ಬಿಸಿ ಬಿಸಿ ಸುದ್ದಿ

ಮಾಧ್ಯಮ ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲಿ: ಖರ್ಗೆ

  • ದಿ ಡೈಲಿ ನ್ಯೂಸ್ ಕಲಬುರಗಿ ಬ್ಯೂರೂ ಕಚೇರಿ ಉದ್ಘಾಟಿಸಿದ ಸಚಿವ ನಿರಾಣಿ

ಕಳೆದ ಒಂದು ತಿಂಗಳ ಹಿಂದೆಯೇ ಪರಿಚಯವಾದ ದಿಡೈಲ್ ನ್ಯೂಸ್ ಪತ್ರಿಕೆ ರಾಜ್ಯದ ಕೈಗಾರಿಕೆ ಸಚಿವರ ಕುರಿತಾಗಿ ನಾಲ್ಕು ಪುಟಗಳ ವಿಶೇಷ ಪುರವಣಿ ತರವ ಮೂಲಕ ತನ್ನ ಇರುವಿಕೆಯನ್ನು ಈಗಾಗಲೇ ಸಾಬೀತು ಪಡಿಸಿದೆ. ನಾಡಿನ ಭರವಸೆಯ ಬೆಳಕಾಗಿ ಪತ್ರಿಕೆ ಮುನ್ನಡೆಯಲಿಂದು ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ದಿಡೈಲಿ ನ್ಯೂಸ್ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಕಲಬುರಗಿ: ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಮೇಲೆ ಬಹಳ ದೊಡ್ಡ ಜವಾಬ್ದಾರಿಯಿದ್ದು, ಪತ್ರಕರ್ತರು ಆ ಜವಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಬೇಕೆಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಐವಾನ್-ಇ- ಶಾಹಿ ಬಳಿ ಇರುವ ದಿಡೈಲಿ ನ್ಯೂಸ್ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ ಪತ್ರಿಕೆ ಲೋಕರ್ಪಾಣೆ ಮಾಡಿ ಮಾತನಾಡಿದ ಅವರು ಈ ಹಿಂದೆ ಪತ್ರಿಕ್ಯೋದ್ಯಮದ ಸ್ಥಿತಿ ತುಂಬಾ ಕ?ದಾಯಕವಾಗಿತ್ತು. ಆದರೆ ಇಂದಿನ ಆಧುನಿಕ ಯುಗದಲ್ಲಿ ಬೆರಳ ತುದಿಯಲ್ಲೇ ಸುದ್ದಿ ಹಾಗೂ ವರದಿಗಳನ್ನು ಮಾಡಬಹುದಾಗಿದ್ದು, ಇಂದಿನ ತಂತ್ರಜ್ಞಾನ ಯುಗದಲ್ಲಿ ಪತ್ರಕರ್ತರು ಸಹ ಸಾಕಷ ಮುಂದು ವರಿದಿದ್ದು, ತಂತ್ರಜ್ಞಾನವನ್ನು ಬಳಸಿ ಸಮಾಜಕ್ಕೆ ಒಳಿತಾಗುವ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಪ್ರಜಾಪ್ರಭುತ್ವದ ನಾಲ್ಕೆನೆ ಅಂಗವೆಂದು ಕರೆಯಿಸಿಕೊಳ್ಳುವ ಮಾಧ್ಯಮರಂಗವು ಸಕ್ರಿಯ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು. ಸ್ವತಂತ್ರ್ಯ ಪತ್ರಿಕೋದ್ಯಮಕ್ಕೆ ತನ್ನದೇ ಆದ ಬೆಲೆಯಿದ್ದು, ಅದನ್ನು ಕಾಪಾಡಿಕೊಂಡು ಹೋಗುವ ಹೊಣೆ ಪತ್ರಕರ್ತರ ಮೇಲಿದೆ ಎಂದು ಅವರು ತಿಳಿಸಿದರು.

ಸಾಹಿತ್ಯಕ, ಸಂಸ್ಕೃತಿಕ, ರಾಜಕೀಯ ಹಾಗೂ ಐತಿಹಾಸಿಕವಾಗಿ ಕಲ್ಯಾಣ ಕರ್ನಾಟಕವು ತುಂಬಾ ಶ್ರೀಮಂತ ಪ್ರದೇಶವಾಗಿದ್ದು, ಪತ್ರಿಕಾರಂಗದಲ್ಲೂ ಸಹ ಇಲ್ಲಿನ ಅನೇಕರು ರಾಜ್ಯಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸರಕಾರ ಮತ್ತು ಸಮಾಜ ಮಧ್ಯೆ ಕೊಂಡಿಯಾಗಿ ಕಾರ್ಯನಿರ್ವಹಿಸುವ ಪತ್ರಿಕಾರಂಗವು ಜನರಲ್ಲಿ ಜಾಗೃತಿಯನ್ನು ಉಂಟು ಮಾಡಬೇಕು ಎಂದು ಕರೆ ನೀಡಿದರು.

ಶರಣ ಬಸವೇಶ್ವರ ವಿದ್ಯಾವರ್ಥಕ ಸಂಘದ ಕಾರ್ಯದರ್ಶಿ ಬಸವರಾಜ್ ದೇಶಮುಖ ಸಾನ್ನಿಧ್ಯ ವಹಿಸಿದರು. ಖ್ಯಾತ ಜ್ಯೋತಿಷಿ ಡಾ. ಬಸವರಾಜ್ ಕಲಗುರ್ತಿ ಮಠ ನೇತೃತ್ವವಹಿಸಿದರು. ದಿಡೈಲಿ ನ್ಯೂಸ್ ಚೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂಜಯ ಹತ್ತಿ ಅಧ್ಯಕ್ಷತೆ ವಹಿಸಿದ್ದರು. ದಿಡೈಲಿ ನ್ಯೂಸ್ ಪತ್ರಿಕೆ ಸಂಪಾದಕ ಡಾ. ಮಹ್ಮದ್ ಬಾ? ಗೂಳ್ಯಂ ಪ್ರಸ್ತಾವಿಕವಾಗಿ ಮತನಾಡಿದರು. ಕಲಬುರಗಿ ಬ್ಯೂರೂ ಮುಖ್ಯಸ್ಥ ಡಾ. ಶಿವರಂಜನ ಸತ್ಯಂಪೇಟೆ ಸ್ವಾಗತಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ್ ಬಡಿಗೇರ್ ನಿರೂಪಿಸಿದರು. ಪ್ರಸರಣ ವಿಭಾಗದ ಗಿರೀಶ್ ಗುಡವಾಳಕರ್ ವಂದಿಸಿದರು.

ಸಂಸದ ಡಾ. ಉಮೇಶ್ ಜಾಧವ್, ವಿಧಾನ ಪರಿ?ತ್ ಸದಸ್ಯ ಬಿ.ಜಿ.ಪಾಟೀಲ್, ಶಾಸಕ ಬಸವರಾಜ್ ಮತ್ತಿಮಡು, ಬಿಜೆಪಿ ಯುವ ಮುಖಂಡ ಚಂದು ಪಾಟೀಲ್, ಮುಖಂಡರಾದ ಶರಣುಮೋದಿ, ಸುಭಾ? ರಾಠೋಡ್, ಶಿವಾನಂದ ಪಾಟೀಲ್, ಉದಯ ಕುಮಾರ ಜೇವರ್ಗಿ, ಪ್ರವೀಣ ಹರವಾಳ, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ, ಮಹಾಂತೇಶ್ ನವಲಕಲ್, ಶರಣು ಗೊಬ್ಬುರ, ಸಿ.ಎಸ್. ಮುಧೋಳ, ಡಾ. ಮಹೇಶ್ ಗಂವ್ಹಾರ್, ಮಲ್ಲಿಕಾರ್ಜುನ್ ಗುಳಗಿ, ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago