ಚಿತ್ತಾಪುರ: ತಾಲೂಕಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರ ಕೊರತೆ ಇದ್ದು ಸರ್ಕಾರ ಕೂಡಲೇ ಈ ಕೊರತೆಯನ್ನು ನಿಗಿಸಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಸಿದ್ದುಗೌಡ ಅಫ್ಜಲಪುರ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ಗುರುವಾರ ಪಟ್ಟಣದ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರ ವಿರುದ್ಧ ಹರಿಹಾಯ್ದರು. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ.ರೈತರಿಗೆ ಕಡೆಗಣಿಸಿ ರೈತರಿಗೆ ಅನ್ಯಾಯ ಮಾಡುತ್ತಿದ್ದೆ.ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು ರೈತರಿಗೆ ಸೂಕ್ತವಾಗಿ ಬಿತ್ತನೆಯ ಬೀಜ ಹಾಗೂ ರಸಗೊಬ್ಬರ ಒದಗಿಸಲು ಸರ್ಕಾರಕ್ಕೆ ಆಗುತ್ತಿಲ್ಲ ಇದರಿಂದಾಗಿ ರೈತರು ಪರದಾಡುವಂತಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ರಸಗೊಬ್ಬರ ಕೊರತೆ ನೀಗಿಸಲು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಆಗ್ರಹ
ಕರೋನಾ ಸಂದರ್ಭದಲ್ಲಿ ಅನೇಕ ರೈತರು ಬೆಳೆದ ಬೆಳೆಗೆ ಸರಿಯಾಗಿ ಮಾರುಕಟ್ಟೆ ಇಲ್ಲದೆ ಸಮರ್ಪಕ ಬೆಲೆ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ. ತಾಲೂಕಿನಲ್ಲಿ ರೈತರಿಗೆ ಬರಬೇಕಾದ ಸುಮಾರು 80 ಲಕ್ಷ ಪರಿಹಾರ ಬಂದಿಲ್ಲಾ ಬಿಜೆಪಿ ಸರ್ಕಾರ ರೈತರನ್ನು ಕಡೆಗಣನೆ ಮಾಡುತ್ತಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಬ್ ಕಾ ಸಾತ್ ಸಬ್ ವಿಕಾಸ್ ಎಂದು ಪ್ರತಿ ಭಾಷಣದಲ್ಲಿ ಹೇಳಿತ್ತಾರೆ.ಎಲ್ಲಿದೆ ವಿಕಾಸ್, ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಬಿಜೆಪಿ ಸರ್ಕಾರ ಅನ್ಯಾಯ ಮಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ಕಳಪೆ ಗುಣಮಟ್ಟದ ಬೀಜ ಹಾಗೂ ಬ್ಲ್ಯಾಕ್ ನಲ್ಲಿ ರಸಗೊಬ್ಬರ ಮಾರಾಟವಾಗುತ್ತಿದ್ದು ಇದರಿಂದ ರೈತರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಹಾಗೂ ಕೃಷಿ ಸಚಿವರು ಇದಕ್ಕೆ ಕಡಿವಾಣ ಹಾಕಬೇಕು.ರೈತರಿಗೆ ಹೇರಳವಾಗಿ ಬಿತ್ತನೆಯ ಬೀಜ ಮತ್ತು ರಸಗೊಬ್ಬರ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜ ಪಾಟೀಲ ಹೇರೂರು,ಲಕ್ಷೀಕಾಂತ ಸಾಲಿ ಇದ್ದರು.