ಕಲಬುರಗಿ: ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿರುವ ಬಿಜೆಪಿಯ ನೂಪುರ್ ಶರ್ಮಾ ಮತ್ತು ರಾಜಾಸಿಂಗ್ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಇಲ್ಲಿನ ಮುಸ್ಲಿಂ ಚೌಕ್ ನಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮೇಲೆ ನೂಪುರ ಶರ್ಮಾ ಮತ್ತು ರಾಜಾಸಿಂಗ್ ಭಾವಚಿತ್ರ ರಸ್ತೆ ಮೇಲೆ ಹಚ್ಚುಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.