ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಮಾಧ್ಯಮ ಹಾಗೂ ಕನ್ನಡ ಸಾರಸ್ವತ ಲೋಕದಲ್ಲಿಯೇ ಪ್ರಥಮ ಪ್ರಯೋಗವೆಂಬಂತೆ ಜುಲೈ ೧೨ ರಂದು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಒಂದು ದಿನದ ‘ಪತ್ರಕರ್ತ ಸಾಹಿತಿಗಳ ಸಮಾವೇಶ’ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರಿಷತ್ತಿನ ಪದಾಧಿಕಾರಿಗಳು, ಪತ್ರಕರ್ತರ ಸಂಘದ ಪ್ರಮುಖರ ನೇತೃತ್ವದಲ್ಲಿ ಸಮಾವೇಶದ ಯಶಸ್ವಿಗೆ ಪೂರಕವಾಗಿ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಈ ಭಾಗದಲ್ಲಿನ ಪತ್ರಕರ್ತರು ತಮ್ಮ ವೃತ್ತಿಯ ಪಾವಿತ್ರ್ಯತೆ ಕಾಪಾಡಿಕೊಳ್ಳುವುದರ ಜತೆಗೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅನೇಕ ಪತ್ರಕರ್ತ ಸಾಹಿತಿಗಳು ಈ ಸಮಾವೇಶದಲ್ಲಿ ಸಮ್ಮಿಲನಗೊಳ್ಳಲಿದ್ದಾರೆ.
ನುರಿತ ಮತ್ತು ಅನುಭವಿ ಪತ್ರಕರ್ತರು ತಮ್ಮ ವಿಚಾರಗಳ ಮೂಲಕ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅನೇಕ ಅನುಭವಿ ಪತ್ರಕರ್ತ ಸಾಹಿತಿಗಳು ಪಾಲ್ಗೊಳ್ಳುವ ಈ ಸಮಾವೇಶದಲ್ಲಿ ಅನೇಕ ವಿಚಾರಗಳ ವಿನಿಮಯಗೊಳ್ಳಲಿವೆ.
ಸಾಹಿತಿ ಹಾಗೂ ಪತ್ರಕರ್ತ ಈ ಸಮಾಜದ ನಿಜವಾದ ಡಾಕ್ಟರ್‌ಗಳಿದ್ದಂತೆ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಈ ಎರಡು ವೃತ್ತಿಗಳ ಪಾತ್ರ ಬಹಳ ಮುಖ್ಯವಾಗಿವೆ. ಹಾಗಾಗಿ ವೃತ್ತಿಯ ಗೌರವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ.
ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಅಂಡಗಿ, ಯಶವತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಸಂತೋಷ ಕುಡಳ್ಳಿ, ಪ್ರಭುಲಿಂಗ ಮೂಲಗೆ, ವಿಶ್ವನಾಥ ತೊಟ್ನಳ್ಳಿ, ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸಂಘದ ಪ್ರಮುಖರಾದ ಡಾ.ಶಿವರಂಜನ ಸತ್ಯಂಪೇಟೆ, ಸಂಗಮನಾಥ ರೇವತಗಾಂವ, ಜನಪರ ಹೋರಾಟಗಾರ ಮಲ್ಲಿಕಾರ್ಜುನ ಸಾರವಾಡ, ನಿವೃತ್ತ ಶಿಕ್ಷಕ ಶ್ರೀನಿವಾಸ ಜೋಳದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…