ವಾರ್ಡ್ ಸಮಿತಿ ರಚನೆ: ಸಾರ್ವಜನಿಕರಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

0
37

ಕಲಬುರಗಿ: ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರುಗಳ ಅಧ್ಯಕ್ಷತೆಯಲ್ಲಿ ವಾರ್ಡ್ ಸಮಿತಿಗಳನ್ನು ರಚಿಸುವ ಕುರಿತು ಆಸಕ್ತಿಯುಳ್ಳ ಸಾರ್ವಜನಿಕರಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2022ರ ಜುಲೈ 29ರ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಅದರಂತೆ ವಾರ್ಡ್ ನಂಖ್ಯೆ 01, 12, 19, 29, 31, 36, 43, 44, 48, 50, 51 ಮತ್ತು 55 ಗಳಿಗೆ ಮಾತ್ರ 10ಕ್ಕಿಂತ ಹೆಚ್ಚಿನ ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿರುತ್ತವೆ. ಕಾರಣ ವಾರ್ಡ್ ನಂ. 01, 12, 19, 29, 31, 36, 43, 44, 48, 50, 51 ಮತ್ತು 55 ಗಳು ಹೊರತ್ತುಪಡಿಸಿ, ಇನ್ನುಳಿದ ವಾರ್ಡ್‍ಗಳಿಗೆ ಅವಶ್ಯಕತೆ ಇದ್ದಷ್ಟು ಅರ್ಜಿಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಮತ್ತು ಅಡಳಿತದ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

Contact Your\'s Advertisement; 9902492681

ಇನ್ನುಳಿದ ಷರತ್ತುಗಳು ಮೊದಲಿನಂತೆ ಚಾಲ್ತಿಯಲ್ಲಿರುತ್ತವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2022ರ ಮೇ 10ರವರೆಗೆ ನಿಗದಿಪಡಿಸಲಾಗಿತ್ತೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here