ಬಿಸಿ ಬಿಸಿ ಸುದ್ದಿ

ಜೀವ ಸಂಕುಲಗಳಿಗೆ ಪರಿಸರವೇ ಮುಖ್ಯ ಆಧಾರ: ವಾಲಿ

ಶಹಾಬಾದ: ಎಲ್ಲ ಜೀವ ಸಂಕುಲಗಳಿಗೆ ಪರಿಸರವೇ ಮುಖ್ಯ ಆಧಾರವಾದ ಕಾರಣ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ ಹೇಳಿದರು.

ಅವರು ಹಳೆಶಹಾಬಾದನ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಇದನ್ನೂ ಓದಿ: ಪರಿಸರ ಸಂರಕ್ಷಣೆ-ನಮ್ಮೆಲ್ಲರ ಹೊಣೆ

ಅರಣ್ಯ ನಾಶದಿಂದ ಆಮ್ಲಜನಕದ ಕೊರತೆ ಉಂಟಾಗುತ್ತದೆ, ನಮ್ಮ ಸ್ವಾರ್ಥದ ಜೀವನಕ್ಕಾಗಿ ಪರಿಸರ ನಾಶ ಅವ್ಯಾಹತವಾಗಿ ನಡೆಯುತ್ತಿದೆ.ಉತ್ತಮ ಜೀವನಕ್ಕಾಗಿ, ನಾಳಿನ ಪೀಳಿಗೆ ಗೋಸ್ಕರ ಅರಣ್ಯ ಸಂರಕ್ಷಣೆ ಜೊತೆಗೆ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಬೇಕು. ಪರಿಸರ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ನೆಟ್ಟಂತಹ ಗಿಡ,ಮರಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವದು ನಮ್ಮೆಲ್ಲರ ಕರ್ತವ್ಯ ,ಪ್ಲಾಸ್ಟಿಕ್ ನಿಂದ ಪರಿಸರದ ಮೇಲೆ ದು?ರಿಣಾಮವಾಗುತ್ತಿದೆ.ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಸಬಾರದು. ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿ?ಧವಾಗಿದೆ ಎಂದರು.

ಎಸ್‌ಡಿಎಮ್‌ಸಿ ಅಧ್ಯಕ್ಷ ಶರಣಗೌಡ ಪಾಟೀಲ ಮತ್ತು ಶಾಂತಪ್ಪ ಹಡಪದ ಮಾತನಾಡಿ,ಅರಣ್ಯ ನಾಶದಿಂದ ಮತ್ತು ಖನಿಜ ಸಂಪನ್ಮೂಲಗಳನ್ನು ಲೂಟಿ ಮಾಡುವ ಮೂಲಕ ಕೆಲವು ಬಲಿಷ್ಠರು ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿದ್ದಾರೆ. ಪರಿಸರಕ್ಕೆ ಹಾನಿ ಮಾಡುವರಿಗೆ ದಂಡ ವಿಧಿಸಬೇಕು. ಇದು ಕಠಿಣ ಕಾನೂನು ಕ್ರಮವಾದರೆ ಮಾತ್ರ ಪರಿಸರದ ಸಂರಕ್ಷಣೆ ಮಾಡಲು ಸಾಧ್ಯ ಎಂದರು.

ಇದನ್ನೂ ಓದಿ: ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ

ವೀರಶೈವ ಲಿಂಗಾಯತ ಸಮಾಝದ ಅಧ್ಯಕ್ಷ ಮಲ್ಲಿಕಾರ್ಜುನ ಚಂದನಕೇರಿ, ಮುಖ್ಯಗುರುಮಾತೆ ಅಂಜನಾದೇವಿ ವಸ್ತ್ರದ್ ಮಠ, ಸಾಜಿದ್ ಗುತ್ತೆದಾರ, ಶಿವಕುಮಾರ ನಾಟೇಕಾರ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago