ಬಿಸಿ ಬಿಸಿ ಸುದ್ದಿ

ಮನುಷ್ಯ ಬೌದ್ಧಿಕವಾಗಿ ವಿಕಾಸವಾಗಿದ್ದಾನೆಯೇ ಹೊರತು ಮಾನಸಿಕವಾಗಿ ಆಗಿಲ್ಲ

ಕಲಬುರಗಿ: ಇಂದಿನ ವೈಜ್ಞಾನಿಕ ಯುಗದಲ್ಲಿ ಮನುಷ್ಯ ಬೌದ್ಧಿಕವಾಗಿ ವಿಕಾಸವಾಗಿದ್ದಾನೆಯೇ ಹೊರತು ಮಾನಸಿಕವಾಗಿ ಆಗಿಲ್ಲ. ವಿಜ್ಞಾನದಿಂದ ಅನೇಕ ಪ್ರಯೋಜನಗಳಾಗಿದ್ದರೂ ಸಹ ಮನುಷ್ಯ ಮಾತ್ರ ತನ್ನ ತನದಿಂದ ಹೊರಬಂದಿಲ್ಲ. ಹಾಗಾಗಿ, ಮಾನಸಿಕ ಬದಲಾವಣೆಯಿಂದ ಮಾತ್ರ ಶಾಂತಿ ಮತ್ತು ನೆಮ್ಮದಿಯ ಬದುಕು ಕಾಣಲು ಸಾಧ್ಯವಾಗುತ್ತದೆ ಎಂದು ಡಾ.ಸಿ.ವಿ.ರಾಮನ್ ಪ್ರಶಸ್ತಿ ಪುರಸ್ಕೃತರೂ ಆದ ವಿಜ್ಞಾನಿ ಡಾ.ಎಂ.ಎಸ್.ಜೋಗದ ಅಭಿಪ್ರಾಯಪಟ್ಟರು.

ನಗರದ ಎ.ಕೆ.ಆರ್.ದೇವಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತಿಥಿಯಾಗಿ ಆಗಮಿಸಿದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಉನ್ನತಾಧಿಕಾರಿ ಆನಂದ ಬಂದ್ರಕಳ್ಳಿ ಮಾತನಾಡಿ, ಇಂದಿನ ಸಮಾಜದ ಪ್ರಗತಿಗೆ ಮಾರಕವಾಗಿರುವ ಮೌಢ್ಯ, ಅಂಧಶ್ರದ್ಧೆ, ಅಂಧಾನುಕರಣೆ, ಶೋಷಣೆ ವಿರುದ್ಧ ಇಂದಿನ ಯುವ ಜನತೆ ಧ್ವನಿಯೆತ್ತುವ ಮೂಲಕ ಸಮಾಜದ ಸುಧಾರಣೆಗೆ ಮುಂದಾಗಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಕಾಲ ಕಳೆಯದೆ ತಮ್ಮ ಓದಿನತ್ತ ಗಮನಹರಿಸಬೇಕು. ಜತೆಗೆ ವಿದ್ಯಾರ್ಥಿಗಳು ಸಾಧಿಸುವ ಛಲ ಹೊಂದಿರಬೇಕು. ಸತತವಾದ ಪ್ರಯತ್ನದೊಂದಿಗೆ ನಮ್ಮಲ್ಲಿರುವ ಛಲವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಮಾರ್ಮಿಕವಾಗಿ ಹೇಳಿದರು.

ಹೆಚ್.ಕೆ.ಇ. ಸಂಸ್ಥೆಯ ಡಾ.ಮಾಲಕರೆಡ್ಡಿ ಮೆಡಿಕಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ವಿಜಯಲಕ್ಷ್ಮೀ ಮರಮಕಲ್, ಕಾಲೇಜಿನ ವ್ಯವಸ್ಥಾಪಕ ಎಂ.ವಿ.ಎಸ್.ಸುಬ್ರಹ್ಮಣ್ಯಂ, ಪ್ರಮುಖರಾದ ಪರಮೇಶ್ವರ ಶಟಕಾರ, ಶಿವಾನಂದ ಮಠಪತಿ, ಸಿದ್ಧರಾಮ ಹಂಚನಾಳ, ಶ್ರೀಕಾಂತ ಪಾಟೀಲ ತಿಳಗೂಳ , ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ಪ್ರಭುದೇವ ಯಳವಂತಗಿ, ಎಸ್.ಎಂ.ಪಟ್ಟಣಕರ್ ಇತರರಿದ್ದರು. ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಫರ ದೇಶಮುಖ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕರಾದ ಕಿರಣ ಗೋಡಬಾಲೆ, ಡಾ.ಶಿವರಾಜ ಪಾಟೀಲ ಗೋನಾಲ, ರಾಜಶೇಖರ ಕೋರೆ, ಹೀನಾ ತಬಸ್ಸುಮ್, ವಿಕ್ರಮ ಬಾದ್ರಿ, ಸೌಮ್ಯ ನಟರಾಜ್ ಬಿ. ಇತರರಿದ್ದರು. ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ನೇಮಕಗೊಂಡ ಡಾ.ಅರುಣಕುಮಾರ ಲಗಶೆಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು.

ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago