ಬಿಸಿ ಬಿಸಿ ಸುದ್ದಿ

ಪತ್ರಿಕಾ ಭವನಕ್ಕೆ ನಿವೇಶನ ಮಂಜೂರು ಮಾಡಲು ಶಾಸಕರಿಗೆ ಮನವಿ

ಶಹಾಬಾದ: ನಗರದಲ್ಲಿ ಪತ್ರಿಕಾ ಭವನಕ್ಕೆ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ರಘುವೀರಸಿಂಗ ಠಾಕೂರ ನೇತೃತ್ವದಲ್ಲಿ ರವಿವಾರ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ರಘುವೀರಸಿಂಗ ಠಾಕೂರ, ನಗರದಲ್ಲಿ ಪತ್ರಿಕಾಗೋಷ್ಠಿ ಮತ್ತು ಸಂಘದ ಚಟುವಟಿಕೆಗಳನ್ನು ಮಾಡಲು ಪತ್ರಕರ್ತರಿಗೆ ಎಲ್ಲೂ ಸ್ಥಳವಿಲ್ಲ. ಪತ್ರಕರ್ತರಿಗೆ ತನ್ನದೇ ಆದ ನಿವೇಶನ ದೊರಕಿಸಿ, ಪತ್ರಿಕಾ ಭವನ ನಿರ್ಮಾಣ ಮಾಡುವುದಕ್ಕೆ ಅನುಕೂಲ ಮಾಡಿದರೇ ಪತ್ರಕರ್ತರಿಗೆ ಅನುಕೂಲವಾಗುತ್ತದೆ.ಆದ್ದರಿಂದ ಆದಷ್ಟು ಬೇಗನೆ ನಿವೇಶನ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ನಗರಸಭೆಯ ಕಂದಾಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಕರೆದು ಪತ್ರಿಕಾ ಭವನಕ್ಕೆ ನಗರದಲ್ಲಿ ಯಾವುದಾದರೂ ನಿವೇಶನಇದ್ದರೇ ಗುರುತಿಸಿ, ನಿವೇಶನ ನೀಡುವತ್ತ ಕ್ರಮಕೈಗೊಳ್ಳಿ ಎಂದು ಹೇಳಿದರಲ್ಲದೇ, ನಿವೇಶನ ಮಂಜೂರು ಆದ ಮೇಲೆ ಭವನದ ನಿರ್ಮಾಣಕ್ಕೂ ಸಹಕಾರ ನೀಡಲಾಗುವುದೆಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಪತ್ರಕರ್ತ ಸಂಘದ ಗೌರವ ಸಲಹೆಗಾರ ರಮೇಶ ಭಟ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಾಸುದೇವ ಚವ್ಹಾಣ, ಉಪಾಧ್ಯಕ್ಷ ದಾಮೋದರ್ ಭಟ್,ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ, ಕಾರ್ಯದರ್ಶಿ ಶಿವಕುಮಾರ ಕುಸಾಳೆ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago