ಚಿತ್ತಾಪುರ: ತಾಲೂಕು ಈಡಿಗ ಸಮಾಜದ ಅಧ್ಯಕ್ಷ ವಿನೋದ ಗುತ್ತೇದಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದೇನೆ. ೨೦೧೧ ರಿಂದ ಸತತ ೧೨ ವರ್ಷಗಳಿಂದ ಅಧ್ಯಕ್ಷರಾಗಿ ಸಮಾಜದ ಸೇವೆ ಪ್ರಾಮಾಣಿಕವಾಗಿ ಸಲ್ಲಿಸಿದ್ದೇನೆ ಎಂಬ ಹೆಗ್ಗಳಿಕೆ ಇದೆ ಎಂದರು.
ಎಲ್ಲರನ್ನು ಸಮಾನತೆಯಿಂದ ಸಮಾಜದ ಏಳ್ಗೆಗೆ ಶ್ರಮಿಸಿದ್ದೇನೆ. ಸಮಾಜದ ಪ್ರತಿಯೊಂದು ಸಮಾರಂಭ ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಸಮಾಜದ ಜನರಿಗೆ ಪ್ರತಿಯೊಂದು ಹಕ್ಕು ಸಿಗಲು ಎಲ್ಲರೊಂದಿಗೆ ಹೋರಾಟ ಮಾಡಿದ್ದೇನೆ. ಸಮಾಜದ ಜನರ ಕುಲಕಸಬು ಸಿಗಬೇಕೆಂಬ ಸ್ವಾಮಿಗಳ ನೇತೃತ್ವದಲ್ಲಿ ಪಾದಯಾತ್ರೆ, ಹೋರಾಟ ಮಾಡಲಾಗಿದೆ. ಹಿರಿಯರು, ಕಿರಿಯರು, ಯುವಕರು, ಮಹಿಳೆಯರು ಸಮಾಜದ ಕಾರ್ಯಗಳಿಗೆ ನನಗೆ ಸಹಕಾರ ನೀಡಿದ್ದಾರೆ.
ಇದರಿಂದಾಗಿ ಅವರ ಸಹಕಾರ ಮರೆಯಲಾರೆ. ಮನೆಯ ವೈಯಕ್ತಿಕ ಕೆಲಸಗಳಿಂದ ಸಮಾಜದ ಕೆಲಸಕ್ಕೆ ಸತತ ಸಮಯ ನೀಡಲು ಆಗುತ್ತಿಲ್ಲ. ಯಾರು ತಪ್ಪು ಕಲ್ಪನೆ ಭಾವಿಸಬಾರದು. ಅಧ್ಯಕ್ಷ ಸ್ಥಾನ ಹೊಸಬರಿಗೂ ಸಿಗಬೇಕು. ಈಗ ಎಲ್ಲರೂ ಒಗ್ಗೂಡಿ, ಸಮಾಜದ ಸ್ವಾಮಿಗಳ ಸಾನ್ನಿಧ್ಯದಲ್ಲಿ ಎಲ್ಲರ ಸಲಹೆ ಮೇರೆಗೆ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿ ಅವರ ಕೆಲಸಗಳಿಗೆ ನಾವುಗಳು ಸಾಥ ನೀಡೋಣ. ಸಮಾಜ ಇನ್ನೂ ಹೆಚ್ಚು ಎತ್ತರಕ್ಕೆ ಬೆಳೆಸೋಣ ಎಂದು ಅವರು ಹೇಳಿದರು.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…