ಬೆಂಗಳೂರು: ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರದ ಇನ್ನೋರ್ವ ಸಚಿವ ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ಜತೆ ದೇವೇಗೌಡರ ನಿವಾಸಕ್ಕೆ ಶ್ರೀಮತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮಾತುಕತೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಹಾಜರಿದ್ದರು.
ಇದೇ ವೇಳೆ ದೇವೇಗೌಡರು, ಶ್ರೀಮತಿ ಚನ್ನಮ್ಮ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಅವರು ಸೇರಿ ಇಡೀ ಕುಟುಂಬದ ಸದಸ್ಯರೆಲ್ಲರೂ ಶ್ರೀಮತಿ ಮುರ್ಮು ಅವರಿಗೆ ಆತಿಥ್ಯ ನೀಡಿ ಆತ್ಮೀಯವಾಗಿ ಗೌರವಿಸಿದರು.
ಶ್ರೀಮತಿ ದ್ರೌಪದಿ ಮುರ್ಮು ಅವರು ದೇವೇಗೌಡರ ನಿವಾಸ ಪ್ರವೇಶಿಸುತಿದ್ದಂತೆ ಎದುರಾದ ತುಳಸಿ ಕಟ್ಟೆಗೆ ನಮಿಸಿದರು. ತಮ್ಮ ಪಾದರಕ್ಷೆಗಳನ್ನು ಕಳಚಿದ ಶ್ರೀಮತಿ ದ್ರೌಪದಿ ಮುರ್ಮು ಅವರು ತುಳಸಿ ಕಟ್ಟೆಗೆ ನಮಿಸಿ ಆರತಿ ಬೆಳಗಿದರು.
ಮಾತುಕತೆ ಮುಗಿಸಿ ತೆರಳಿದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಶ್ರೀಮತಿ ಚನ್ನಮ್ಮ ದೇವೇಗೌಡರು ಕಾರಿನವರೆಗೂ ಬಂದು ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಸೇರಿದಂತೆ ಇಡೀ ಕುಟುಂಬ ಸದಸ್ಯರೆಲ್ಲರೂ ಹಾಜರಿದ್ದರು.
ಮಾತುಕತೆ ನಂತರ ಜೆಡಿಎಸ್ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ದೇವೇಗೌಡರಿಗೆ ಮನವಿ ಮಾಡಿದರು. ಸಂಸದೀಯ ಮಂಡಳಿ ಸಭೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ ದೇವೆಗೌಡರು ತಿಳಿಸಿದರು. ಶೀಘ್ರದಲ್ಲೆ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಅವರು ಹೇಳಿದರು.
ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿರುವಂತೆ ದ್ರೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದ್ದು, ಅವರಿಗೆ ಬೆಂಬಲ ನೀಡುವುದು ನಮಗೆ ಸರಿ ಅನಿಸಿದೆ. ಅದು ಹೆಮ್ಮೆ ಸಹ. ಬಹುತೇಕ ಅವರಿಗೆ ಬೆಂಬಲ ವ್ಯಕ್ತಪಡಿಸುವ ನಿರ್ಧಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಗಲಿದೆ ಎಂದು ಅವರು ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…