ಶಹಾಬಾದ: ತಾಲೂಕಿನಲ್ಲಿ ಬಾಲ್ಯ ವಿವಾಹ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆದ್ದರಿಂದ ಎಲ್ಲರೂ ಬಾಲ್ಯ ವಿವಾಹ ತಡೆಯಲು ಕೈಜೋಡಿಸಬೇಕಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ಅಭಿಪ್ರಾಯಪಟ್ಟರು.
ಅವರು ನಗರದ ತಹಸೀಲ್ದಾರ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲ್ಬುರ್ಗಿ ಮತ್ತು ಶಿಶು ಅಭಿವೃದ್ಧಿ ಯೋಜನೆ ಶಹಬಾದ ವತಿಯಿಂದ ಆಯೋಜಿಸಲಾದ ಬಾಲ್ಯ ವಿವಾಹ ನಿ?ಧ ಕುರಿತು ನಡೆದ ತಾಲೂಕಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ ಸಂಬಂಧಿಸಿದಂತೆ ಆಗಾಗ ವರದಿಗಳು ಕೇಳಿಬರುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಸಮಾಜದ ಮುಖಂಡರ ವಿಶ್ವಾಸ ಪಡೆದು ಮನವರಿಕೆ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬಾಲ್ಯ ವಿವಾಹ ತಡೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತಾಗಬೇಕು. ಸಮಾಜದ ಮುಖಂಡರ ಜತೆ ಸಮಾಲೋಚನೆ ನಡೆಸಿ, ಬಾಲ್ಯ ವಿವಾಹ ತಡೆಯಲು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಬಾಲ್ಯ ವಿವಾಹ ನಿ?ಧ ಕಾಯ್ದೆಯ ಅನು?ನ ಸಂಬಂಧ ವಸತಿ ನಿಲಯಗಳ ಮೇಲ್ವಿಚಾರಕರಿಗೆ, ದೇವಸ್ಥಾನಗಳ ಪೂಜಾರಿಗಳಿಗೆ, ಮುದ್ರಣಾಲಯಗಳ ಮಾಲೀಕರಿಗೆ, ಕಲ್ಯಾಣ ಮಂಟಪಗಳ ವ್ಯವಸ್ಥಾಪಕರಿಗೆ, ಸಾಮೂಹಿಕ ವಿವಾಹಗಳ ಆಯೋಜಕರಿಗೆ, ಧಾರ್ಮಿಕ ಮುಖಂಡರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಾಗಾರಗಳನ್ನು ಬಹಳ ಪರಿಣಾಮಕಾರಿ ನೀಡಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಬಾಲ್ಯ ವಿವಾಹದ ದು?ರಿಣಾಮಗಳ ಬಗ್ಗೆ ಅರಿವು ಮೂಡಿಸಿ ಬಾಲ್ಯ ವಿವಾಹ ನಿ?ಧ ಕಾಯ್ದೆ ಕುರಿತು ಗೋಡೆಬರಹ, ಭಿತ್ತಿ ಚಿತ್ರಗಳು, ಬೀದಿ ನಾಟಕ ಪ್ರದರ್ಶನಗಳ ಮೂಲಕ ಜಾಗೃತಿ ಮೂಡಿಸಿ ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದರು.
ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಸ್.ಹೊಸಮನಿ, ಪಿಎಸ್‌ಐ ಸುವರ್ಣಾ ಮಲಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ಮೇಲ್ವಿಚಾರಕ ರವಿಕುಮಾರ ಮುತ್ತಗಿ, ಶಕುಂತಲಾ ಸಾಕ್ರೆ, ನೇತ್ರಾವತಿ, ಸಂಗಮ್ಮ, ತಾಪಂ ಅಧಿಕಾರಿ ಹಾಗೂ ಚೈಲ್ಡ್ ಲೈನ್ ಸಂಸ್ಥೆ ಸಿಬ್ಬಂದಿಯವರು ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…