ಕಲಬುರಗಿ: ಮುಂಬರುವ ದಿನಗಳಲ್ಲಿ ಅಲೆಮಾರಿ ಮತ್ತು ಅರೆ-ಅಲೆಮಾರಿ ಜನರು ಬೇರೆ ಸಮಾಜಕ್ಕಿಂತ ನಾವು ಯಾವುದರಲ್ಲಿಯೂ ಕಡಿಮೆ ಇಲ್ಲ ಎಂಬಂತೆ ಸ್ವಾಭಿಮಾನದಿಂದ ಬದುಕಬೇಕು ಎಂದು ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಅವರು ಕರೆ ನೀಡಿದರು.
ಗುರುವಾರದಂದು ಕಲಬುರಗಿ ಐವಾನ್-ಇ- ಶಾಹಿ ಹೊಸ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡುತ್ತಿದ್ದರು.
ಇದನ್ನೂ ಓದಿ: ರೈತರ ಗಮನಕ್ಕೆ: ಪಿ.ಎಮ್. ಕಿಸಾನ್ ಯೋಜನೆ ಇ-ಕೆವೈಸಿಗೆ 31 ರವರೆಗೆ ಗಡುವು
ಸಮಾಜದಲ್ಲಿ ಧ್ವನಿ ಇಲ್ಲದ ಅಲೆಮಾರಿ ಜನರ ಸೇವೆಯನ್ನು ಸಲ್ಲಿಸಲು ಆಗಿನ ಮುಖ್ಯಮಂತ್ರಿಗಳು ಆಗಿದ್ದ ಬಿ.ಎಸ್. ಯಡಿಯೂರಪ್ಪನವರು ಮತ್ತು ನನ್ನ ಪಕ್ಷ ನನಗೆ ಅವಕಾಶ ಮಾಡಿ ಕೊಟ್ಟಿದೆ. ಆ ನಿಟ್ಟಿನಲ್ಲಿ ನನ್ನ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ. ಅಲೆಮಾರಿ ಮತ್ತು ಅರೆ-ಅಲೆಮಾರಿ ಜನರಿಗೆ ಆಸರೆಯಾಗಿ ನಿಲ್ಲುತ್ತೇನೆ ಎಂದು ಈ ಸಂದರ್ಭದಲ್ಲಿ ಮಾತು ಕೊಟ್ಟರು.
ಅಲೆಮಾರಿ ಹಿಂದುಳಿದ ಪ್ರವರ್ಗ ಒಂದರ ಅಡಿಯಲ್ಲಿ ಬರುವ ಗೊಲ್ಲ, ಜೋಗಿ, ದೊಂಬಿದಾಸ, ಘಿಸಾಡಿ, ಹಾವಾಡಿಗ, ಗೊಂದಲಿ, ಕಟುಬು, ಬೆಸ್ತರ್ ಸಮಾಜ ಮುಂತಾದ 46 ಜಾತಿಗಳನ್ನು ಒಳಗೊಂಡಿದೆ, ಸಾಮಾಜಿಕ ನ್ಯಾಯ ವ್ಯವಸ್ಥೆಯಲ್ಲಿ ಅತ್ಯಂತ ಶೋಚನೀಯ ರೀತಿಯಲ್ಲಿ ಜೀವನ ಸಾಗಿಸುತ್ತಿರುವ ಇವರು, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರದಲ್ಲಿ ಹಿಂದುಳಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಇದನ್ನೂ ಓದಿ: ಪಡಿತರ ಚೀಟಿದಾರರು ಜೂನ್ ೩೦ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ
ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಲ್ಲಿ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಘಟಕ ವೆಚ್ಚ 2 ಲಕ್ಷ ರೂಪಾಯಿಯಲ್ಲಿ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‍ಸೆಟ್ಟು ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 2022-23ನೇ ಸಾಲಿಗೆ ರಾಜ್ಯ ಸರ್ಕಾರದಿಂದ 6 ಕೋಟಿ ರೂ. ಅನುದಾನ ಬಂದಿದೆ. ಅದರಲ್ಲಿ 2020-21 ನೇ ಸಾಲಿನ 2 ಕೋಟಿ. ರೂ ಉಳಿಕೆಯನ್ನು ಸೇರಿಸಿ ಒಟ್ಟು 8,020,8000 ರೂಪಾಯಿ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವ್ಯಾಪ್ತಿಗೆ ಬರುವ ನಿಗಮಗಳಿಗೆ ಕೊಡುವ ರೀತಿಯಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ಕೊಟ್ಟಿರುತ್ತಾರೆ ಎಂದು ಅವರು ಹೇಳಿದರು.
ಈಗಾಗಲೇ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸಲು ವಸತಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ಅವರು ಹೇಳಿದರು.
ಮಂಬರುವ ಎರಡು ತಿಂಗಳಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಂಸ್ಕøತಿಕ ಕಲಾ ಉತ್ಸವವನ್ನು ಪ್ರತಿ ಜಿಲ್ಲೆಯಿಂದ ಎರಡು ತಂಡಗಳನ್ನು ಆಹ್ವಾನಿಸಿ ಕಾರ್ಯಕ್ರಮವನ್ನು ಮಾಡುತ್ತೇವೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ
ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಪ್ರಬಂಧಕರಾದ ನಾರಾಯಣ ಮೆರಲಿ, ಡಿ. ದೇವರಾಜ್ ಅರಸ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪ್ರಿಯದರ್ಶಿನಿ, ಅಲೆಮಾರಿ ಸಮಾಜದ ಮುಖಂಡ ಸಂತೋμï ಶಿಂಧೆ, ಸಮಾಜದ ಮುಖಂಡರಾದ ಶ್ರೀಮತಿ ಅಂಕಿತ ಹೆಳವರ, ಸಾಯಬಣ್ಣ ಹೆಳವರ ಉಪಸ್ಥಿತರಿದ್ದರು.