ಬಿಸಿ ಬಿಸಿ ಸುದ್ದಿ

ನನ್ನ ಸರಕಾರ ತೆಗೆದಂತೆ ಮಹಾರಾಷ್ಟ್ರ ಸರಕಾರ ತೆಗೆಯಲು ಹೊರಟಿದ್ದಾರೆ: ಮಾಜಿ ಸಿಎಂ

  • ರಾಹುಲ್ ಗಾಂಧಿ, ಕಾಂಗ್ರೆಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ
  • ಇರುವ ಸತ್ಯವನ್ನಷ್ಟೆ ಹೇಳಿದ್ದೇನೆ

ರಾಮನಗರ: ಕಾಂಗ್ರೆಸ್ ಬಗ್ಗೆ ಆಗಲಿ ಅಥವಾ ರಾಹುಲ್ ಗಾಂಧಿ ಅವರ ಬಗ್ಗೆ ಆಗಲಿ ನನಗೆ ಸಾಫ್ಟ್ ಕಾರ್ನರ್ ಇಲ್ಲ. ನಾನು ಇದ್ದ ವಿಷಯವನ್ನೇ ಹೇಳಿದ್ದೇನೆ. ಕಾಂಗ್ರೆಸ್ ನಾಯಕರ ರೀತಿ ನಾನು ಬೀದಿಯಲ್ಲಿ ಬ್ಯಾರಿಕೇಡ್ ಹತ್ತಿ ಡಾನ್ಸ್ ಮಾಡುವುದಕ್ಕೆ ಹೋಗಬೇಕೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣದಲ್ಲಿ ಇ‌ಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇರುವಂತಹ ವಾಸ್ತವಾಂಶ ಹೇಳಿದ್ದೇನೆ. ಯಾವುದೇ ರೀತಿ ಯಾರ ಜತೆ ರಾಜಿಯಾಗಲಿ ಅಥವಾ ಅನುಕಂಪದ ಪ್ರಶ್ನೆ ಇಲ್ಲ ಎಂದರು.

ಈ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸ್ವಾಯುತ್ತ ಸಂಸ್ಥೆಗಳು ಯಾವ ರೀತಿ ಕೆಲಸ ಮಾಡ್ತಿವೆ ಎಂಬುದನ್ನು ಚರ್ಚೆ ಮಾಡಿದ್ದೇನೆ. ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರನ್ನು ಒಲೈಸಿಕೊಳ್ಳಲು ಹೇಳಿಲ್ಲ ಎಂದು ಅವರು ಹೇಳಿದರು.

ನಾನು ಈ ಹೇಳಿಕೆ ಕೊಟ್ಟಾಗ ಒಬ್ಬ ಬಿಜೆಪಿ ಸಂಸದರೇ ನನಗೆ ಪೋನ್ ಮಾಡಿ ಶಹಬ್ಬಾಸ್ ಗಿರಿ ಹೇಳಿದರು. ಈ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾತನಾಡಿದ್ದೀರಿ ಎಂದು ಹೇಳಿದರು. ನಮ್ಮ ಕುತ್ತಿಗೆ ಕುಯ್ದಿದ್ದೆ ಕಾಂಗ್ರೆಸ್ ನವರು. ನಾನು ಯಾಕೆ ಅವರ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಲಿ. ಕಾಂಗ್ರೆಸ್ ಹಾಗೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೇಯೆ ಇಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡವಳಿಕೆ ನೋಡಿದ್ದೇನೆ. ಇದನ್ನೇ ಮುಂದಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳ ಕುತಂತ್ರದ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ಎಂದು ಜನರ ಮುಂದೆ ಹೋಗುತ್ತೇವೆ ಎಂದು ಅವರು ಹೇಳಿದರು.

ಮಹಾರಾಷ್ಟ್ರದಲ್ಲಿ ಸರ್ಕಾರ ತೆಗೆಯಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ ಇಡೀ ದೇಶಕ್ಕೆ ಇದು ಬಿಜೆಪಿಯ ಆಟವೆಂದು ಗೊತ್ತು. ಬಿಜೆಪಿ ಸರ್ಕಾರವಿರುವ ರಾಜ್ಯಗಳಿಗೆ ಶಾಸಕರನ್ನು ಕರೆದೊಯ್ದಿದ್ದಾರೆ. ಶಾಸಕರನ್ನ ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ, ನಮ್ಮ ಶಾಸಕರನ್ನು ಮುಂಬೈಗೆ ಕರೆದೊಯ್ದಿದ್ದರು. ಇದು
ಕರ್ನಾಟಕದಲ್ಲಿ ನನ್ನ ಸರ್ಕಾರವನ್ನು ತೆಗೆದಂತೆ ಅಲ್ಲಿನ ಸರ್ಕಾರವನ್ನು ಕೊಡ ತೆಗೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಶಾಸಕರು ಒಂದು ಪಕ್ಷ ಬಿಟ್ಟು ಇನ್ನೊಂದು ಪಕ್ಷಕ್ಕೆ ಹೋಗಬೇಕಾದರೆ ಯಾವ ಆಮಿಷಗಳು ಇರುತ್ತವೆ. ಈ ವಿಷಯ ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ ಕಾರಣಗಳು ಬೇರೆ ಬೇರೆ ಕೊಡುತ್ತಾರೆ. ಚುನಾಯಿತ ಸರ್ಕಾರ ಅಸ್ಥಿರಗೊಳಿಸುವಂತದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಯಾರ ಸರ್ಕಾರ ಇರಬಾರದೆಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಒಳಗೊಂಡಂತೆ ಎಲ್ಲಾ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳೇ ಇರಬೇಕು. ಅವರ ಈ ರೀತಿಯ ಕುತಂತ್ರದ ಬೆಳವಣಿಗೆಗಳು ಏನಿದೆ. ಮುಂದಿನ ದಿನಗಳಲ್ಲಿ ಅವರಿಗೆ ಇದೇ ಬೂಮ್ ರಂಗ್ ಆಗಲಿದೆ ಎಂದು ಮಹಾರಾಷ್ಟ್ರ ಬೆಳವಣಿಗೆಗಳ ಬಗ್ಗೆ ಹೆಚ್‌ಡಿಕೆ ಅವರು ಅಭಿಪ್ರಾಯಪಟ್ಟರು.

ಶಿವಸೇನೆಯ ನಾಯಕ ಏಕನಾಥ್ ಶಿವಸಿಂಧೆ ಏನೇ ಹೇಳಲಿ, ಏಕನಾಥ್ ಶಿಂಧೆ ಶಿವಸೇನೆ ನಮ್ಮದೆಂದು ಕ್ಲೈಮ್ ಮಾಡಬಹುದು. ಸಂಖ್ಯಾಬಲದ ಆಧಾರದ ಮೇಲೆ ಅವರು ಕ್ಲೈಮ್ ಮಾಡಬಹುದು. ಚುನಾವಣೆಗೆ ಹೋದಾಗ ಬೇರೆಯದ್ದೇ ನಡೆಯುತ್ತದೆ. ಶಿವಸೇನೆಯ ಸಂಸ್ಥಾಪಕರು ಮತ್ತು ಯಾರು ಯಾರು ಪಕ್ಷಕ್ಕೆ ದುಡಿದಿದ್ದಾರೆ? ಯಾರು ಪಕ್ಷವನ್ನು ಕಟ್ಟಿದ್ದಾರೆ. ಕಾರ್ಯಕರ್ತರು ಯಾರ ಜೊತೆಗೆ ನಿಲ್ಲುತ್ತಾರೆ ಎನ್ನುವುದು ಗೊತ್ತಾಗುತ್ತದೆ. ಇವೆಲ್ಲದರ ಮೇಲೆ ಮುಂದಿನ ಬೆಳವಣಿಗೆ ತೀರ್ಮಾನವಾಗುತ್ತದೆಂಬುದು ನನ್ನ ಅಭಿಪ್ರಾಯ ಎಂದರು ಅವರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

7 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

7 hours ago