ಅನುದಾನಿತ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸಚಿವ ಬಿ.ಸಿ.ನಾಗೇಶಗೆ ಒತ್ತಾಯ

0
166

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಖಾಲಿಯಿರುವ ಪ್ರಾಚಾರ್ಯರ ಹುದ್ದೆಗಳನ್ನು ಸಂಪೂರ್ಣವಾಗಿ ಬಡ್ತಿ ಮೂಲಕ ಭರ್ತಿ ಮಾಡಬೇಕು, ಕಲ್ಯಾಣ ಕರ್ನಾಟಕೇತರ ಅನರ್ಹ ಉಪನ್ಯಾಸಕರಿಗೆ ಸ್ಥಳೀಯ (ಹೆಚ್.ಕೆ) ವೃಂದದಲ್ಲಿ ಪ್ರಾಚಾರ್ಯರ ವೃಂದಕ್ಕೆ ಬಡ್ತಿನೀಡದಂತೆ ಕ್ರಮಕೈಗೊಳ್ಳಬೇಕು ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ೩೧-೧೨-೨೦೧೫ ರ ವರೆಗೆ ಮಾತ್ರ ಅನುಮೋದನೆ ನೀಡಲಾಗುತ್ತಿದ್ದು, ಇದನ್ನು ೩೧-೧೨-೨೦೨೦ ರವರೆಗೆ ವಿಸ್ತರಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ.ಪೂ.ಕಾಲೇಜುಗಳ ಉಪನ್ಯಾಸಕರ ಸಂಘಒತ್ತಾಯಿಸಿದೆ.

ಈ ಸಂಬಂಧ ಕಲ್ಯಾಣ ಕರ್ನಾಟಕ ಪ.ಪೂ.ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಡಾ.ಚಂದ್ರಶೇಖರ ದೊಡ್ಡಮನಿ ಹಾಗೂ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಬೋಧಕೇತರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ ಬಿ.ಎಸ್.ಮಾಲಿಪಾಟೀಲ್ ಮತ್ತು ಡಾ.ಶಂಕರ ಕಟಕ, ಡಾ.ಸಲೀಮ ಮುಜಾವರ್, ಗುರುಶಾಂತ ಹೂಗಾರ ಸೇರಿದಂತೆ ಮತ್ತಿತರರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರನ್ನು ನಗರದಲ್ಲಿ ಭೇಟಿಯಾಗಿ ಮನವಿಪತ್ರ ಸಲ್ಲಿಸಿ ಬೇಡಿಕೆ ಈಡೇರಿಸಲು ಒತ್ತಾಯಿಸಿದರು.

Contact Your\'s Advertisement; 9902492681

ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರಸ್ತುತ ಇರುವ ಕಾರ್ಯಭಾರವನ್ನು ಮರುಪರಿಶೀಲಿಸಿ ವೈಜ್ಞಾನಿಕವಾಗಿ ಕಾರ್ಯಭಾರವನ್ನು ರೂಪಿಸಿಶಿಕ್ಷಕರಿಗೆ ಆಗುತ್ತಿರುವ ತೊಂದರೆಯನ್ನು  ಸರಿಪಡಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ-ಕಾಲೇಜುಗಳ ಸಿಬ್ಬಂದಿಗಳಿಗೂ ಅನ್ವಯವಾಗುವಂತೆ ಕ್ರಮಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here