ಬಿಸಿ ಬಿಸಿ ಸುದ್ದಿ

ಮುಜರಾಯಿ ಇಲಾಖೆಗೆ ಸರ್ಕಾರದಿಂದ ಅತಿಹೆಚ್ಚು ಅನುದಾನ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ದೇವಸ್ಥಾನಗಳ ಅಭಿವೃದ್ದಿಗೆ ಕಳೆದ 10 ವರ್ಷಗಳಲ್ಲೇ ಅತಿಹೆಚ್ಚು ಅನುದಾನವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯಗಳ ಸಮಗ್ರ ಅಭಿವೃದ್ದಿಯ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಜರಾಯಿ ಇಲಾಖೆಗೆ ಬಲ ತುಂಬಿದ್ದಾರೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು  2022 – 23 ರ ಆಯವ್ಯಯದಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ರಾಜ್ಯದ ಹೊರಭಾಗದಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಒಟ್ಟು 421 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ. ಇದರ ಜೊತೆಗೆ ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನಸಭಾ ಕ್ಷೇತ್ರವಾರು ದೇವಸ್ಥಾನಗಳ ಜೀರ್ಣೋದ್ದಾರಕ್ಕಾಗಿ ಇದುವರೆವಿಗೂ (ಜುಲೈ 10, 2022 ರವರೆಗೆ) ಒಟ್ಟು 272 ಕೋಟಿ ರೂಪಾಯಿಗಳ ವಿಶೇಷ ಅನುದಾನ ಒದಗಿಸಿದ್ದು, ಅದರಲ್ಲಿ ಶೇ. 50 ರಷ್ಟನ್ನು (136 ಕೋಟಿ ರೂ) ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಇದರಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೂ ಒಟ್ಟು ರೂ. 693 ಕೋಟಿ ಗಳಷ್ಟು (ಬಜೆಟ್ ಅನುದಾನ 421 ಕೋಟಿ ಹಾಗೂ ವಿಶೇಷ ಅನುದಾನ ರೂ. 272 ಕೋಟಿ) ಬೃಹತ್ ಗಾತ್ರದ ಅನುದಾನ ಒದಗಿಸಲಾಗಿದೆ ಎಂದರು.

ಇದನ್ನೂ ಓದಿ: ಶಹಾಬಾದ್‌: ತಲ್ವಾರ್‌ನಿಂದ ಇರಿದು ಕಾಂಗ್ರೆಸ್ ಮುಖಂಡನ ಹತ್ಯೆ

ಕಳೆದ ಒಂದು ವರ್ಷದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಹಲವಾರು ನೂತನ ಯೋಜನೆಗಳನ್ನ ಘೋಷಣೆ ಮಾಡಿ ಅನುμÁ್ಠನಗೊಳಿಸಲಾಗುತ್ತಿದೆ. ದೈವ ಸಂಕಲ್ಪ (ರೂ. 1140 ಕೋಟಿ ವೆಚ್ಚದಲ್ಲಿ 25 ‘ಎ’ ದರ್ಜೆ ದೇವಾಲಯಗಳ ಸಮಗ್ರ ಅಭಿವೃದ್ದಿ), ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್‍ಮೆಂಟ್ ಸಿಸ್ಟಮ್ ಅಳವಡಿಕೆ, ಕಾಯಕಲ್ಪ (ಮುಜರಾಯಿ ಇಲಾಖೆಯ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ), ಕಾಶಿ ಯಾತ್ರೆಗೆ ಸಹಾಯಧನ, ಕಾಶಿಗೆ ಭಾರತ್ ಗೌರವ್ ಯೋಜನೆಯ ಮೂಲಕ ರೈಲು, ಇಲಾಖೆಯ ನೌಕರರು ಹಾಗೂ ಅರ್ಚಕರುಗಳಿಗೆ ವಿಮಾ ಸೌಲಭ್ಯ, ತಸ್ತಿಕ್ ಹಣ ಹೆಚ್ಚಳದಂತಹ ಯೋಜನೆಗಳಿಗೆ ಮುಖ್ಯಮಂತ್ರಿಗಳು ಅಗತ್ಯ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರಕಾರ ತನ್ನ 5 ವರ್ಷಗಳ ಅಧಿಕಾರದ ಅವಧಿಯಲ್ಲಿ ಮುಜರಾಯಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿರಲಿಲ್ಲ. 5 ವರ್ಷಗಳಲ್ಲಿ ಕೇವಲ 1,289 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದರೆ, ಬಿಜೆಪಿ ಸರಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡುವ ಮೂಲಕ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿದೆ. ಕಾಂಗ್ರೆಸ್ ಮತ್ತು ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ನೂತನ ಯೋಜನೆಗಳ ಘೋಷಣೆಯೇ ಆಗಿರಲಿಲ್ಲ ಎನ್ನುವುದನ್ನ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಾಗಿದೆ ಎಂದರು.

ಇದನ್ನೂ ಓದಿ: ರೋಟರಿ ಸೆಂಟೇನಿಯಲ್‌ ಕ್ಲಬ್‌ ಅಧ್ಯಕ್ಷರಾಗಿ ಸಹಕಾರ ರತ್ನ ಬಿ. ನಾಗರಾಜ್‌ ಅಧಿಕಾರ ಸ್ವೀಕಾರ

ಎಲ್ಲಾ ಪಕ್ಷದವರಿಗೂ ಅನುದಾನ: ಧಾರ್ಮಿಕ ಕೇಂದ್ರಗಳ ಅನುದಾನ ಬಿಡುಗಡೆಯಲ್ಲಿ ಯಾವುದೇ ತಾರತಮ್ಯ ಮಾಡಲಾಗಿಲ್ಲ ಎನ್ನುವುದು ಮತ್ತೊಂದು ವಿಶೇಷ. ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ವಿರೋಧ ಪಕ್ಷದ ಪ್ರಮುಖ ನಾಯಕರು ಹಾಗೂ ಶಾಸಕರುಗಳಿಗೂ ಅನುದಾನ ಹಂಚಿಕೆಯಾಗಿದೆ.  ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸುವ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ಆಯಾ ಕ್ಷೇತ್ರಗಳ ದೇವಸ್ಥಾನಗಳ ಅಭಿವೃದ್ದಿಗಾಗಿ ಬೇಡಿಕೆ ಸಲ್ಲಿಸಿದ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಹಿರಿಯ ನಾಯಕರಿಗೂ ಅನುದಾನ ಹಂಚಿಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಗಳು, ಡಾ. ಯತೀಂದ್ರ ಎಸ್ ಅವರ ಕ್ಷೇತ್ರಕ್ಕೆ 1.50 ಕೋಟಿ ರೂಪಾಯಿಗಳು, ಶ್ರೀಮತಿ ಅನಿತಾ ಕುಮಾರಸ್ವಾಮಿ, ಆರ್ ವಿ ದೇಶಪಾಂಡೆ ಮತ್ತು ಈಶ್ವರ ಖಂಡ್ರೆ ಅವರ ಕ್ಷೇತ್ರಗಳಿಗೆ ತಲಾ 3 ಮೂರು ಕೋಟಿಗಳ ಅನುದಾನ ಹಂಚಿಕೆಯಾಗಲಿದೆ.

ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನು ಅತ್ಯುತ್ತಮವಾಗಿ ಅಭಿವೃದ್ದಿ ಪಡಿಸಿ ಪ್ರಧಾನಮಂತ್ರಿಗಳ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಸಹಕಾರ ನೀಡಿರುವುದರಿಂದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ಕಲಬುರಗಿಗೆ ರಾಜ್ಯ‌ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಸದಸ್ಯರ ಪ್ರವಾಸ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago