ಕಲಬುರಗಿ: ಕನ್ನಡದಲ್ಲಿ ನಾಮಫಲಕ ಕಡ್ಡಾಯ

0
19

ಕಲಬುರಗಿ: ಮಹಾನಗರ ಪಾಲಿಕೆಯ ವ್ಯಾಪ್ತಿಯ ಎಲ್ಲಾ ಖಾಸಗಿ ಉದ್ದಿಮೆಗಳ/ ಮಳಿಗೆಗಳ ಉದ್ದಿಮೆದಾರರರು ಉದ್ದಿಮೆಗಳ ತಲೆಬರಹ/ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕು. ಅನ್ಯಭಾಷೆಯ ನಾಮಫಲಕಗಳಿಗಿಂತ ಕನ್ನಡ ಭಾಷೆಯ ನಾಮಫಲಕಗಳು ದಪ್ಪ/ದೊಡ್ಡ ಅಕ್ಷರಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ಅಂತಹ ಉದ್ದಿಮೆಗಳ ಪರವಾನಿಗೆಯನ್ನು ರದ್ದುಪಡಿಸಲು/ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡ ಭಾಷೆಯು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡ ಬಳಸುವದು ಕಡ್ಡಾಯವಾಗಿದೆ. ಇದರ ಸಮರ್ಪಕ ಅನುಷ್ಟಾನಕ್ಕಾಗಿ, ಅಂಗಡಿ-ಮುಂಗಟ್ಟುಗಳ/ಉದ್ದಿಮೆಗಳಿಗೆ ಪರವಾನಿಗೆ ನೀಡುವ ಸಂದರ್ಭದಲ್ಲಿ ಕನ್ನಡ ಭಾಷೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಸದೇ ಇದ್ದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here