ಶಹಾಬಾದ: ಎಲ್ಲ ಜೀವ ಸಂಕುಲಗಳಿಗೆ ಪರಿಸರವೇ ಮುಖ್ಯ ಆಧಾರವಾದ ಕಾರಣ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ ಹೇಳಿದರು.
ಅವರು ಹಳೆಶಹಾಬಾದನ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಇದನ್ನೂ ಓದಿ: ಪರಿಸರ ಸಂರಕ್ಷಣೆ-ನಮ್ಮೆಲ್ಲರ ಹೊಣೆ
ಅರಣ್ಯ ನಾಶದಿಂದ ಆಮ್ಲಜನಕದ ಕೊರತೆ ಉಂಟಾಗುತ್ತದೆ, ನಮ್ಮ ಸ್ವಾರ್ಥದ ಜೀವನಕ್ಕಾಗಿ ಪರಿಸರ ನಾಶ ಅವ್ಯಾಹತವಾಗಿ ನಡೆಯುತ್ತಿದೆ.ಉತ್ತಮ ಜೀವನಕ್ಕಾಗಿ, ನಾಳಿನ ಪೀಳಿಗೆ ಗೋಸ್ಕರ ಅರಣ್ಯ ಸಂರಕ್ಷಣೆ ಜೊತೆಗೆ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಬೇಕು. ಪರಿಸರ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ನೆಟ್ಟಂತಹ ಗಿಡ,ಮರಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವದು ನಮ್ಮೆಲ್ಲರ ಕರ್ತವ್ಯ ,ಪ್ಲಾಸ್ಟಿಕ್ ನಿಂದ ಪರಿಸರದ ಮೇಲೆ ದು?ರಿಣಾಮವಾಗುತ್ತಿದೆ.ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಸಬಾರದು. ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿ?ಧವಾಗಿದೆ ಎಂದರು.
ಎಸ್‌ಡಿಎಮ್‌ಸಿ ಅಧ್ಯಕ್ಷ ಶರಣಗೌಡ ಪಾಟೀಲ ಮತ್ತು ಶಾಂತಪ್ಪ ಹಡಪದ ಮಾತನಾಡಿ,ಅರಣ್ಯ ನಾಶದಿಂದ ಮತ್ತು ಖನಿಜ ಸಂಪನ್ಮೂಲಗಳನ್ನು ಲೂಟಿ ಮಾಡುವ ಮೂಲಕ ಕೆಲವು ಬಲಿಷ್ಠರು ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿದ್ದಾರೆ. ಪರಿಸರಕ್ಕೆ ಹಾನಿ ಮಾಡುವರಿಗೆ ದಂಡ ವಿಧಿಸಬೇಕು. ಇದು ಕಠಿಣ ಕಾನೂನು ಕ್ರಮವಾದರೆ ಮಾತ್ರ ಪರಿಸರದ ಸಂರಕ್ಷಣೆ ಮಾಡಲು ಸಾಧ್ಯ ಎಂದರು.
ಇದನ್ನೂ ಓದಿ: ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ
ವೀರಶೈವ ಲಿಂಗಾಯತ ಸಮಾಝದ ಅಧ್ಯಕ್ಷ ಮಲ್ಲಿಕಾರ್ಜುನ ಚಂದನಕೇರಿ, ಮುಖ್ಯಗುರುಮಾತೆ ಅಂಜನಾದೇವಿ ವಸ್ತ್ರದ್ ಮಠ, ಸಾಜಿದ್ ಗುತ್ತೆದಾರ, ಶಿವಕುಮಾರ ನಾಟೇಕಾರ ಇತರರು ಇದ್ದರು.