ಕಲಬುರಗಿ: ಒಬ್ಬ ಮನುಷ್ಯನಿಗೆ ಅಧಿಕಾರ ದೊಡ್ಡದಲ್ಲ. ಸಾಮಾಜಿಕ ಕಳಕಳಿ ಮುಖ್ಯ ಎಂದು ಎಚ್ಕೆಇ ಸಂಸ್ಥೆ ಅಧ್ಯಕ್ಷ ಹಾಗೂ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ತಿಳಿಸಿದರು.
ನಗರದ ಜಯನಗರದಲ್ಲಿನ ಶಿವಮಂದಿರದಲ್ಲಿಂದು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಟ್ರಸ್ಟ್ ನೂತನ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅವರ ಅಧಿಕಾರ ಸ್ವೀಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶರಣರು,ಸಂತರು ತಾವು ಬಲಗೈಯಿಂದ ಮಾಡಿದ ದಾನ ಎಡಗೈಗೆ ತಿಳಿಯಬಾರದು ಎನ್ನುತ್ತಿದ್ದರು.ಆದರೆ ಇಂದು ಇದಕ್ಕೆ ತದ್ವಿರುದ್ಧವಾಗಿ ನಡೆಯುತ್ತಿದೆ. ಎಲ್ಲರಿಗೂ ಪ್ರತಿಷ್ಠೆಯ ಚಿಂತೆ.ಅಧಿಕಾರ ಬೇಕು.ಆದರೆ ಸಾಮಾಜಿಕ ಜವಾಬ್ದಾರಿ ಹೊತ್ತಿಕೊಳ್ಳಲು ಹಿಂಜರಿಕೆ ಎಂದ ಅವರು ಜಯನಗರ ಬಡಾವಣೆಯ ಅಭಿವೃದ್ಧಿಗೆ ತಮ್ಮ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ಅವರು ಮಾತನಾಡಿ ಮುಂಬರುವ ದಿನಗಳಲ್ಲಿ ಟ್ರಸ್ಟ್ ವತಿಯಿಂದ ಅನೇಕ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.ನೂತನ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಮಾತನಾಡಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕದಿಂದ ನಿರ್ವಹಿಸಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುವುದು ಎಂದರು.ಉಪಾಧ್ಯಕ್ಷ ವಿರೇಶ ದಂಡೋತಿ, ಹಿರಿಯ ಹೋರಾಟಗಾರ ಡಾ.ಎ.ಎಸ್.ಭದ್ರಶೆಟ್ಟಿ ಮಾತನಾಡಿದರು.
ಹಿರಿಯ ಸದಸ್ಯ ಬಸವರಾಜ ಅನ್ವರಕರ ಸ್ವಾಗತಿಸಿದರು. ಎಸ್.ಡಿ.ಸೇಡಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಡಿ.ಮಠಪತಿ, ಶಿವಪುತ್ರಪ್ಪ ಮರಡಿ, ಸುನೀಲ್ ಬಿಡಪ್, ವಾಸುದೇವ ಮಾಲಿಬಿರಾದಾರ, ಸಂಜೀವಕುಮಾರ ಕರಿಕಲ, ವಿನೋದ ಪಾಟೀಲ್,ಪ್ರಶಾಂತ ತಂಬೂರಿ,ಶರಣು ಇಕ್ಕಳಕಿಮಠ ಸೇರಿದಂತೆ ಬಡಾವಣೆಯ ಹಿರಿಯರು, ಮಹಿಳೆಯರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…