ಬಿಸಿ ಬಿಸಿ ಸುದ್ದಿ

ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಕಲಬುರಗಿ: ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಅಧಿಕಾರಿಗಳು 2022ರ ಜೂನ್ ಮಾಹೆಯಲ್ಲಿ ಕೆಳಕಂಡ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಲಿದ್ದು, ಆಯಾ ತಾಲೂಕಿನ ಸಾರ್ವಜನಿಕರು ಇದರ ಸದುಪಯೋಗಪಡೆಯಬೇಕೆಂದು ಕಲಬುರಗಿ ಪೊಲೀಸ್ ಠಾಣೆಯ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧೀಕ್ಷಕ ಸಂತೋಷ ಬಿ. ಬನ್ನಟ್ಟಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಕಾರ್ಯಾಗಾರಕ್ಕೆ ಲೇಖನಗಳ ಆಹ್ವಾನ

ಪೊಲೀಸ್ ಇನ್ಸ್‍ಪೆಕ್ಟರ್ ಬಾಬಾಸಾಹೇಬ್ ಪಾಟೀಲ್ ಅವರು (ಮೊಬೈಲ್ ಸಂಖ್ಯೆ 9480806309, 8151901256) ಇದೇ ಜೂನ್ 14 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಜೇವರ್ಗಿ ತಾಲೂಕು ಪ್ರವಾಸಿ ಮಂದಿರ, ಜೂನ್ 16 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಕಮಲಾಪುರ ಗ್ರಾಮ ಪಂಚಾಯತ್ ಕಾರ್ಯಾಲಯ, ಜೂನ್ 18 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರ, ಜೂನ್ 22 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಆಳಂದ ಪ್ರವಾಸಿ ಮಂದಿರ ಹಾಗೂ ಜೂನ್ 24 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಚಿತ್ತಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: ರಸಗೊಬ್ಬರ ಕೊರತೆ ನೀಗಿಸಲು ಅಫ್ಜಲಪುರಕರ್ ಆಗ್ರಹ

ಪೊಲೀಸ್ ಇನ್ಸ್‍ಪೆಕ್ಟರ್‍ರಾದ ಪ್ರದೀಪ್ ಎಲ್. ಕೊಳ್ಳಾ ಅವರು (ಮೊಬೈಲ್ ಸಂಖ್ಯೆ 9480806310, 7760663497) ಜೂನ್ 15 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಅಫಜಲಪುರ ತಾಲೂಕು ಪ್ರವಾಸಿ ಮಂದಿರ, ಜೂನ್ 17 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಶಹಾಬಾದ ತಾಲೂಕ ಪ್ರವಾಸಿ ಮಂದಿರ, ಜೂನ್ 21 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಯಡ್ರಾಮಿ ತಾಲೂಕ ಪ್ರವಾಸಿ ಮಂದಿರ, ಜೂನ್ 23 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಚಿಂಚೋಳಿ ತಾಲೂಕ ಪ್ರವಾಸಿ ಮಂದಿರ ಹಾಗೂ ಜೂನ್ 27 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಸೇಡಂ ತಾಲೂಕು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: ಕೆನಡಿಯನ್ ವುಡ್ ವತಿಯಿಂದ ಇಂಡಿಯಾ ವುಡ್ 2022 ನಲ್ಲಿ ಟ್ರೆಂಡಿ ಪೀಠೋಪಕರಣ ಅಪ್ಲಿಕೇಶನ್‍ಗಳ ಪ್ರದರ್ಶನ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago