ಸುರಪುರ: ನಗರದ ರಂಗಂಪೇಟೆಯಲ್ಲಿ ಆಸ್ತಿ ವಿಚಾರವಾಗಿ ಅಣ್ಣನನ್ನು ತಮ್ಮಂದಿರಿಬ್ಬರು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.ಮೂಲತಃ ತಾಲೂಕಿನ ಪೇಠ ಅಮ್ಮಾಪುರ ಗ್ರಾಮದವರಾದ ಪಂಪಾಪತಿ ಮತ್ತು ಆತನ ಇಬ್ಬರು ಸಹೋದರರಾದ ಕಾಳಪ್ಪ ಮತ್ತು ಗಂಗಪ್ಪ ಎನ್ನುವವರು ಕಳೆದ ಅನೇಕ ವರ್ಷಗಳಿಂದ ನಗರದ ರಂಗಂಪೇಟೆಯಲ್ಲಿ ಮನೆ ಮಾಡಿಕೊಂಡಿದ್ದು,ಆಭರಣಗಳ ತಯಾರಿಸುವ ಹಾಗೂ ಮಾರಾಟ ಮಾಡುವ ವ್ಯಾಪಾರ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.ಆದರೆ ಅಣ್ಣನಾದ ಪಂಪಾಪತಿಯೂ ದುಡಿದ ಹಣದಲ್ಲಿ ಸರಿಯಾಗಿ ಪಾಲು ನೀಡಿಲ್ಲ ಎನ್ನುವ ಕಾರಣಕ್ಕೆ ಕಳೆದ ಅನೇಕ ವರ್ಷಗಳಿಂದ ಇಬ್ಬರು ತಮ್ಮಂದಿರು ಅಣ್ಣನ ವಿರುದ್ಧ ಕೋಪಿಸಿಕೊಂಡಿದ್ದರು ಎಂದು ಮೃತ ಪಂಪಾಪತಿ ಪತ್ನಿ ತಿಳಿಸಿದ್ದಾರೆ.
ತನ್ನ ಗಂಡನ ಸಾವಿನ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಶನಿವಾರ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ರಂಗಂಪೇಟೆಯ ಅಂಬಾಭವಾನಿ ದೇವಸ್ಥಾನ ಬಳಿಯಲ್ಲಿನ ನಮ್ಮ ಮನೆಯಲ್ಲಿದ್ದಾಗ ಪಂಪಾಪತಿ ತಮ್ಮಂದಿರಾದ ಗಂಗಾಧರ,ಕಾಳಪ್ಪ ಹಾಗೂ ಇವರಿಬ್ಬರ ಪತ್ನಿಯರು ನಮ್ಮ ಮನೆಗೆ ಬಂದು ನನ್ನ ಗಂಡನಾದ ಪಂಪಾಪತಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ,ನನ್ನ ಗಂಡನ ಕೊಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ ಕೊಲೆಯ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯ ಜನರು ಆಗಮಿಸಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವವನ್ನು ಕಂಡು ಬೆಚ್ಚಿಬಿದ್ದಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಟಿ.ಮಂಜುನಾಥ ಹಾಗೂ ಪಿ.ಐ ಸುನೀಲಕುಮಾರ ಮೂಲಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಲ್ಲದೆ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದ್ದು,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…