ಕಲಬುರಗಿ: ರಾಹುಲ್ ಗಾಂಧಿ ವಿರುದ್ಧ ಇ.ಡಿ ಬಿಟ್ಟು ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಬಿಜೆಪಿ ಸೇಡಿನ ರಾಜಕಾರಣ ನಡೆಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಉತ್ತರ ಮತಕ್ಷೇತ್ರ ಬ್ಲಾಕ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ ಕಾರ್ಯಕರ್ತರು, ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸು ನಾಶಮಾಡಲು ತಂತ್ರಕ್ಕೆ ಬಿಜೆಪಿ ಕೈ ಹಾಕಿದೆ ಎಂದು ಪಾಲಿಕೆ ಸದಸ್ಯ ಸೈಯದ್ ಅಹ್ಮದ್ ಹೇಳಿದರು.
ಬಿಜೆಪಿ ಸರಕಾರ ಇ.ಡಿಯನ್ನು ಬಳಸಿಕೊಂಡು ಸುಳ್ಳು ಕೇಸ್ ಹಾಕುವ ಮೂಲಕ ಸುಳ್ಳಿನ ರಾಜಕಾರಣ ನಡೆಸುತ್ತಿದೆ. ಕಾಂಗ್ರೆಸ್ ತೇಜೋವಧೆ ನಡೆಸಲು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮಝರ ಆಲಮ್ ಖಾನ್ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಕಾಂಗ್ರೆಸ್ ನ್ನು ಟಾರ್ಗೆಟ್ ಮಾಡಿ ನಾಯಕರನ್ನು ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದೆ. ರಾಹುಲ್ ಗಾಂಧಿ ಬಿಜೆಪಿ ಸರಕಾರ ತಪ್ಪುಗಳನ್ನು ಜನರ ಮುಂದೆ ತರುತಿರುವುದನ್ನು ಸಹಿಸದೆ ಕೇಂದ್ರ ಸರಕಾರ ಇ.ಡಿ, ಸಿಬಿಐ ಯಂತಹ ತನಿಖಾ ಸಂಸ್ಥೆಯನ್ನು ಬಳಸಿಕೊಂಡು ನಾಯಕರ ಧ್ವನಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ನ್ಯಾಯವಾದಿ ವಹಾಜ್ ಬಾಬಾ ಹೇಳಿದರು.
ಈ ಸಂದರ್ಭದಲ್ಲಿ ವಾಹೆದ್ ಅಲಿ ಫಾತೇಖಾನಿ, ದಸ್ತೇಗಿರ್ ಅಹ್ಮದ್, ಸಾಜಿದ್ ಅಲಿ ರಂಜೋಳ್ವಿ, ಮಹಾನರ ಪಾಲಿಕೆ ಸದಸ್ಯರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…