ಬಿಸಿ ಬಿಸಿ ಸುದ್ದಿ

ಕಂದಕೂರು ಕೊಂಡಮಾಯಿ ಚೇಳಿನ ಬೆಟ್ಟದ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಲಿ: ಉಮೇಶ ಮುದ್ನಾಳ

ಯಾದಗಿರಿ: ದೇಶ ಪ್ರಸಿದ್ಧವಾಗಿರುವ ಗುರಿಮಿಠಕಲ್ ತಾಲ್ಲೂಕಿನ ಕಂದಕೂರು ಕೊಂಡಮಾಯಿ ಚೇಳಿನ ಬೆಟ್ಟಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಟೋಕ್ರೆ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿ ವರ್ಷದಂತೆ ಈ ವರ್ಷವೂ ದಿನಾಂಕ: ೦೫-೦೮-೨೦೧೯ ರಂದು ನಾಗರ ಪಂಚಮಿಗೆ ನಡೆಯುವ ಚೇಳಿನ ಜಾತ್ರೆಗೆ ನಾಡಿನ ಮೂಲೆ ಮೂಲೆಗಳಿಂದ ಅಲ್ಲದೇ ಪರರಾಜ್ಯಗಳಿಂದ ಜನತೆ ಆಗಮಿಸುತ್ತಿದ್ದು, ಇದೊಂದು ಅಂತಾರಾಜ್ಯ ಪ್ರವಾಸಿ ತಾಣವಾಗಿದ್ದು, ಆಗಮಿಸುವ ಜನತೆಗೆ ಮೂಲ ಸೌಕರ್ಯ ಒದಗಿಸುವುದು ಜಿಲ್ಲಾಡಳಿತದ ಆದ್ಯ ಕರ್ತವ್ಯವಾಗಬೇಕಿದೆ. ಸಮಯ ಬಹಳ ಕಡಿಮೆ ಇರುವುದರಿಂದ ತಕ್ಷಣ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ದಿಢೀರನೇ ಭೆಟಿ ಕೊಟ್ಟು ದೇವಸ್ಥಾನದ ಕಮಿಟಿ ಜೋತೆ ಸಂಭಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಲ್ಲಿನ ವಿಶೇಷ ಮೂಲಭೂತ ಸೌಕರ್ಯಗಳ ಅಗತ್ಯತೆಯನ್ನು  ಮನಗಾಣಬೇಕೆಂದು ಅವರು ಆಗ್ರಹಿಸಿದ್ದಾರೆ.

ಗುಡ್ಡದ ಮೇಲೆ ಶುದ್ಧ ಕುಡಿವ ನೀರು ಶೌಚಾಲಯ ವ್ಯವಸ್ಥೆ ಮಾಡಬೇಕು. ಮತ್ತು ಕಂದಕೂರು ವೃತ್ತದಲ್ಲಿಯೂ ಸಹ ಕುಡಿವ ನೀರು ಮತ್ತು ಶೌಚಾಲಯ ವ್ಯವಸ್ಥೆ ಮಾಡಬೇಕು. ಕಂದಕೂರಿನಿಂದ ಬೆಟ್ಟಕ್ಕೆ ಹೋಗುವ ಎರಡು ರಸ್ತೆಗಳಲ್ಲಿ ಜಾಲಿ ಗಿಡಗಳು ಬೆಳೆದಿದ್ದು, ತಕ್ಷಣ ಜಂಗಲ್ ಕಟಿಂಗ್ ಮಾಡಬೇಕು. ಸ್ಥಳೀಯರೇ ೩-೪ ವರ್ಷಗಳಿಂದ ಈ ಕಾರ್ಯ ಮಾಡುತ್ತಿದ್ದು, ಈ ಬಾರಿ ಜಿಲ್ಲಾಡಳಿತ ವಿಶೇಷ ಆಸಕ್ತಿ ವಹಿಸಲಿ ಎಂದು ಅವರು ಆಗ್ರಹಿಸಿದ್ದಾರೆ. ಜಾತ್ರೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಮತ್ತು ಜಾತ್ರೆ ವೇಳೆ ಜನಸಂದಣಿ ಹಾಗೂ ಕಲಹ ನಿಯಂತ್ರಣಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಇಲ್ಲವಾದಲ್ಲಿ ಜಾತ್ರೆಯ ದಿನದಂದು ಕಂದಕೂರು ವೃತ್ತದಲ್ಲಿ ರಸ್ತೆ ತಡೆ ಸೇರಿದಂತೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

41 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago