ಬಸ್ ಪಾಸ್ ವಿಸ್ತರಿಸಲು ಎಐಡಿಎಸ್‌ಓ ಒತ್ತಾಯ

0
20

ಶಹಾಬಾದ: ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವ? ಮುಗಿಯುವವರೆಗೂ ವಿಸ್ತರಿಸಬೇಕೆಂದು ಆಗ್ರಹಿಸಿ ಎಐಡಿಎಸ್‌ಓ ವತಿಯಿಂದ ನಗರದ ಸಾರಿಗೆ ನಿಯಂತ್ರಕರ ಮುಖಾಂತರ ಮುಖ್ಯ ಸಂಚಾರ ವ್ಯವಸ್ಥಾಪಕರು ಕೆ ಕೆ ಆರ್ ಟಿ ಸಿ ಕಛೇರಿ ಕಲಬುರಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಎರಡನೇ ಮತ್ತು ಮೂರನೇ ವ?ದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್ ಅನ್ನು ಸೆಪ್ಟಂಬರ್ ೨೦೨೧ ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್‌ನಲ್ಲಿ ಆರಂಭವಾಯಿತು. ಮೊದಲ ವ?ದ ವಿದ್ಯಾರ್ಥಿಗಳಿಗೆ ಡಿಸೆಂಬರ್ ೨೦೨೧ ರಲ್ಲಿ ನೀಡಲಾಗಿತ್ತು. ವಿದ್ಯಾರ್ಥಿ ಬಸ್ ಪಾಸಿಗೆ ಅವರ ಶೈಕ್ಷಣಿಕ ವ?ದ ಕೊನೆಯವರೆಗೂ ಮಾನ್ಯತೆ ಇರುತ್ತದೆ. ಇದು ಇ? ವ?ಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ಆದರೆ ನವೆಂಬರ್ ನಲ್ಲಿ ತರಗತಿ ಆರಂಭದ ನಂತರ ಪಾಸ್ ಪಡೆದ ವಿದ್ಯಾರ್ಥಿಗಳು ಆಗಸ್ಟ್ ನವರೆಗೂ, ಡಿಸೆಂಬರ್ ನಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳು ಸೆಪ್ಟಂಬರ್ ವರೆಗೂ ಉಚಿತವಾಗಿ ಓಡಾಡಬಹುದು.

Contact Your\'s Advertisement; 9902492681

ಆದರೆ, ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಏಕಾಏಕಿ ಜೂನ್ ತಿಂಗಳಿಗೆ ವಿದ್ಯಾರ್ಥಿ ಬಸ್ ಪಾಸಿನ ಅವಧಿಯು ಕೊನೆಗೊಳ್ಳಲಿರುವುದರಿಂದ ಮುಂದಿನ ತಿಂಗಳಿನಿಂದ ದುಡ್ಡು ಕೊಟ್ಟು ಓಡಾಡಬೇಕು ಎಂದು ಹೇಳಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಹಲವು ವ?ಗಳ ಹೋರಾಟದ ಫಲವಾಗಿ ವಿದ್ಯಾರ್ಥಿಗಳು ರಿಯಾಯಿತಿ ಪಾಸ್ ಅನ್ನು ಪಡೆದುಕೊಂಡಿದ್ದೇವೆ. ವಾಸ್ತವವಾಗಿ, ನಮ್ಮ ಹೋರಾಟ ಉಚಿತ ಪಾಸ್ ನೀಡಬೇಕು ಎಂಬುದೇ ಆಗಿದೆ. ಹೀಗಿರುವಾಗ, ಶೈಕ್ಷಣಿಕ ವ?ದ ಅವಧಿ ಮುಗಿಯುವ ಮುನ್ನವೇ, ಮಾನ್ಯತೆ ರದ್ದಾಗಿದೆ.ಈಗಾಗಲೇ ಆರ್ಥಿಕ ಸಂಕ?ದಲ್ಲಿರುವ ವಿದ್ಯಾರ್ಥಿಗಳ ಮೇಲೆ ಮತ್ತ? ಹೊರೆ ಹೊರಿಸಿದಂತಾಗಿದೆ.

ಈಗಾಗಲೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿ.ಎಂ.ಟಿ.ಸಿ.) ಯು ಹೆಚ್ಚುವರಿ ಶುಲ್ಕ ಪಡೆಯದೇ ವಿದ್ಯಾರ್ಥಿ ಬಸ್ ಪಾಸಿನ ಅವಧಿಯನ್ನು ಆಗಸ್ಟ್ ನವರೆಗೆ ವಿಸ್ತರಣೆ ಮಾಡಿದೆ. ಇದನ್ನೇ ಇತರೆ ಜಿಲ್ಲಾ ಸಾರಿಗೆ ಸಂಸ್ಥೆಗಳು ಅನುಸರಿಸಬೇಕು ಮತ್ತು ರಾಜ್ಯ ಸಾರಿಗೆ ಸಂಸ್ಥೆ ಸಹ, ವಿದ್ಯಾರ್ಥಿಗಳು ಪ್ರಯಾಣ ಮಾಡಲು ಅನುಕೂಲವಾಗುವಂತೆ ಪಾಸಿನ ಅವಧಿ ವಿಸ್ತರಣೆ ಮಾಡಬೇಕು ಎಂದು ಎಐಡಿಎಸ್‌ಓ ಒತ್ತಾಯಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟೇಶ ದೇವದುರ್ಗ, ನಗರ ಅಧ್ಯಕ್ಷ ಕಿರಣ್ ಕುಮಾರ ಮಾನೆ, ಉಪಾಧ್ಯಕ್ಷ ದೇವರಾಜ ಹೊನಗುಂಟಾ,ಕಾರ್ಯದರ್ಶಿ ಅಜಯ್, ವಿದ್ಯಾರ್ಥಿಗಳಾದ ಶ್ರೀಧರ್,ಕೃಷ್ಣ, ಭರತ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here