ಬಿಸಿ ಬಿಸಿ ಸುದ್ದಿ

ಸಮುದಾಯ ಮಾನಸಿಕ ಆರೋಗ್ಯ ಕೇಂದ್ರ ಸ್ಥಾಪಿಸಿ ಕಾರ್ಯನಿರ್ವಹಿಸಲು ಎನ್.ಜಿ.ಓ. ಗಳಿಂದ ಅರ್ಜಿ ಆಹ್ವಾನ

ಕಲಬುರಗಿ,ಜು.೨೬.(ಕ.ವಾ)-ತೀವ್ರತರವಾದ ಮಾನಸಿಕ ಖಾಯಿಲೆಗಳಿಂದ ಗುಣ ಹೊಂದಿದ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆ, ಮೆಡಿಕಲ್ ಕಾಲೇಜು ಆಸ್ಪತ್ರೆ, ಇನ್ಯಾವುದೇ ಸರ್ಕಾರಿ ಕಟ್ಟಡಗಳಲ್ಲಿ ಅಥವಾ ಸರ್ಕಾರಿ ಕಟ್ಟಡ ಲಭ್ಯವಿಲ್ಲದ ಪಕ್ಷದಲ್ಲಿ ಜಿಲ್ಲಾ ಆಸ್ಪತ್ರೆ ಹತ್ತಿರದಲ್ಲಿ ಬಾಡಿಗೆ ಕಟ್ಟಡದಲ್ಲಿ ಸಮುದಾಯ ಮಾನಸಿಕ ಆರೋಗ್ಯ ಕೇಂದ್ರ (ಡೇ ಕೇರ್ ಸೆಂಟರ್), ಪುನರ್ವಸತಿ ಕೇಂದ್ರವನ್ನು ಸ್ಥಾಪಿಸಿ ಕಾರ್ಯನಿರ್ವಹಿಸಲು ಆಸಕ್ತಿಯಿರುವ ಸರ್ಕಾರೇತರ ಸಂಸ್ಥೆ (ಎನ್.ಜಿ.ಓ.) ಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರೇತರ ಸಂಸ್ಥೆಯಾಗಿ ಅಧೀಕೃತ ನೋಂದಣಿ ಮಾಡಿಸಿದ ಪ್ರಮಾಣ ಪತ್ರ ಹೊಂದಿರಬೇಕು. ಸಂಸ್ಥೆಯು ಕನಿಷ್ಠ ಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿರಬೇಕು. ಮುಖ್ಯವಾಗಿ ಮಾನಸಿಕ ರೋಗಿಗಳಿಗೆ ಸೇವೆ ಗೈಯುವ ಉದ್ದೇಶ ಮತ್ತು ಆಸಕ್ತಿ ಹೊಂದಿರಬೇಕು. ಆರೋಗ್ಯ ಕ್ಷೇತ್ರದಲ್ಲಿ ಹಾಗೂ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಆಡಳಿತ ಮಂಡಳಿ ಹೊಂದಿರಬೇಕು. ಸಂಸ್ಥೆ ಲಾಭಕ್ಕಾಗಲಿ ಅಥವಾ ಮಂಡಳಿಯ ಸದಸ್ಯರ ಲಾಭಕ್ಕಾಗಲಿ ನಡೆಸಿಸಬಾರದು. ಸಂಸ್ಥೆಯು ಮಾನಸಿಕ ಆರೋಗ್ಯ ವೃತ್ತಿಪರ ಕೌಶಲ್ಯ ಹೊಂದಿದ ಸಿಬ್ಬಂದಿಗಳಾದ ಮನೋವೈದ್ಯರು, ಮನಶಾಸ್ತ್ರಜ್ಞರು, ಮನೋವೈದ್ಯಕೀಯ ಸಮಾಜ ಕಾರ್ಯಕರ್ತರ ಪೈಕಿ ಒಬ್ಬ ಸಿಬ್ಬಂದಿ ಲಭ್ಯವಿರಬೇಕು.

ಅರ್ಹ ಸ್ವಯಂ ಸೇವಾ ಸಂಸ್ಥೆಗಳು (ಎನ್.ಜಿ.ಓ.) ಕಾರ್ಯನಿರ್ವಹಣೆಯ ಪೋಟೋ ಸಹಿತ ಬುಕ್‌ಲೇಟ್‌ದೊಂದಿಗೆ ೨೦೧೯ರ ಆಗಸ್ಟ್ ೨ರ ಸಂಜೆ ೪.೩೦ ಗಂಟೆಯೊಳಗಾಗಿ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳವರ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago