ಮಲೇರಿಯಾ ವಿರೋಧಿ ಮಾಸಾಚರಣೆ

0
89

ಅಫಜಲಪುರ: ತಾಲೂಕಿನ ಬಂದರವಾಡ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಗೊಬ್ಬುರ ಬಿ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಕಾರ್ಯಾಗಾರಕ್ಕೆ ಲೇಖನಗಳ ಆಹ್ವಾನ

Contact Your\'s Advertisement; 9902492681

ಮಲೇರಿಯಾ ರೋಗ ಹರಡುವಿಕೆ, ಲಕ್ಷಣ ಚಿಕಿತ್ಸೆ ಮುಂಜಾಗ್ರತಾ ಕ್ರಮಗಳ ಕುರಿತು ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಬಳೆ ಮಾತನಾಡಿ ವಿಶೇಷವಾಗಿ ನಮ್ಮ ಜಿಲ್ಲೆಯಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳಾದ ಮಲೇರಿಯಾ, ಡೆಂಗು, ಚಿಕನ್ ಗುನ್ಯಾ, ಆನೆಕಾಲು ರೋಗ, ಮೆದುಳು ಜ್ವರ ಇವುಗಳ ಜಾಗೃತಿ ವಹಿಸುವುದು ಅವಶ್ಯವಾಗಿದೆ ಎಂದು ಇದೇ ಸಂದರ್ಭದಲ್ಲಿ ವಿವರಿಸುತ್ತಾ ಸೊಳ್ಳೆಗಳಿಂದ ಹರಡುವ ರೋಗಗಳು ಹಾಗೂ ಅವುಗಳನ್ನು ಹರಡದಂತೆ ತಡೆಯಲು ಮುಂಜಾಗ್ರತೆ ಅದರಲ್ಲಿ ವಿಶೇಷವಾಗಿ ಸ್ವಯಂ ರಕ್ಷಣಾ ವಿಧಾನ ಅಳವಡಿಸಿಕೊಳ್ಳುವ ಜವಾಬ್ದಾರಿ ಕುರಿತು ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡುತ್ತಾ ರಾಸಾಯನಿಕ ವಸ್ತುಗಳನ್ನು ಬಳಸದೆ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಸೊಳ್ಳೆ ರೋಗಗಳ ಹರಡುವ ನಿಯಂತ್ರಣ ನಮ್ಮ ಕೈಯಲ್ಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಸಗೊಬ್ಬರ ಕೊರತೆ ನೀಗಿಸಲು ಅಫ್ಜಲಪುರಕರ್ ಆಗ್ರಹ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯಗುರುಗಳಾದ ಮೀರಾ ಪಟೇಲ್ ವಹಿಸಿದ್ದರು. ಸೈಯದ್ ಹಾಸ್ಮಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಪ್ರಾಸ್ತಾವಿಕ ಮಾತನಾಡಿದರು . ಕಾರ್ಯಕ್ರಮದ ನಿರೂಪಣೆ ವಿಜಯಕುಮಾರ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆ ಉಪಕೇಂದ್ರ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here