ಬಿಸಿ ಬಿಸಿ ಸುದ್ದಿ

ಜನಸ್ನೇಹಿ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ ಅವರೊಂದಿಗೆ ಸಂವಾದ

  • ಉಳಿತಾಯ ಪ್ರವೃತ್ತಿ ಒತ್ತಡಕ್ಕೆ ಉಪಶಮನ

ಕಲಬುರಗಿ: ಇರುವುದರಲ್ಲಿಯೇ ನೆಮ್ಮದಿಯಿಂದ ಬದಕುವುದನ್ನು ರೂಢಿಸಿಕೊಳ್ಳುವುದರ ಜೊತೆಗೆ ಉಳಿತಾಯ ಪ್ರವೃತ್ತಿ ರೂಢಿಸಿಕೊಳ್ಳುವುದು ಒತ್ತಡ ಉಪಶಮನಕ್ಕೆ ಹಾದಿ ಮಾಡಿಕೊಡುತ್ತದೆ ಎಂದು ಬೆಂಗಳೂರಿನ ನಿಮ್ಹಾನ್ಸ್ ನಿವೃತ್ತ ಪ್ರಾಧ್ಯಾಪಕ ಹಾಗೂ ಜನಸ್ನೇಹಿ ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಕಿವಿಮಾತು ಹೇಳಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಅವರು ಪತ್ರಕರ್ತರೊಂದಿಗೆ ನಡೆಸಿದ ’ಒತ್ತಡ ನಿರ್ವಹಣೆ’ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋವಿಡ್ ನಂತರದ ದಿನಗಳಲ್ಲಿ ಆರ್ಥಿಕ ಕ್ಷೋಭೆ ಜನರನ್ನು ಹೆಚ್ಚು ಬಾಧಿಸುತ್ತಿದೆ. ಇರುವ ಉದ್ಯೋಗ ಕಳೆದುಕೊಂಡು ಅಭದ್ರತೆ ಹೆಚ್ಚು ಕಾಡುತ್ತಿದೆ. ಹೀಗಾಗಿ ಪರ್ಯಾಯ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಒಣ ಪ್ರತಿಷ್ಠೆಗೆ ಜೋತು ಬೀಳುವುದರ ಬದಲು ಪ್ರಶಾಂತ ಮನಸ್ಸಿನಿಂದ ಹೊಸ ಆಯ್ಕೆಗೆ ಮುಂದಾಗಬೇಕು ಎಂದು ಡಾ.ಸಿ.ಆರ್.ಸಿ ಸಲಹೆ ನೀಡಿದರು.

ಮಕ್ಕಳಿಗೆ ಹಣದ ಬೆಲೆಯ ಕುರಿತು ಅರಿವು ಮೂಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಪೋಷಕರು ಎಚ್ಚರ ವಹಿಸಬೇಕೆಂದು ನುಡಿದರು.
ಮನಸ್ಸು ಎಲ್ಲದಕ್ಕೂ ಮೂಲ ಎಂಬ ಸತ್ಯವನ್ನು ಅರಿಯಬೇಕು. ಮನಸ್ಸು ಪ್ರಶಾಂತವಾಗಿದ್ದರೆ ಬದುಕಿನಲ್ಲಿ ನೆಮ್ಮದಿ ನೆಲೆಸುತ್ತದೆ. ಪ್ರಶಾಂತ ಮನಸ್ಸಿರುವ ವ್ಯಕ್ತಿಗಳಿಗೆ ರೋಗಗಳ ಸೋಂಕು ಸಹ ಕಾಡುವುದಿಲ್ಲ ಎಂದರು.

ಬದುಕಿನಲ್ಲಿ ಎದುರಾಗುವ ಸಮಸ್ಯೆಗಳು ನಮ್ಮಲ್ಲಿ ಕೌಶಲ ಹೆಚ್ಚಾಗಲು ಸಕಾರಾತ್ಮಕವಾಗಿ ಸಹಕರಿಸುತ್ತವೆ. ಕೋವಿಡ್ ಕಾಲಘಟ್ಟದಲ್ಲಿ ಜನರಲ್ಲಿ ಸ್ವಚ್ಛತೆಯ ಕುರಿತಾದ ಪ್ರಜ್ಞೆ ಜಾಗೃತಗೊಂಡಿದೆ. ಪರ್ಯಾಯ ಉದ್ಯೋಗ ಹುಡುಕುವ ಧೈರ್ಯ ಹೆಚ್ಚಾಗಿರುವುದು ಇದಕ್ಕೆ ಉತ್ತಮ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ಸಿ.ಆರ್.ಚಂದ್ರಶೇಖರ್ ಅವರ ’ ಮನೋವೈದ್ಯನ ಆತ್ಮಕಥನ ’ ದ್ವಿತೀಯ ಮುದ್ರಣದ ಕೃತಿಯನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಪಾತ್ರರಾದ ಗುರಮ್ಮ ಸಿದ್ದಾರೆಡ್ಡಿ, ಬಿಡುಗಡೆಗೊಳಿಸಿ ಮಾತನಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಷಡಕ್ಷರಿಸ್ವಾಮಿ ಡಿಗ್ಗಾಂವಕರ ಟ್ರಸ್ಟ್ ಮತ್ತು ಬಿ.ಎಸ್. ದೇಸಾಯಿ ಗೆಳೆಯರ ಬಳಗ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ವೇದಿಕೆಯಲ್ಲಿ ವೈದ್ಯ ಕನ್ನಡ ಸಾಹಿತ್ಯ ಪರಿಷತ್ ಮುಖ್ಯಸ್ಥರಾದ ಡಾ.ಎಸ್.ಎಸ್.ಗುಬ್ಬಿ, ಬಿ.ಎಸ್.ದೇಸಾಯಿ, ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ್, ರಾಜ್ಯ ಸಮಿತಿಯ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ ವೇದಿಕೆಯಲಿದ್ದರು.

ಷಡಕ್ಷರಿಸ್ವಾಮಿ ಡಿಗ್ಗಾಂವಕರ ಟ್ರಸ್ಟ್ ಅಧ್ಯಕ್ಷ ಎಸ್.ಎಸ್.ಹಿರೇಮಠ ನಿರ್ವಹಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ವಂದಿಸಿದರು. ವಿವಿಧ ಸುದ್ದಿಸಂಸ್ಥೆಗಳ ಪತ್ರಕರ್ತರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನವ ಪೋಷಕರಿಗೆ ಕೌನ್ಸೆಲಿಂಗ್ ಅಗತ್ಯ: ನವ ದಂಪತಿಗಳ ಕುಟುಂಬದಲ್ಲಿ ಹೊಸದಾಗಿ ಮಗು ಬಂದಾಗ ಆ ಮಗುವಿಗೆ ಹೇಗೆಲ್ಲಾ ಬದುಕಿನ ಕೌಶಲಗಳನ್ನು ಕಲಿಸಬೇಕು ಎಂಬುದರ ಕುರಿತು ಕೌನ್ಸೆಲಿಂಗ್ ನಡೆಸಬೇಕಾದ ಅಗತ್ಯವಿದೆ ಎಂದು ಮನೋವೈದ್ಯ ಡಾ.ಸಿ.ಆರ್. ಚಂದ್ರಶೇಖರ್ ಅಭಿಪ್ರಾಯಪಟ್ಟರು.

ಇಂದಿನ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದೆ. ಒಂದೆಡೆ ಮೊಬೈಲ್ ಮಕ್ಕಳನ್ನು ಹಾಳು ಮಾಡುತ್ತಿದೆ ಎಂಬ ಆತಂಕ ಪೋಷಕರನ್ನು ಕಾಡುತ್ತಿದೆ. ಮತ್ತೊಂದೆಡೆ, ಮೊಬೈಲ್ ಬಳಸುವುದರಿಂದ ಮಕ್ಕಳ ಜ್ಞಾನ ಕ್ಷಿತಿಜ ಮತ್ತಷ್ಟು ವಿಸ್ತರಿಸಿಕೊಳ್ಳುವುದು ಹೇಗೆ ಎಂಬುದರ ಕುರಿತಾಗಿ ಸಕಾರಾತ್ಮಕ ಸಲಹೆಗಳನ್ನು ನೀಡಬೇಕಿದೆ. ಈ ನಿಟ್ಟಿನಲ್ಲಿ ನವ ಪೋಷಕರಿಗಾಗಿ ಕೌನ್ಸೆಲಿಂಗ್ ಹಮ್ಮಿಕೊಳ್ಳುವುದು ಒಳ್ಳೆಯದು ಎಂದು ನುಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago