ಬಿಸಿ ಬಿಸಿ ಸುದ್ದಿ

ದೇವಿಕೇರಿ: ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಹಾದೇವ ಗಡದರ ನೇಮಕ

ಸುರಪುರ: ತಾಲೂಕಿನ ದೇವಿಕೇರಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ೨೦೨೨-೨೩ನೇ ಸಾಲಿನಿಂದ ಮೂರು ವರ್ಷಗಳ ಅವಧಿಗೆ ಶಾಲಾ ಮೇಲುಸ್ತುವಾರಿ ಹಾಗೂ ಅಭಿವೃದ್ಧಿ ಸಮಿತಿ(ಎಸ್‌ಡಿಎಂಸಿ) ನೂತನಪದಾಧಿಕಾರಿಗಳ ಆಯ್ಕೆಗಾಗಿ ಪಾಲಕರ ಹಾಗೂ ಪೋಷಕರ ಸಭೆ ನಡೆಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ್ ನಿಂಬೂರ ಮಾತನಾಡಿ ಶಾಲೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಎಸ್‌ಡಿಎಂಸಿ ಸಹಕಾರ ತುಂಬಾ ಮುಖ್ಯವಾಗಿದ್ದು ಸರಕಾರ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು ಇವುಗಳ ಸದುಪಯೋಗಪಡೆದುಕೊಂಡು ನೂತನ ಸಮಿತಿಯ ಪದಾಧಿಕಾರಿಗಳು ತಮ್ಮ ಗ್ರಾಮದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಗಮನಹರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಸಮಿತಿಗೆ ೯ಜನ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು,ನಂತರ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಮಹದೇವ ಗಡದರ, ಹಣಮಂತ ಬಿಲ್ಲವ್(ಉಪಾಧ್ಯಕ್ಷ) ಹಾಗೂ ಸದಸ್ಯರಾಗಿ ಶಂಕರಗೌಡ ಮಾಲಿಪಾಟೀಲ, ದ್ಯಾವಪ್ಪ ಯಾಳವಾರ, ಜರೀನಾ ದೊಡ್ಡಮನಿ, ಮರೆಮ್ಮ ಬೇವಿನಗಿಡ, ವೆಂಕೋಬ ಗೆಜ್ಜೆಲಿ, ಮಾನಪ್ಪಗೌಡ ಮಾಲಿಪಾಟೀಲ ಮತ್ತು ಲಕ್ಷ್ಮೀ ಭಂಡಾರಿ ಅವರನ್ನು ಆಯ್ಕೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಆರ್.ಕೆ.ಕೋಡಿಹಾಳ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

emedialine

Recent Posts

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

10 mins ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

11 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

11 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

11 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

11 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

11 hours ago