ಪರಿಸರ ಸಂರಕ್ಷಣೆ-ನಮ್ಮೆಲ್ಲರ ಹೊಣೆ

1
37

ಶಹಾಬಾದ: ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ ಎಂದು ಸರಕಾರಿ ಕನ್ಯಾ ಪ್ರೌಢಶಾಲೆಯ ಮುಖ್ಯಗುರುಮಾತೆ ಪ್ರತಿಭಾ ಪ್ರೀಯದರ್ಶಿನಿ ಹೇಳಿದರು.

ಅವರು ನಗರದ ಸರಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಪರಿಸರ ದಿನದ ಅಂಗವಾಗಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Contact Your\'s Advertisement; 9902492681

ಇದನ್ನೂ ಓದಿ: ಚಂದು ಪಾಟೀಲ್ ಗೆ ಬೆಳ್ಳಿ ಖಡ್ಗ ನೀಡಿ ಸನ್ಮಾನ

ಸುತ್ತಮುತ್ತಲಿನ ಪರಿಸರ ಚೆನ್ನಾಗಿದ್ದರೇ ಮಾತ್ರ ಮಾನವನ ಉಳಿವು ಸಾಧ್ಯ.ಆದರೆ ಅದು ನಮ್ಮಿಂದ ಸಾಧ್ಯವಾಗದೆಹೋಗುತ್ತಿರುವುದು ಒಂದು ಶೋಚನೀಯ ಸಂಗತಿ. ಇಂದಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಮೂರು ಮುಖ್ಯವಾದ ಪರಿಸರ ಮಾಲಿನ್ಯಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇವೆಲ್ಲವುಗಳಿಗೂ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ. ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.

ಮಾನವನ ಇಂದಿನ ದಿನನಿತ್ಯ ಜೀವನಪದ್ಧತಿಯಿಂದ ಹಾಗೂ ಹೆಚ್ಚು ತ್ತಿರುವ ಕಾರ್ಖಾನೆಗಳಿಂದ ಹೊರಬಿಡುವ ಕಸ ಹಾಗೂ ತ್ಯಾಜ್ಯ ನೀರು ಇವುಗಳಿಂದ ವಾತಾವರಣವು ಮಾಲಿನ್ಯಗೊಳ್ಳುತ್ತದೆ. ವಾಹನಗಳಿಂದ, ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲವು ನಮ್ಮ ನಿತ್ಯ ಜೀವನದ ಮೇಲೆಯೇ ಪ್ರಭಾವ ಬೀರುತ್ತದೆ. ಮಾಲಿನ್ಯ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸುವುದೇ ಅಸಾಧ್ಯವಾಗುತ್ತದೆ. ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ. ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.

ಇದನ್ನೂ ಓದಿ: ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ

ದಲಿತ ವಿದ್ಯಾರ್ಥಿ ಒಕ್ಕಟದ ಸಂಚಾಲಕ ಪೂಜಪ್ಪ ಮೇತ್ರೆ ಮಾತನಾಡಿ, ಜೂನ್ ವಿಶ್ವ ಪರಿಸರ ದಿನಾಚರಣೆಯ ತಿಂಗಳು. ಇದು ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಮಹತ್ವವನ್ನು ಅರಿಯುವ ಹಾಗೂ ಈ ದಿನಗಳಲ್ಲಿ ನಮ್ಮ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದದ್ದನ್ನು ನೆನಪಿಸುವ ಮಹತ್ತರವಾದ ದಿನ. ನಾವು ಈ ಪರಿಸರದ ಶಿಶುಗಳು, ಪರಿಸರವಿಲ್ಲದೆ ನಮ್ಮ ಅಸ್ತಿತ್ವಕ್ಕೆ ಯಾವುದೇ ರೀತಿಯ ಬೆಲೆಯಿರುವುದಿಲ್ಲ. ಹಿಂದೆ ಈ ಸಹಜ ಪ್ರಕೃತಿಯ ಮಡಿಲಲ್ಲಿಯೇ ವಿದ್ಯೆ ಕಲಿತರು ॒ಪರಿಸರವನ್ನು ಕಾಪಾಡಿಕೊಳ್ಳುವುದರ ಮಹತ್ವವನ್ನು ಅರಿತರು. ಇಂದೂ ಕೂಡ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ, ಅನಿವಾರ್ಯತೆ ಎರಡೂ ಇದೆ ಎಂದರು.

ಅತಿಥಿಗಳಾಗಿ ಮಹ್ಮದ್ ಖದೀರ್, ಶಿಕ್ಷಕರಾದ ಮಲ್ಲಿಕಾಬೇಗಂ, ಸುನಂದಾ, ಸುರೇಖಾ ಮೇತ್ರೆ,ಮಲ್ಲಿಕಾರ್ಜುನ, ದೈಹಿಕ ಶಿಕ್ಷಕರಾದ ಸಂಗಯ್ಯ ಸೇರಿದಂತೆ ಅನೇಕರು ಇದ್ದರು.

ಇದನ್ನೂ ಓದಿ: ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ: ಹೆಚ್.ಡಿ.ಕುಮಾರಸ್ವಾಮಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here