ಸುರಪುರ: ಇಂದು ಕೇವಲ ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಯೋಗ ದಿನವನ್ನು ಆಚರಣೆ ಮಾಡುತ್ತಿದೆ.ಇದಕ್ಕೆ ಕಾರಣ ನಮ್ಮ ನೆಚ್ಚಿನ ಪ್ರಧಾನಿಗಳು.ಇಂತಹ ಯೋಗ ದಿನವನ್ನು ವಿಶ್ವಕ್ಕೆ ಕೊಟ್ಟ ನರೇಂದ್ರ ಮೋದಿಜಿಯವರಿಗೆ ಕೃತಜ್ಞತೆ ಸಲ್ಲಿಸುವುದಾ ಶಾಸಕ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ) ಮಾತನಾಡಿದರು.
ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಆಯುಷ್ ಇಲಾಖೆ,ತಾಲೂಕು ಆಡಳಿತ,ತಾಲೂಕು ಪಂಚಾಯಿತಿ,ನಗರಸಭೆ ಹಾಗೂ ಇತರೆ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚಣೆಯನ್ನು ಉದ್ಘಾಟಿಸಿ ಮಾತನಾಡಿ,ಪ್ರತಿಯೊಬ್ಬ ಮನುಷ್ಯನಿಗೂ ಯೋಗ ತುಂಬಾ ಅವಶ್ಯಕವಾಗಿದೆ.ಯಾವುದೇ ಚಿಕಿತ್ಸೆ,ಔಷಧಿ ಇಲ್ಲದೆ ಮನುಷ್ಯ ರೋಗ ದಿಂದ ದೂರವಿರಲು ಯೋಗ ತುಂಬಾ ಮುಖ್ಯವಾಗಿದೆ.ಈಗ ನಿತ್ಯವು ಯೋಗ ಮಾಡುವವರು ಮತ್ತು ವರ್ಷಕ್ಕೆ ಒಂದು ದಿನ ಯೋಗ ಮಾಡುವವರು ಇರುತ್ತಾರೆ,ಆದರೆ ಯಾರುಕೂಡ ವರ್ಷಕ್ಕೊಮ್ಮೆ ಯೋಗ ಮಾಡುವುದನ್ನು ನಿಲ್ಲಿಸಿ ನಿತ್ಯವು ಯೋಗ ಮಾಡುವುದನ್ನು ರೂಢಿಸಿಕೊಳ್ಳುವಂತೆ ಸಲಹೆ ನೀಡಿದರು.ಇಂದು ನಮ್ಮ ಪ್ರಧಾನ ಮಂತ್ರಿಗಳು ಇಂದಿಗುಕೂಡ ಅಷ್ಟೊಂದು ಲವಲವಿಕೆಯಿಂದ ಇರಲು ಅದಕ್ಕೆ ಅವರು ಮಾಡುವ ಯೋಗವೇ ಕಾರಣವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಓಂಕಾರ ಯೋಗ ಪ್ರತಿಷ್ಠಾನದ ಸಂತೋಷ ಹೆಡಗಿನಾಳ ಮತ್ತು ಮಲ್ಲಿಕಾರ್ಜುನ ಸಜ್ಜನ್ ಅವರ ಮಾರ್ಗದರ್ಶನದಲ್ಲಿ ಹಲವಾರು ಭಂಗಿಗಳ ಯೋಗ ಮಾಡಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಯೋಗದಲ್ಲಿ ಭಾಗವಹಿಸಿ ಎಲ್ಲರಿಗೂ ಪ್ರೇರಣೆಯಾದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ನಾಯಕ ಜೇವರ್ಗಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ,ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ರಾಜಾ ಮುಕುಂದ ನಾಯಕ,ಆಯುಷ್ ಇಲಾಖೆಯ ಸಂಜಯ್ ಕುಲಕರ್ಣಿ,ಡಾ:ಮೀರಾ ಜೋಷಿ,ಡಾ:ಶಫೀಕ್ ಅಹ್ಮದ್ ಉಪಸ್ಥಿತರಿದ್ದರು.ಬಸವರಾಜ ದೇವಾಪುರ ಸ್ವಾಗತಿಸಿದರು,ಸಚಿನ ನಾಯಕ ಪ್ರಾರ್ಥಿಸಿದರು,ಲಕ್ಷ್ಮಣ ಬಿರಾದಾರ ನಿರೂಪಿಸಿದರು,ಆಯಷ್ ವೈದ್ಯ ಡಾ:ಸಂಜಯ್ ಕುಲಕರ್ಣಿ ವಂದಿಸಿದರು.
ಮುಖಂಡರಾದ ವೇಣುಗೋಪಾಲ ನಾಯಕ ಜೇವರ್ಗಿ,ರಾಜು ಪುಲ್ಸೆ,ಯಲ್ಲಪ್ಪ ಹುಲಿಕಲ್,ಬಿಇಒ ಮಹಾದೇವರೆಡ್ಡಿ,ಸಿಡಿಪಿಒ ಲಾಲಸಾಬ್ ಪೀರಾಪುರ,ಸಮಾಜ ಕಲ್ಯಾಣ ಇಲಾಖೆ ಎಡಿ ಸತ್ಯನಾರಾಯಣ ದರಬಾರಿ,ಬಿಸಿಎಮ್ ಇಲಾಖೆಯ ತಿಪ್ಪಾರಡ್ಡಿ ಪಾಟೀಲ್,ಪಿಎಸ್‌ಐ ಕೃಷ್ಣಾ ಸುಬೇದಾರ ಸೇರಿದಂತೆ ಎಲ್ಲಾ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…