ಬಿಸಿ ಬಿಸಿ ಸುದ್ದಿ

ಬೇಡಜಂಗಮರನ್ನು ಬೆಂಗಳೂರಿನಲ್ಲಿ ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

ಶಹಾಬಾದ: ಸತ್ಯಾಗ್ರಹ ನಿರತ ಬೇಡಜಂಗಮರನ್ನು ಬೆಂಗಳೂರಿನಲ್ಲಿ ಬಂಧಿಸಿರುವುದನ್ನು ಖಂಡಿಸಿ ಹಾಗೂ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಬೇಡ ಜಂಗಮ ಸಮಾಜದ ಬಂಧುಗಳು ಶುಕ್ರವಾರ ಗ್ರೇಡ್-೨ ತಹಶೀಲ್ದಾರ ಗುರುರಾಜ ಸಂಗಾವಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಬೇಡ ಜಂಗಮ ಸಮಾಜದ ಗೌರವಾಧ್ಯಕ್ಷ ಮೃತ್ಯುಂಜಯ್ ಹಿರೇಮಠ ಮಾತನಾಡಿ, ರಾಜ್ಯದಲ್ಲಿ ಅತಿ ಹಿಂದುಳಿದ ಜಾತಿ ಗಳಲ್ಲಿ ಬೇಡ ಜಂಗಮ ಸಮಾಜವು ಒಂದು ಈ ನಿಟ್ಟಿನಲ್ಲಿ ಬೇಡ ಜಂಗಮರಿಗೆ ಸಂವಿಧಾನ ಬದ್ದವಾಗಿ ದೊರೆಯಬೇಕಾದ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನ ಸರಕಾರ ನೀಡಬೇಕು. ದಕ್ಕಾಗಿ ನಾಡಿನ ಬೇಡ ಜಂಗಮರು ಹಾಗೂ ಮಠಾಧೀಶರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಅವರನ್ನು ಬಂಧಿಸಿ, ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸಿದ್ದಾರೆ.ಇದನ್ನು ನಮ್ಮ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದರು.

ನಾವು ಈಗಾಗಲೇ ಬೇಡ ಜಂಗಮರು ಎನ್ನಲು ಹಲವಾರು ದಾಖಲೆಗಳು ಸರಕಾರದ ಮುಂದಿವೆ. ಬೇಡ ಜಂಗಮರು ಯಾರ ಹಕ್ಕನ್ನು ಕಿತ್ತುಕೊಂಡಿಲ್ಲಾ ಮತ್ತು ಕಿತ್ತುಕೊಳ್ಳುತ್ತಿಲಾ ಆದರೆ ನಮಗೆ ಸಂವಿಧನಾತ್ಮಕ ವಾಗಿ ಸಿಗಬೇಕಾಗಿರುವ ಹಕ್ಕನ್ನು ಪಡೆದುಕೊಳ್ಳಲು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಕೂಡಲೇ ಸರ್ಕಾರ ನಮಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಬೇಕು ಇಲ್ಲದಿದ್ದರೆ ರಾಜ್ಯಾದಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುದು ಎಂದರು.

ಬೇಡ ಜಂಗಮ ಸಮಾಜದ ಅಧ್ಯಕ್ಷ ಶಿವುಮಾರ ಹಿರೇಮಠ, ಉಪಾಧ್ಯಕ್ಷರಾದ ಗುರಲಿಂಗಯ್ಯ ಹಿರೇಮಠ,ಶರಣಯ್ಯಸ್ವಾಮಿ ಹಿರೇಮಠ, ಕಾರ್ಯದರ್ಶಿ ಜಗದೀಶ ಮಠಪತಿ, ಪ್ರಮುಖರಾದ ಮಲ್ಲಿಕಾರ್ಜುನ ತುಪ್ಪದಮಠ,ಶರಣಯ್ಯಸ್ವಾಮಿ ಮಠಪತಿ, ವಿಜಯಕುಮಾರ ಹಿರೇಮಠ,ಮಹಾದೇವಯ್ಯಸ್ವಾಮಿ ಜಿವಣಗಿ, ವಿಶ್ವನಾಥಸ್ವಾಮಿ ಹಿರೇಮಠ, ರಾಜಶೇಖರ ಘಂಟಿಮಠ, ನೂರದಂಯ್ಯ ಘಂಟಿಮಠ, ಮಹಾಲಿಂಗಯ್ಯ ತುಪ್ಪದಮಠ,ಸಿದ್ದಯ್ಯಸ್ವಾಮಿ ಮಠಪತಿ, ಮಲ್ಲಯ್ಯಸ್ವಾಮಿ ಮಠಪತಿ, ಶಂಕ್ರಯ್ಯಸ್ವಾಮಿ, ಬಸಯ್ಯಸ್ವಾಮಿ ಮದ್ರಿ, ಶಾಂತಯ್ಯಸ್ವಾಮಿ ಹಿರೇಮಠ, ರಾಚಯ್ಯಸ್ವಾಮಿ ಹಿರೇಮಠ,ಸಾರಂಗಯ್ಯಸ್ವಾಮಿ ಹಿರೇಮಠ,ವೀರಭದ್ರಯ್ಯಸ್ವಾಮಿ ಹಿರೇಮಠ ತರನಳ್ಳಿ, ಸಿದ್ದಲಿಂಗಯ್ಯಸ್ವಾಮಿ ಜೀವಣಗಿ, ವಿಶ್ವರಾಧ್ಯಸ್ವಾಮಿ ಜೀವಣಗಿ, ಶಂಭುಲಿಂಗಯ್ಯ ಸ್ವಾಮಿ ಹಿರೇಮಠ, ಶಿವಕುಮಾರಸ್ವಾಮಿ ಹಿರೇಮಠ, ಪ್ರಭು ಹಿರೇಮಠ, ವಿರೇಶ ಹಿರೇಮಠ, ಅನಿಲ ಮಠಪತಿ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago