ಕಲಬುರಗಿ: ಶರಣಜೀವಿ ಲಿಂ.ಡಾ. ಗಳಂಗಪ್ಪ ಪಾಟೀಲ ಸ್ಮರಣಾರ್ಥ ಕನ್ನಡ ಸಾಹಿತ್ಯ ಪರಿಷತ್, ಉತ್ತರ ವಲಯದ ವತಿಯಿಂದ ಇದೇ ದಿ.೮ ಶುಕ್ರವಾರದಂದು ’ಕಾಯಕ-ದಾಸೋಹ’ ಕುರಿತು ಉಪನ್ಯಾಸ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಐವರು ಮಹನೀಯರಿಗೆ ’ಕಾಯಕ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಸಾಪ ಉತ್ತರ ವಲಯ ಅಧ್ಯಕ್ಷ ಪ್ರಭುಲಿಂಗ ಮುಲಗೆ ತಿಳಿಸಿದ್ದಾರೆ.
ನಗರದ ಆಳಂದ ರಸ್ತೆಯ, ಸಂತೋಷ ಕಾಲನಿ ಕ್ರಾಸ್ ಸಮೀಪವಿರುವ ಜೆ.ಆರ್. ನಗರದ ಹನುಮಾನ ದೇವಸ್ಥಾನದ ಆವರಣದಲ್ಲಿ ಸಾ.೬.೩೦ಗಂಟೆಗೆ ಏರ್ಪಡಿಸಿರುವ ಕಾರ್ಯಕ್ರಮವನ್ನು ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ ಉದ್ಘಾಟಿಸಲಿದ್ದು, ಮಹಾನಗರ ಪಾಲಿಕೆ ಸದಸ್ಯ ಶಿವಾನಂದ ಪಿಸ್ತಿ ನೇತೃತ್ವ ವಹಿಸಲಿದ್ದು, ಪತ್ರಕರ್ತ ಶಿವರಂಜನ ಸತ್ಯಂಪೇಟ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿದೇರ್ಶಕ ಡಾ.ರಾಜಕುಮಾರ ಪಾಟೀಲ ಮುಖ್ಯ ಅತಿಥಿಗಳಾಗಿ, ವೀರಶೈವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ವಾಲಿ, ಯುವ ನಾಯಕ ಸಿದ್ದರಾಮ ಸಿ.ಸಂಗೋಳಗಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭುಲಿಂಗ ಮುಲಗೆ ವಹಿಸಿಕೊಳ್ಳಲಿದ್ದಾರೆ ಎಂದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕಲ್ಯಾಣಕುಮಾರ ಶೀಲವಂತ, ದಾಕ್ಷಾಯಣಿ ಬಳಬಟ್ಟಿಮಠ, ಎಚ್.ಬಿ.ಪಾಟೀಲ, ಜಗದೀಶ ಮರಪಳ್ಳಿ, ಶಿವಯ್ಯ ಎಸ್.ಮಠಪತಿ ಅವರಿಗೆ ’ಕಾಯಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಲು ಕೋರಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…