ಕಲಬುರಗಿ: ಕಲಬುರಗಿ ಜಿಲ್ಲಾ ಹೆಳವ ಸಮಾಜದ ಸಭೆಯನ್ನು ಶನಿವಾರ ದಿನಾಂಕ 18.06.2022 ಮುಂಜಾನೆ 11:00 ಘಂಟೆಗೆ ನಗರದ ಕನ್ನಡ ಭವನದಲ್ಲಿ ಕರೆಯಲಾಗಿದೆ.
ಸಭೆಯಲ್ಲಿ ಸಮಾಜದ ಸಂಘಟನೆ ಬಲವರ್ಧನೆ, ಸರಕಾರದಿಂದ ಸಿಗುವ ವಿವಿಧ ಯೋಜನೆಗಳು, ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಹಾಗೂ ಹೆಳವ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸುವ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಎಲ್ಲಾ ಕುಲಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾದ್ಯಕ್ಷ ಸಾಯಬಣ್ಣ ಹೆಳವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.