ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಖಾಲಿಯಿರುವ ಪ್ರಾಚಾರ್ಯರ ಹುದ್ದೆಗಳನ್ನು ಸಂಪೂರ್ಣವಾಗಿ ಬಡ್ತಿ ಮೂಲಕ ಭರ್ತಿ ಮಾಡಬೇಕು, ಕಲ್ಯಾಣ ಕರ್ನಾಟಕೇತರ ಅನರ್ಹ ಉಪನ್ಯಾಸಕರಿಗೆ ಸ್ಥಳೀಯ (ಹೆಚ್.ಕೆ) ವೃಂದದಲ್ಲಿ ಪ್ರಾಚಾರ್ಯರ ವೃಂದಕ್ಕೆ ಬಡ್ತಿನೀಡದಂತೆ ಕ್ರಮಕೈಗೊಳ್ಳಬೇಕು ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ೩೧-೧೨-೨೦೧೫ ರ ವರೆಗೆ ಮಾತ್ರ ಅನುಮೋದನೆ ನೀಡಲಾಗುತ್ತಿದ್ದು, ಇದನ್ನು ೩೧-೧೨-೨೦೨೦ ರವರೆಗೆ ವಿಸ್ತರಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ.ಪೂ.ಕಾಲೇಜುಗಳ ಉಪನ್ಯಾಸಕರ ಸಂಘಒತ್ತಾಯಿಸಿದೆ.
ಈ ಸಂಬಂಧ ಕಲ್ಯಾಣ ಕರ್ನಾಟಕ ಪ.ಪೂ.ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಡಾ.ಚಂದ್ರಶೇಖರ ದೊಡ್ಡಮನಿ ಹಾಗೂ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಬೋಧಕೇತರ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾದ ಬಿ.ಎಸ್.ಮಾಲಿಪಾಟೀಲ್ ಮತ್ತು ಡಾ.ಶಂಕರ ಕಟಕ, ಡಾ.ಸಲೀಮ ಮುಜಾವರ್, ಗುರುಶಾಂತ ಹೂಗಾರ ಸೇರಿದಂತೆ ಮತ್ತಿತರರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರನ್ನು ನಗರದಲ್ಲಿ ಭೇಟಿಯಾಗಿ ಮನವಿಪತ್ರ ಸಲ್ಲಿಸಿ ಬೇಡಿಕೆ ಈಡೇರಿಸಲು ಒತ್ತಾಯಿಸಿದರು.
ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರಸ್ತುತ ಇರುವ ಕಾರ್ಯಭಾರವನ್ನು ಮರುಪರಿಶೀಲಿಸಿ ವೈಜ್ಞಾನಿಕವಾಗಿ ಕಾರ್ಯಭಾರವನ್ನು ರೂಪಿಸಿಶಿಕ್ಷಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ-ಕಾಲೇಜುಗಳ ಸಿಬ್ಬಂದಿಗಳಿಗೂ ಅನ್ವಯವಾಗುವಂತೆ ಕ್ರಮಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…