ಬಿಸಿ ಬಿಸಿ ಸುದ್ದಿ

ಉತ್ತಮ ಸಮಾಜ ನಿರ್ಮಾಣದಲ್ಲಿ ಎನ್.ಎಸ್.ಎಸ್ ಪಾತ್ರ ಹಿರಿದು: ಸಚಿವ ಡಾ.ಕೆ.ಸಿ ನಾರಾಯಣಗೌಡ

ಬೆಂಗಳೂರು: ರಾಜ್ಯದಲ್ಲಿ 56 ವಿಶ್ವವಿದ್ಯಾಲಯ ಕಾಲೇಜು ಹಾಗೂ 4 ನಿರ್ದೇಶನಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ರಾಜ್ಯದಲ್ಲಿ 5 ಲಕ್ಷ ಸ್ವಯಂ ಸೇವಕ/ ವಕಿಯರು ನೋಂದಾಯಿಸಿಕೊಂಡಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ. ಸಿ ನಾರಾಯಣಗೌಡ ಅವರು ಹೇಳಿದರು.

ಅವರು ಇಂದು ವಿಕಾಸೌಧದ ಸಭಾಂಗಣದಲ್ಲಿ ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಇವರ ವತಿಯಿಂದ  ಆಯೋಜಿಸಿದ್ದ ಸಲಹಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 2021-22ರ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಕುರಿತು 2022-23 ರ ಸಲಹಾ ಸಮಿತಿಯಲ್ಲಿ ಗಾಂಧೀಜಿಯವರ ತತ್ವಗಳನ್ನು ಪಾಲಿಸುತ್ತಾ ಎನ್.ಎಸ್.ಎಸ್‌ ಅಭಿವೃದ್ಧಿಯಲ್ಲಿ ಕರ್ನಾಟಕವು ಭಾರತದಲ್ಲೇ ಒಂದನೇ ಸ್ಥಾನಕ್ಕೆ ತಲುಪಿದೆ. ಎನ್.ಎಸ್.ಎಸ್‌ ಇನ್ನಷ್ಟು ಸೇವೆಗಳ ಮೂಲಕ ಅಭಿವೃದ್ಧಿಯತ್ತ ಸಾಗಲಿ.” ಎಂದು ಸಚಿವರು ಆಶಿಸಿದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.  ಶಾಲಿನಿ ರಜನೀಶ್ ಅವರು ಮಾತನಾಡಿ,”ಸಮಾಜದ ಅಗತ್ಯತೆಗಳನ್ನು ಗರುತಿಸಿ, ಜೀವನ ಕೌಶಲ್ಯಗಳ ತರಬೇತಿಯನ್ನು ನೀಡುವುದು ಅತ್ಯಗತ್ಯ”. ಎಂದರು.

ಕಾನೂನು ನೆರವಿನ ಕುರಿತು ಮಾತನಾಡಿ, “ಜನರಲ್ಲಿ ಕಾನೂನು ನೆರವಿನ ಕುರಿತು ಇನ್ನಷ್ಟು ಹೆಚ್ಚು ಜಾಗೃತಿ ಮೂಡಿಸಬೇಕು. ʼಕಾನೂನು ನೆರವಿನʼ ಬಗ್ಗೆಯು ಎನ್.ಎಸ್.ಎಸ್‌ ವಿದ್ಯಾರ್ಥಿಗಳ ಸಹಾಯದಿಂದ ಜಾಗೃತಿ ಮೂಡಿಸಬಹುದು. ಈ ಮೂಲಕ ನಮ್ಮ ಸಮಾಜದಲ್ಲಿ ಹೆಚ್ಚಿನ ಶಾಂತಿಯನ್ನು ಕಾಪಾಡಬಹುದು.” ಎಂದು ಹೇಳಿದರು.

” ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಪ್ರತೀ ವಿಭಾಗದಲ್ಲು ಒಬ್ಬ ಸಂಪನ್ಮೂಲ ವ್ಯಕ್ತಿಯನ್ನು ನೇಮಿಸಬೇಕು. ಸ್ವಸಹಾಯ ಸಂಘಗಳಿಗೆ, ಶಿಕ್ಷಣ ಸಂಸ್ಥೆಗಳಿಂದ ತಂತ್ರಜ್ಞಾನ ಮಾಹಿತಿ ವರ್ಗಾವಣೆ ಆಗಬೇಕು. ಆಧುನಿಕ ಯುಗವು ಸ್ಪರ್ಧಾತ್ಮಕ ಯುಗವಾದ್ದರಿಂದ ನಾವೀನ್ಯತೆಯನ್ನು ಹೊರತರಲು ಹೆಚ್ಚಿನ ಒತ್ತನ್ನು ನೀಡಬೇಕು. ಎಲ್ಲಾ ವಿಶ್ವವಿದ್ಯಾಲಯಗಳು ಯುವ ಸ್ಪಂದನ ಯೋಜನೆಗೆ ಬೆಂಬಲಿಸಬೇಕು” ಎಂದು ಹೇಳಿದರು.

“ಆರೋಗ್ಯ ಮತ್ತು ಯೋಗಕ್ಷೇಮದ ಕುರಿತು ಮಾತನಾಡುತ್ತಾ, ಯೋಗವನ್ನು ಒಂದು ಕ್ರೀಡೆಯೆಂದು ಪರಿಗಣಿಸಲಾಗಿದೆ. ಆದ್ದರಿಂದ ಯೋಗದ ಪ್ರಯೋಜನಗಳ ಕುರಿತು ಹೆಚ್ಚಿನ ಅರಿವನ್ನು ಮೂಡಿಸುವ ಕೆಲಸ ಆಗಬೇಕು. ಮಾನಸಿಕ, ದೈಹಿಕ ಹಾಗೂ ಆರ್ಥಿಕ ಆರೋಗ್ಯಕ್ಕೆ ಹೆಚ್ಚು ಗಮನ ನೀಡಬೇಕು” ಎಂದು ಹೇಳಿದರು.

ಸಭೆಯಲ್ಲಿ ಮೊದಲಿಗೆ ಹಿಂದಿನ ಸಭೆಯ ನಿರ್ಣಯಗಳನ್ನು ಅಂಗೀಕರಿಸಿ ಅವುಗಳನ್ನು ಅನುಷ್ಟಾನಗೊಳಿಸುವುದರ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ೨೦೨೧-೨೨ನೇ ಸಾಲಿನ ಕಾರ್ಯಚಟುವಟಿಕೆಗೆಳ ಪರಮಾರ್ಶೆ- ರದಿಯನ್ನು ಬಿಡುಗಡೆ ಮಾಡಲಾಯಿತು.ಸಭೆಯಲ್ಲಿ ೨೦೨೨-೨೩ನೇ ಸಾಲಿನ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳ ಜವಾಬ್ದಾರಿ ನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿ, ಈ ಸಾಲಿನಲ್ಲಿ ಭಾರತ ಸರ್ಕಾರ ನಡೆಸುತ್ತಿರುವ ಭಾವೈಕ್ಯತಾ ಶಿಬಿರದ ಮಾದರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕನಿಷ್ಟ ೧೦ ಭಾವೈಕ್ಯತಾ ಶಿಬಿರದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ವಿವರಗಳನ್ನು ಹಂಚಿಕೊಂಡರು.

ಈ ಸಾಲಿನ ಪೂರ್ವಭಾವಿ ಗಣರಾಜ್ಯೋತ್ಸವ ಪಥಸಂಚಲನ ನಡೆಸುವ ಜವಾಬ್ದಾರಿ,  ಯುವಜನೋತ್ಸವಗಳನ್ನು ನಡೆಸುವುದು, ರಾಜ್ಯ ಮಟ್ಟದ ಎನ್‌ಎಸ್‌ಎಸ್‌ ಪ್ರಶಸ್ತಿ ಪ್ರಧಾನ ಸಮಾರಂಭ ನಡಎಸುವುದನ್ನು ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಯಿತು. ನಿಮ್ಹಾನ್ಸ್‌ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಜೀವ ಕೌಶಲ್ಯ ತರಬೇತಿ ಮತ್ತು ಆಪ್ತಸಲಹೆ ಬಗ್ಗೆ ಮಾಹಿತಿ ನೀಡಲಾಯಿತು. ಆರೋಗ್ಯ ಶೀಬಿರಗಳು ಮತ್ತು ಕ್ಯಾನ್ಸರ್‌ ಔಟ್‌ ರೀಚ್‌ ಕಾರ್ಯಕ್ರಮಗಳನ್ನು ಬುಡಕಟ್ಟು ಮತ್ತು ಹಿಂದುಳಿದ ಜನಾಂಗಗಳ ಪ್ರದೇಶದಲ್ಲಿ ನಡೆಸುವ ಬಗ್ಗೆ ಹಾಗು ಡೇಟಾಬೇಸ್‌ ಕಾರ್ಯಕ್ರಮದ ಪ್ರಗತಿಯ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

2022-23ನೇ ಸಾಲಿನಲ್ಲಿ ಪ್ರೌಢಶಾಲೆಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳವುದರ ಬಗ್ಗೆ ಮಾಹಿತಿ ಒದಗಿಸಲಾಯಿತು. ಮಾಹಾತ್ಮ ಗಾಂಧೀಜಿಯವರ ವಿಚಾರ ಧಾರೆಗಳ ಕುರಿತಾದ ಕಾರ್ಯಕ್ರಮಗಳನ್ನು ಆಯೋಜಿಸುವುದರ ಬಗ್ಗೆ ಚರ್ಚಿಸುವದರೊಂದಿಗೆ ಕಾನೂನು ಅರಿವು ಕಾರ್ಯಕ್ರಮ ನಡೆಸುವ ಕುರಿತು ಚರ್ಚಿಸಲಾಯಿತು. ಈ ಸಾಲಿನಲ್ಲಿ MŞW/BŞW Mass medi̧a Journalişm IT and Lawನ UG Final year ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಟರ್ನ್‌ಷಿಪ್‌ ನೀಡುವ ಕುರಿತು ಸಹ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಹೊಸ ಶಿಕ್ಷಣ ನೀತಿ ಅನುಸಾರ ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯನ್ನು ಪಠ್ಯಕ್ರಮದಲ್ಲಿ ಅಳವಡಿಸುವ ಬಗ್ಗೆ ವಿಶೇಷವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ರಾಜ್ಯ ಎನ್‌.ಎಸ್‌.ಎಸ್ ಅಧಿಕಾರಿಗಳಾದ ಪ್ರತಾಪ್‌ ಲಿಂಗಯ್ಯ, ಎ‌ನ್‌.ಎಸ್‌.ಎಸ್ ಪ್ರಾಂತೀಯ ಕೇಂದ್ರದ ನಿರ್ದೇಶಕರಾದ ಖಾದ್ರಿ ನರಸಿಂಹಯ್ಯ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಗೋಪಾಲ್‌ ಕೃಷ್ಣ ವಿಭಾಗ ಮುಖ್ಯಸ್ಥರು ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago