾಮಯ್ಯ. ಅಂತ ವ್ಯಕ್ತಿ ಈಗ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿ ಕಾರಿದರು.
ಸಂಧಾನ ಮಾಡುತ್ತಿರುವವರು ಯಾರು? ಯಾರು ಯಾರನ್ನು ಮತ ಕೇಳಿದ್ದಾರೆ? ಯಾರ ಬಳಿ ಯಾರನ್ನು ಕಳಿಸಿದ್ದಾರೆ? ಎನ್ನುವುದೆಲ್ಲ ಹೊರಗಡೆ ಬರಬೇಕು. ಗಾಳಿಯಲ್ಲಿ ಅಥವಾ ಪಾರಿವಾಳ ಜತೆ ಸಂದೇಶ ಕಳುಹಿಸಿದಂತೆ ಮಾಧ್ಯಮದವರ ಮೂಲಕ ಸಂದೇಶ ಕಳುಹಿಸಿದರೆ ಆಗುತ್ತಾ? ಎಂದು ಅವರು ಹೇಳಿದರು.
ಇದನ್ನೂ ಓದಿ: ಸರ್ಕಾರಿ ಕಾಲೇಜಿನ ನೂತನ ಕಟ್ಟಗಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಲೋಕಾರ್ಪಣೆ
ನಾನೇ ಸುರ್ಜೇವಾಲಾ ಜತೆ ಮಾತನಾಡಿದ್ದೇನೆ. ನನ್ನ ಅಭಿಪ್ರಾಯವನ್ನು ಅವರಿಗೆ ತಿಳಿಸಿದ್ದೇನೆ. ಈಗ ಸಿದ್ದರಾಮಯ್ಯ ಅವರು ಹೇಳುತ್ತಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದರು ಮಾಜಿ ಮುಖ್ಯಮಂತ್ರಿಗಳು.
ಹೆಚ್.ಡಿ.ದೇವೇಗೌಡರು ರಾಜ್ಯಸಭೆಗೆ ಹೋಗಬೇಕಾದ ಸನ್ನಿವೇಶವೇ ಬೇರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ನಮಗೆ ಫೋನ್ ಮಾಡಿ ಹೇಳಿದ್ದರು. ನಮ್ಮ ಹೈಕಮಾಂಡ್ ಹೇಳಿದ್ದಾರೆ, ದೇವೇಗೌಡರಂತಹ ಹಿರಿಯರು ಸಂಸತ್ತಿಗೆ ಹೋಗಬೇಕು ಎಂದು ಹೇಳಿದ್ದಾರೆ. ಹೀಗಾಗಿ ಬಿಜೆಪಿಯಿಂದ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಅವರು ಹೇಳಿದ್ದರು.
ಇದನ್ನೂ ಓದಿ: ಹೊನಗುಂಟಾ ಗ್ರಾಮದಲ್ಲಿ ಜನಮನ ಸೆಳೆದ ಗ್ರಾಮೀಣ ಕ್ರೀಡಾಕೂಟ
ಆಗ ಬಿಜೆಪಿ ಅಭ್ಯರ್ಥಿಯನ್ನು ಹಾಕದಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ಹಾಕಲಿಲ್ಲ. ನಾವು ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಮಾಡುವುದಕ್ಕಿಂತ ಮುಂಚೆಯೇ ಸೋನಿಯಾ ಗಾಂಧಿ ಅವರ ಜತೆ ದೇವೇಗೌಡರು ಮಾತನಾಡಿದ್ದಾರೆ. ನಾವು ಮೊದಲು ಕೇಳಿದ್ದೇವೆಯೇ ಹೊರತು ಅವರಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.
ಬಿಜೆಪಿಯನ್ನು ಸೋಲಿಸಲು ಎಲ್ಲದಕ್ಕೂ ಸಿದ್ದನಿದ್ದೇನೆ. ಕಾಂಗ್ರೆಸ್ ನಾಯಕರಿಗೆ ಇದಕ್ಕಿಂತ ಓಪನ್ ಆಫರ್ ಏನು ಕೊಡಲಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಯಾರಿಗಿದೆ ಇಲ್ಲಿ ಆತ್ಮಸಾಕ್ಷಿ? ನಾಳೆ ಮಧ್ಯಾಹ್ನದ ವೇಳೆಗೆ ಒಂದು ಸ್ಪಷ್ಟತೆ ದೊರೆಯುತ್ತದೆ. ನಮ್ಮ ಕುಪೇಂದ್ರ ರೆಡ್ಡಿ ಅವರು ಎಲ್ಲಾ ಶಾಸಕರನ್ನು ಭೇಟಿ ಮಾಡಿದ್ದಾರೆ. 32 ಶಾಸಕರು ಒಟ್ಟಾಗಿ ಎಲ್ಲರೂ ಮತ ನೀಡುತ್ತಾರೆ.
ನಮ್ಮ ಪಕ್ಷದ ಎಲ್ಲಾ ಶಾಸಕರು ಒಟ್ಟಾಗಿ ತೀರ್ಮಾನ ಮಾಡುತ್ತಾರೆ. ಜಿ.ಟಿ.ದೇವೇಗೌಡ, ಗುಬ್ಬಿ ವಾಸು, ಶ್ರೀನಿವಾಸಗೌಡ, ಶಿವಲಿಂಗೇಗೌಡ ಸೇರಿದಂತೆ ಹಲವು ಶಾಸಕರ ಜೊತೆಯೂ ರೆಡ್ಡಿ ಅವರು ಮಾತನಾಡಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅವರು ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್, ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ, ರಾಜ್ಯಸಭೆ ಅಭ್ಯರ್ಥಿ ಕುಪೇಂದ್ರ ರೆಡ್ಡಿ, ಶಾಸಕ ಅನ್ನದಾನಿ ಮುಂತಾದವರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…