ಜಗಜೀವನರಾಮ- ಶ್ಯಾಮ ಪ್ರಸಾದ ಮುಖರ್ಜಿ ದೇಶ ಕಂಡ ಮಹಾನ್ ವ್ಯಕ್ತಿಗಳು

0
39

ಶಹಾಬಾದ: ಈ ದೇಶದ ಬಡ ವರ್ಗದ ಜನರ ಹಸಿವನ್ನು ನೀಗಿಸುವ ಮೂಲಕ ಈ ದೇಶದಲ್ಲಿ ನಿರಂತರ ಶಾಂತಿ ದೊರಕುವಂತೆ ಹೋರಾಟ ನಡೆಸಿದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಮ ಹಾಗೂ ದೇಶಕ್ಕಾಗಿಯೇ ತಮ್ಮ ಜೀವನವನ್ನು ಸವೆದ ಶ್ಯಾಮ ಪ್ರಸಾದ ಮುಖರ್ಜಿ ಇವರು ದೇಶ ಕಂಡು ಮಹಾನ್ ನಾಯಕರು ಎಂದು ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಹೇಳಿದರು.

ಅವರು ಬುಧವಾರ ಡಾ. ಶ್ಯಾಮ ಪ್ರಸಾದ ಮುಖರ್ಜಿ ಹಾಗೂ ಡಾ.ಬಾಬುಜಗಜೀವನರಾಮ ಅವರ ಪುಣ್ಯ ಸ್ಮರಣೆ ನಿಮಿತ್ತ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Contact Your\'s Advertisement; 9902492681

ದೇಶದಲ್ಲಿ ಆಹಾರದ ಕೊರತೆ ಉಂಟಾದ ಸಮಯದಲ್ಲಿ ಕೃಷಿ ಸಚಿವರಾಗಿದ್ದ ಬಾಬು ಜಗಜೀವನರಾಮ ಅವರು ಜಾರಿಗೆ ತಂದ ಯೋಜನೆಗಳು ಹಸಿರು ಕ್ರಾತಿಗೆ ಕಾರಣವಾದವು. ಜಗಜೀವನರಾಮ ಅವರು ತಮ್ಮ ಜೀವನದಲ್ಲಿ ದೇಶದಲ್ಲಿರುವ ಬಡಜನರ ಏಳಿಗೆಗಾಗಿ ನಿರಂತರ ಹೋರಾಟ ನಡೆಸಿದರಲ್ಲದೇ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಗಾಂಧೀಜಿ ಜತೆ ಕೈಗೂಡಿಸಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ. ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಕೊಳ್ಳುವಂತಾಗಬೇಕೆಂದು ಹೇಳಿದರು.

ಅಲ್ಲದೇ ಶ್ಯಾಮ ಪ್ರಸಾದ ಮುಖರ್ಜಿಯವರು ನೀತಿ, ತತ್ವದ ಆಧಾರದ ಮೇಲೆ ನೆಹರೂ ನೇತೃತ್ವದ ಮಂತ್ರಿ ಮಂಡಲಕ್ಕೆ ರಾಜೀನಾಮೆ ನೀಡಿದರು.ಈ ಮೂಲಕ ಮಂತ್ರಿ ಪದವಿ ತ್ಯಾಗ ಮಾಡಿದ ಸ್ವಾತಂತ್ರ್ಯ ಭಾರತದ ಭಾರತದ ಪ್ರಥಮ ರಾಷ್ಟ್ರ ನಾಯಕ ಶ್ಯಾಮ ಪ್ರಸಾದ ಮುಖರ್ಜಿಯವರು ಎಂದು ಹೇಳಿದರು.

ಮುಖಂಡ ಅರುಣ ಪಟ್ಟಣಕರ್ ಮಾತನಾಡಿ, ಸಮಾಜದ ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು. ಅವರು ದೇಶದ ಉಪಪ್ರಧಾನಿಗಳಾಗಿದ್ದ ಸದಂರ್ಭದಲ್ಲಿ ಜಾರಿಗೆ ತಂದ ಹಲವಾರು ಜನಪರ ಕಾರ್ಯಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.

ಮಹಾದೇವ ಗೊಬ್ಬೂರಕರ, ಸದಾನಂದ ಕುಂಬಾರ, ಕನಕಪ್ಪ ದಂಡಗುಲಕರ, ಚಂದ್ರಕಾಂತ ಗೊಬ್ಬೂರಕರ, ಸಾಯಬಣ್ಣ ಬೆಳಗುಂಪಿ, ಸುಭಾ? ಜಾಪುರ, ನಿಂಗಣ್ಣ ಹುಳಗೋಳಕರ, ತಿಮ್ಮಣ್ಣ ಕುರ್ಡೆಕರ, ಯಲ್ಲಪ್ಪ ದಂಡಗುಲಕರ, ಜಗದೇವ ಸುಬೆದಾರ, ಅಮರ ಕೋರೆ, ಮಾರುತಿ ಕೋರೆ, ಮಹದೇವ ಚನ್ನೂರ, ಸಂಜಯ ಕುಸಾಳೆ, ಹನಮಂತ, ಸುನೀತಾ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here