ಬಿಸಿ ಬಿಸಿ ಸುದ್ದಿ

ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ; ಬಡವರ ಮನೆಗಳ ಮೇಲೆ ಹರಿಯುತ್ತದೆ: ಎಚ್.ಡಿ.ಕೆ

  • ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ; ಬಡವರ ಮನೆಗಳ ಮೇಲೆ ಹರಿಯುತ್ತದೆ!!*
  • *ರಾಜ್ಯ ಬಿಜೆಪಿ ಸರಕಾರದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಕಾರ*
    *ದಾಸರಹಳ್ಳಿ, ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಜನತಾಮಿತ್ರ ಕಾರ್ಯಕ್ರಮ*
  • *ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಕಿಡಿ

ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್‌ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್‌ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್‌ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.

ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ ಕೊಡಬೇಕಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಸಂಪೂರ್ಣ ನಿಷ್ಕ್ರಿಯವಾಗಿದೆ. ಅದೊಂದು ಭ್ರಷ್ಟಕೂಪ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಒಂದರಲ್ಲೇ ಸುಮಾರು 30 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಭೂಗಳ್ಳರು ಕಬಳಿಸಿದ್ದಾರೆ. ಅದನ್ನು ಮರು ವಶಪಡಿಸಿಕೊಂಡರೆ ಲಕ್ಷಾಂತರ ಬಡವರಿಗೆ ಮನೆ ಕಟ್ಟಿಕೊಡಬಹುದು. ಅಂಥ ಕೆಲಸವನ್ನು ಬಿಡಿಎ ಮಾಡುತ್ತಿಲ್ಲ. ನನಗೊಂದು ಅವಕಾಶ ಕೊಟ್ಟು ನೋಡಿ. ಬೆಂಗಳೂರು ನಗರವನ್ನು ಅಭಿವೃದ್ಧಿಯ ಹಳಿಯ ಮೇಲೆ ತಂದು ನಿಲ್ಲಿಸುತ್ತೇನೆ ಎಂದು ಅವರು ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ಎಲ್ಲ ಪ್ರದೇಶಗಳು ಸಮಾನವಾಗಿ ಅಭಿವೃದ್ಧಿ ಆಗುತ್ತಿಲ್ಲ. ಶ್ರೀಮಂತರು ವಾಸ ಮಾಡುವ ಪ್ರದೇಶಗಳಿಗೆ ಎಲ್ಲ ಅನುಕೂಲಗಳಿದ್ದರೆ, ಬಡವರ ಬಡಾವಣೆಗಳಿಗೆ ಕೊನೆಪಕ್ಷ ರಸ್ತೆಗಳಿಗೆ ಡಾಂಬರು ಇಲ್ಲ, ವಿದ್ಯುತ್‌ ದೀಪಗಳಿಲ್ಲ. ಯಲಹಂಕ ವಿಧಾನಸಭೆ ಕ್ಷೇತ್ರದ ಬೆಟ್ಟಹಳ್ಳಿ ಗ್ರಾಮಕ್ಕೆ ಹೋದರೆ ರಾಜ್ಯ ಸರಕಾರದ ನಿಜವಾದ ಅಭಿವೃದ್ಧಿ ಮಾದರಿ ಕಣ್ಣಿಗೆ ಕಾಣುತ್ತದೆ ಎಂದು ಹರಿಹಾಯ್ದರು ಕುಮಾರಸ್ವಾಮಿ.

ನಗರದ ಅಭಿವೃದ್ಧಿ, ಅನುದಾನ ಹಂಚಿಕೆಯಲ್ಲಿ ಬಿಜೆಪಿ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಹೆಬ್ಬಾಳ ವಿಧಾನಸಭೆ ಕ್ಷೇತ್ರದಿಂದ ಗೆದ್ದು ಮಂತ್ರಿಯಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಕಟುವಾದ ಟೀಕೆ ಮಾಡಿದ ಮಾಜಿ ಮುಖ್ಯಮಂತ್ರಿಗಳು; ಕಟ್ಟಾ ಅವರು ಈಗ ಹೆಣ್ಣುಮಕ್ಕಳಿಗೆ ಅರಶಿಣ-ಕುಂಕುಮ ಕೊಡುತ್ತೇನೆ, ಲಲಿತಾ ಸಹಸ್ರನಾಮ ಕಾರ್ಯಕ್ರಮ ಏರ್ಪಡಿಸುತ್ತೇನೆ ಎಂದು ಈಗ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರಿಂದ ಜನರ ಬದುಕು ಹಸನಾಗುತ್ತದೆಯೇ? ಅಲ್ಲೆಲ್ಲ ದೊಡ್ಡದಾಗಿ ಮಹಿಳೆಯರನ್ನು ಸೇರಿಸಿ ಪೂಜೆ ಪುನಸ್ಕಾರ ಅಂತ ಹೇಳಿ ಮಂಕೂಬೂದಿ ಎರಚಿ, ಗೆದ್ದುಹೋಗಿ ಮಂತ್ರಿ ಆಗುತ್ತಾರೆ. ಆಮೇಲೆ, ಸರಕಾರಿ ಭೂಮಿಯನ್ನು ಲಪಟಾಯಿಸಿ ಬಳಿಕ ಜಾಮೀನಿಗಾಗಿ ಕೋರ್ಟು ಕಚೇರಿ ಅಂತ ಅಲೆಯುತ್ತಾರೆ ಎಂದು ಪ್ರಹಾರ ನಡೆಸಿದರು.

ಬೆಂಗಳೂರಿನಲ್ಲಿ ಇವತ್ತು ಅನೇಕ ರಾಜಕಾರಣಿಗಳು, ಸಾರ್ವಜನಿಕ ಹಾಗೂ ಬಡಬಗ್ಗರ ಭೂಮಿಯನ್ನು ಕೊಳ್ಳೆ ಹೊಡೆದು ನೂರಾರು ಕೋಟಿ ಮಾಡಿದ್ದಾರೆ. ಅದೇ ಪಾಪದ ಹಣದಿಂದ ಫುಡ್ ಕಿಟ್‌, ಸಣ್ಣಪುಟ್ಟ ಪ್ರಮಾಣದ ಭಕ್ಷೀಸು ನೀಡಿ ಚುನಾವಣೆ ಗೆಲ್ಲುತ್ತಿದ್ದಾರೆ. ಇಂಥ ಆಮಿಷಗಳಿಗೆ ಜನರು ಮಾರುಹೋಗಬಾರದು. ಹಣ ಪಡೆದು ಸಭೆ ಸಮಾರಂಭಗಳಿಗೆ ಹೋಗಬಾರದು ಎಂದು ಕುಮಾರಸ್ವಾಮಿ ಅವರು ಕರೆ ನೀಡಿದರು.

ಬೆಂಗಳೂರಿನಲ್ಲಿ ಬಡವರ ಬಂಧು ಕಾರ್ಯಕ್ರದ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ನೆರವಾದೆ. 25 ಸಾವಿರ ಕೋಟಿ ರೂ. *ಸಾಲಮನ್ನಾ* ಮಾಡಿದೆ. ಇದೆಲ್ಲವನ್ನೂ ಫಲಾನುಭವಿಗಳ ಹೆಸರಿನ ಸಮೇತ ದಾಖಲೆ ಕೊಡಬಲ್ಲೆ, ನರೇಂದ್ರ ಮೋದಿ ಅವರಂತೆ ನಾನು ಬರೀ ಭಾಷಣ ಮಾಡಲ್ಲ ಎಂದರಲ್ಲದೆ, ಮೋದಿ ಹಿಂದೆ ಸುತ್ತುವ ಆತ್ಮೀಯನೊಬ್ಬರು ಗಂಟೆಗೆ 53 ಕೋಟಿ ದುಡಿಯುತ್ತಿದ್ದಾರಂತೆ. ಅದು ಹೇಗೆ? ಯಾವ ರೀತಿ? ಇಂಥವರನ್ನು ತೋರಿಸಿ ಭಾರತ ಉದ್ಧಾರವಾಗಿದೆ ಎಂದು ಜಗತ್ತಿಗೆ ತೋರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಮಾತನಾಡಿದರು. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮೊಯಿದ್ದೀನ್‌ ಅಲ್ತಾಫ್‌, ದಾಸರಹಳ್ಳಿ ಶಾಸಕ ಮಂಜುನಾಥ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಹೆಚ್.ಎಂ.ರಮೇಶ್‌ ಗೌಡ ಸೇರಿದಂತೆ ಪಕ್ಷದ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು ಜನತಾಮಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇದಕ್ಕೂ ಮೊದಲು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ನಡೆದ ಜನತಾಮಿತ್ರ ಜಾಥ ಮತ್ತು ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸ್ಥಳೀಯ ಶಾಸಕ ಮಂಜುನಾಥ್ ಪಾಲ್ಗೊಂಡಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

8 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

8 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

10 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

10 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

10 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

10 hours ago