ಬಿಸಿ ಬಿಸಿ ಸುದ್ದಿ

ಮಕ್ಕಳ ಪಠ್ಯಪುಸ್ತಕದಲ್ಲಿ ಮನುವಾದ ಬೇಡ: ಪ್ರತಿಭಟನೆ

ಕಲಬುರಗಿ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ಈ ಹಿಂದೆ ಇದ್ದ ಪಠ್ಯ ಪುಸ್ತಕಗಳನ್ನು ಮುಂದುವರಿಸುವಂತೆ ಆಗ್ರಹಿಸಿ ಗುಲ್ಬರ್ಗ ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಶುಕ್ರವಾರ ವಿವಿಯ ಕಾರ್ಯಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.

ಪಠ್ಯ ಪುಸ್ತಕಗಳು ಮಕ್ಕಳ ವ್ಯಕ್ತಿತ್ವವನ್ನು ರೂಪಿಸಬಲ್ಲ ಸಾಧನಗಳಾಗಿರುವುದರಿಂದ ಉದಾತ್ತರು, ವಿಶಾಲ ಮನಸ್ಥಿತಿವುಳ್ಳವರು ಜಾತಿ, ಧರ್ಮ, ಮತ, ಪಂಥವನ್ನು ಮೀರಿದ ವಸ್ತುನಿಷ್ಠ ಆಲೋಚನೆಯುಳ್ಳ ತಜ್ಞರನ್ನು ನೇಮಿಸಬೇಕಗಿದ್ದ ಬಿಜೆಪಿ ಸರ್ಕಾರ ಮನುವಾದಿ ಸಿದ್ಧಾಂತದ ಹಿನ್ನೆಲೆಯಿರುವ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯನ್ನು ಆ ಸ್ಥಾನಕ್ಕೆ ಕೂಡಿಸಿರುವುದು ಮತ್ತು ಆ ಮೂಲಕ ಮತ್ತೆ ವಾರ್ಣಾಶ್ರಮ ಪದ್ಧತಿ ಹೇರುವ ಹುನ್ನಾರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಭಾರತಿಯ ಯುವ ಸೈನ್ಯಕ್ಕೆ ಸೋನುಬಾಯಿ, ಗಣೇಶ ಮೇಳಕುಂದ ಆಯ್ಕೆ

ವರ್ಷಗಳು ಕಳೆದರೂ ಇನ್ನೂ ಕಾಲೇಜು ವಿದ್ಯಾರ್ಥಿಗಳಿಗೆ, ವಿವಿ ಸಂಶೋಧಕರಿಗೆ ಸ್ಕಾಲರ್‌ಶಿಪ್ ಮತ್ತು ಫೆಲೋಶಿಪ್ ನೀಡಿಲ್ಲ. ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದ ಸರ್ಕಾರ, ಅಮಾಯಕ ಮುಗ್ಧ ಮಕ್ಕಳು ಓದುವ ಪಠ್ಯಗಳಲ್ಲಿ ತಮ್ಮ ಮನುವಾದಿ ಸಿದ್ಧಾಂತವನ್ನು ತುಂಬಲು ತೋರುತ್ತಿರುವ ಸರ್ಕಾರದ ನಡೆ ನಿಜಕ್ಕೂ ನಾಚಿಕೆಗೇಡು ಎಂದು ಟೀಕಿಸಿದರು. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ ಪುಸ್ತಕ ಮುಂದುವರಿಸಬೇಕು ಇಲ್ಲದಿದ್ದಲ್ಲಿ ನೂತನವಾಗಿ ಶಿಕ್ಷಣ ತಜ್ಞರನ್ನು ನೇಮಿಸಿ ಹೊಸ ಪಠ್ಯ ಪುಸ್ತಕ ಸಿದ್ಧಪಡಿಸಬೇಕು ಎಂದು ಆಗ್ರಹಿಸಿದರು.

ಸುನಿಲ ಮಾರುತಿ ಮಾನ್ಪಡೆ, ಮೈಲಾರಿ ದೊಡ್ಡಮನಿ, ಡಾ. ಅನಿಲ್ ಟೇಂಗಳಿ, ಬಾಬುರಾವ ಬೀಳಗಿ ಸೇರಿದಂತೆ ಹಲವಾರು ಸ್ನಾತಕ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಮಕೇ ವಾಸ್ತೆ ದುರಸ್ತಿ ಕಾರ್ಯ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago