ಕಲಬುರಗಿ: ಜಿಲ್ಲಾ ಕಸಾಪ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಜು.೧೨ ರಂದು ನಗರದ ಕನ್ನಡ ಭವನದಲ್ಲಿ ಒಂದು ದಿನದ “ಪತ್ರಕರ್ತ ಸಾಹಿತಿಗಳ ಸಮಾವೇಶ” ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಹಾಗೂ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದರು.
ಹಿರಿಯ ಪತ್ರಕರ್ತ ದಿನೇಶ ಅಮೀನ್‌ಮಟ್ಟು ಸಮಾವೇಶ ಉದ್ಘಾಟನೆ ಮಾಡಲಿದ್ದು, ಶ್ರೀಕಾಂತಾಚಾರ್ಯ ಮಣ್ಣೂರ ಅವರು “ಕಾವ್ಯ ಕಾವಲು” ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯ ವಿಜಯಕುಮಾರ ತೇಗತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಜಿ.ಎಂ.ಸಿದ್ದೇಶ್ವರಪ್ಪ, ಸಾಹಿತಿ ಡಾ.ಸ್ವಾಮಿರಾವ್ ಕುಲಕರ್ಣಿ, ವೈದ್ಯ ಡಾ.ಎಸ್.ಎಸ್.ಗುಬ್ಬಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ದೇವೇಂದ್ರಪ್ಪ ಕಪನೂರ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಧ್ಯಾಹ್ನ ೧೨.೧೫ಕ್ಕೆ ಸ.ದಾ.ಜೋಶಿ ಅಧ್ಯಕ್ಷತೆಯಲ್ಲಿ ಗೋಷ್ಠಿ ನಡೆಯಲಿದೆ. ಶ್ರೀನಿವಾಸ ಸಿರನೂರಕರ್ ಅವರು ‘ಸಂವಹನ ಮಾಧ್ಯಮ ಮತ್ತು ಕನ್ನಡ ಅಭಿವೃದ್ಧಿ’ ಕುರಿತು ಹಾಗೂ ಶೇಷಮೂರ್ತಿ ಅವಧಾನಿ ‘ಪತ್ರಿಕೆ ಮತ್ತು ಸೃಜನಶೀಲ ಸಾಹಿತ್ಯ’ ಕುರಿತು ವಿಚಾರ ಮಂಡಿಸಲಿದ್ದಾರೆ. ರಾಮಕೃಷ್ಣ ಬಡಶೇಷಿ, ಶಂಕರ ಕೋಡ್ಲಾ, ಶಿವರಾಯ ಡೊಡ್ಡಮನಿ, ಸಿದ್ದಣ್ಣ ಮಾಲಗಾರ ಸುರೇಶ ಸಿಂಧೆ, ರಾಜಶೇಖರಯ್ಯ ಹೊಕ್ರಾಣಿಮಠ ಪಾಲ್ಗೊಳ್ಳಲಿದ್ದಾರೆ ಎಂದರು.
ಮಧ್ಯಾಹ್ನ ೨ಕ್ಕೆ ಮಹಿಪಾಲರೆಡ್ಡಿ ಮುನ್ನೂರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಅನೇಕ ಪತ್ರಕರ್ತರು ಕವನ ವಾಚನ ಮಾಡಲಿದ್ದಾರೆ. ಮಧ್ಯಾಹ್ನ ೩ಕ್ಕೆ “ಮಾಧ್ಯಮ-ಸಾಹಿತ್ಯ: ಕುಸಿಯುತ್ತಿರುವ ಮೌಲ್ಯ” ಕುರಿತು ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಂಜೆ ೪ಕ್ಕೆ ಸಮಾರೋಪ ಹಾಗೂ ಸತ್ಕಾರ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಶಿವರಾಜ ಅಂಡಗಿ, ಯಶವಂತರಾಯ ಅಷ್ಠಗಿನಾಗೇಂದ್ರಪ್ಪ ಮಾಡ್ಯಾಳೆ ಮತ್ತಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…