ಪಡಿತರ ಚೀಟಿದಾರರು ಜೂನ್ ೩೦ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ

ಕಲಬುರಗಿ: ಕರ್ನಾಟಕದ ಯಾವುದೇ ಭಾಗದಲ್ಲಿ ವಾಸವಾಗಿದ್ದರೂ ಸಹ ಪಡಿತರ ಚೀಟಿದಾರರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ಹೋಗಿ ಇ-ಕೆವೈಸಿ ಮಾಡಿಕೊಳ್ಳಲು ಸರ್ಕಾರವು ಅವಕಾಶ ಕಲ್ಪಿಸಿದೆ. ಆದ್ದರಿಂದ ಈವರೆಗೆ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರು ೨೦೨೨ರ ಮೇ ೩೦ ರೊಳಗಾಗಿ ತಪ್ಪದೇ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಕೊಳ್ಳಲು ಈ ತಿಂಗಳಲ್ಲಿ ಜೂನ್ ೧ ರಿಂದ ೩೦ ರವರೆಗೆ ಕೊನೆಯ ಅವಕಾಶ ನೀಡಲಾಗಿದ್ದು, ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕಾಗಿರುತ್ತದೆ.

ಜಿಲ್ಲೆಯಲ್ಲಿರುವ ೯೮೩ ನ್ಯಾಯಬೆಲೆ ಅಂಗಡಿಗಳಲ್ಲಿರುವ ಪಿಓಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಈವರೆಗೆ ಜಿಲ್ಲೆಯಲ್ಲಿ ಪ್ರತಿಶತ ೯೦ ರಷ್ಟು ಎನ್‌ಎಫ್‌ಎಸ್‌ಎ (ಅಂತ್ಯೋದಯ ಅನ್ನ ಮತ್ತು ಆದ್ಯತಾ) ಪಡಿತರ ಚೀಟಿದಾರರ ಇ-ಕೆವೈಸಿ ಆಗಿರುತ್ತದೆ.

ಇದನ್ನೂ ಓದಿ: ಬಸವರಾಜ ಹೊರಟ್ಟಿಯವರೇ ಮತ್ತೆ ಮತ್ತೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಗೆಲ್ಲುವ ಅಭ್ಯರ್ಥಿ

ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಿರುವ ಕಾರಣ ಇನ್ನುಳಿದ ಪಡಿತರ ಚೀಟಿದಾರರು ೨೦೨೨ರ ಜೂನ್ ೩೦ ರೊಳಗಾಗಿ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420