ಬಿಸಿ ಬಿಸಿ ಸುದ್ದಿ

ಬಕ್ರೀದ್ ಆಚರಣೆ ವೇಳೆ ಗೋಹತ್ಯೆ ಮಾಡಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್

ಕಲಬುರಗಿ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ -2020 ಜಾರಿಯಲ್ಲಿದ್ದು,ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಜಾನುವಾರುಗಳ ಹತ್ಯೆ ಹಾಗೂ ಸಾಗಾಣಿಕೆಯನ್ನು ಮಾಡಬಾರದು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜುಲೈ 10 ರಂದು ಬಕ್ರೀದ್ ಆಚರಿಸುವ ನಿಟ್ಟಿನಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆ, ಪಶುಸಂಗೋಪನಾ ಇಲಾಖೆ, ಸಾರಿಗೆ ಇಲಾಖೆ, ಮಹಾ ನಗರ ಪಾಲಿಕೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ 3 ದಿನಗಳ ಮುಂಚಿತವಾಗಿ ಜಾನುವಾರುಗಳ ಸಾಗಾಣಿಕೆ ಬಗ್ಗೆ ಕಣ್ಗಾವಲು ಇಡಬೇಕು.

ಕರ್ನಾಟಕದಲ್ಲಿ ಜಾರಿಯಲ್ಲಿರುವ ಕರ್ನಾಟಕ ಜಾನುವಾರು ವಧೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ -2020 ಅನ್ನು ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಈಗಾಗಲೇ ಕಲಬುರ್ಗಿ ನಗರದ ಪೋಲಿಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 10 ಚೆಕ್ ಪೋಸ್ಟಗಳನ್ನು ನಿರ್ಮಿಸಲಾಗಿದೆ. ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಕೂಡ ರಚಿಸಲಾಗಿದೆ. ಪೋಲಿಸ್ ಅಧಿಕಾರಿಗಳು ಹಾಗೂ ಪಶು ವೈದ್ಯಕೀಯ ಅಧಿಕಾರಿಗಳ ಜಂಟಿ ತಂಡ ಹಾಗೂ ಸಿಬ್ಬಂದಿಗಳು ಎಚ್ಚರಿಕೆಯಿಂದ ಕೆಲಸವನ್ನು ನಿರ್ವಹಿಸಬೇಕೆಂದು ಅವರು ಹೇಳಿದರು.

ಅನಧಿಕೃತವಾಗಿ ಪ್ರಾಣಿ ವಧೆ ಹಾಗೂ ಸಾಗಟ ತಡೆಗೆ ಕ್ರಮಕೈಗೊಳ್ಳಬೇಕೆಂದು ಅವರು ಹೇಳಿದರು.

ಸಾಗಾಣೆ ಮಾಡಲ್ಪಡುವ ಜಾನುವಾರುಗಳ ವಶಪಡಿಸಿಕೊಂಡು ಎಫ್.ಐ.ಆರ್. ಮಾಡುವುದು, ಬಳಿಕ ಇವುಗಳನ್ನು ಗೋಶಾಲೆಗಳಿಗೆ ಸಾಗಿಸಿ, ಆರೋಗ್ಯ ತಪಾಸಣೆ ಒಳಪಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಡಿಸಿಪಿ ಅಡ್ಡೂರು ಶ್ರೀನಿವಾಸಲು , ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ್ವರ ದೇವದಾಸ ಪಾಟೀಲ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಕೇಶವ ಮೋಟಗಿ, ಪಶು ಸಂಗೋಪನೆಯ ಉಪ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿ ಸೇರಿದಂತೆ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

3 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

3 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

3 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

3 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

3 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

3 hours ago